Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಹಕಾರ ಚಳವಳಿ ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯವಿದೆ: ಸಿಎಂ

Advertisement
ಸಹಕಾರ ಚಳವಳಿ ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯವಿದೆ: ಸಿಎಂ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಹಕಾರ ಚಳವಳಿ ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯವಿದ್ದು
, ಜವಾಹರಲಾಲ್ ನೆಹರೂ ಅವರ ಜಯಂತಿ ದಿನವೇ 72ನೇ ಸಹಕಾರಿ ಸಪ್ತಾಹದ ಉದ್ಘಾಟನೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷ ಕತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು.

ರಾಜ್ಯ ಮಟ್ಟದ 72 ನೇ ಸಪ್ತಾಹದ ಉದ್ಘಾಟನೆಯನ್ನು ನೆಹರೂ ಜಯಂತಿಯಂದೇ  ದಿನಾಂಕ ನವೆಂಬರ್ 14ರಂದು ಮಾಡಲು ನಿರ್ಧರಿಸಿದ್ದೇವೆ. ಅರಮನೆ ಮೈದಾನದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಸಪ್ತಾಹ ನಡೆಯಲಿದ್ದು ಇದರ ಉದ್ಘಾಟನೆಯನ್ನು ನಾನು ನೆರವೇರಿಸಲಿದ್ದೇನೆ. ಮಂಗಳೂರು, ರಾಯಚೂರು, ಹಾವೇರಿ, ಹೊಸಪೇಟೆ, ಕೊಪ್ಪಳದಲ್ಲಿ ಸಪ್ತಾಹ ನಡೆಯಲಿದ್ದು ಸಮಾರೋಪ ಸಮಾರಂಭ ನವೆಂಬರ್ 20 ರಂದು ಚಾಮರಾಜನಗರದಲ್ಲಿ ನಡೆಯಲಿದೆ. ನಾನು ಸಪ್ತಾಹದ ಉದ್ಘಾಟನೆಯನ್ನೂ ನೆರವೇರಿಸಿ, ಸಮಾರೋಪದಲ್ಲೂ  ಭಾಗವಹಿಸುತ್ತೇನೆ ಎಂದರು.

"ಸಹಕಾರ ರತ್ನ" ಪ್ರಶಸ್ತಿ ಪ್ರದಾನ ಸಮಾರಂಭವೂ ಸಪ್ತಾಹದ ಉದ್ಘಾಟನೆಯ ದಿನವೇ ನಡೆಯಲಿದೆ. ರಾಜ್ಯದ ಎಲ್ಲಾ ಸಹಕಾರಿ ಧುರೀಣರು ನನಗೇ ಜವಾಬ್ದಾರಿ ಕೊಟ್ಟಿದ್ದು ನಾನೇ "ಸಹಕಾರ ರತ್ನ" ಪ್ರಶಸ್ತಿಗೆ ಹೆಸರು ಸೂಚಿಸಲು ಕೋರಿದ್ದಾರೆ. ಸಹಕಾರ ಮಹಾ ಮಂಡಳದ ಅಧ್ಯಕ್ಷರ ಜೊತೆ ಚರ್ಚಿಸಿ ಪ್ರಶಸ್ತಿಗೆ ಉತ್ತಮ ಸಹಕಾರಿಯನ್ನು ಆಯ್ಕೆ ಮಾಡಲಾಗುವುದು ಎಂದರು.

ಹಾಲಿನ ಡೈರಿಗಳನ್ನು ಹಾಲಿನ ಒಕ್ಕೂಟಗಳ ಅಧೀನದಲ್ಲಿ ಮೊದಲ ಬಾರಿಗೆ ತಂದಿದ್ದು ನಾನೇ. ಹೀಗೆ ತರುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟೆ ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

ಸಹಕಾರ ರಾಜ್ಯದ ವ್ಯಾಪ್ತಿಗೆ ಬರುವ ವಿಚಾರ. ಕೇಂದ್ರದ ವ್ಯಾಪ್ತಿಗೆ ಬರುವ ವಿಚಾರ ಅಲ್ಲ ಎಂದು ಅಭಿಪ್ರಾಯಪಟ್ಟರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ