Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕರ್ನಾಟಕ, ಆಂದ್ರ, ತೆಲಂಗಾಣ ರಾಜ್ಯಗಳ 2ನೇ ಬೆಳೆಗೂ ನೀರು ಲಭ್ಯ-ಸಿಎಂ ಭರವಸೆ

ಚಂದ್ರವಳ್ಳಿ ನ್ಯೂಸ್, ಹೊಸಪೇಟೆ:
ಒಂದೇ ವಾರದಲ್ಲಿ ತುಂಗಭದ್ರ ಜಲಾಶಯಕ್ಕೆ ಗೇಟ್ ಅಳವಡಿಸಿ 20 ಟಿಎಂಸಿ ನೀರು  ಉಳಿಸಿದ ತಜ್ಞರಿಗೆ  ರೈತರ ಪರವಾಗಿ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎರಡನೇ ಬೆಳೆಗೂ ನೀರು ಸಿಗತ್ತದೆ ಎಂದು ರೈತ ಕುಲಕ್ಕೆ  ಭರವಸೆ ನೀಡಿದರು.

ಮೈತುಂಬಿಕೊಂಡಿರುವ ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿ, ಕೊಚ್ಚಿ ಹೋಗಿದ್ದ ಕ್ರೆಸ್ಟ್ ಗೇಟನ್ನು ಅತ್ಯಂತ ತುರ್ತಾಗಿ ಅಳವಡಿಸಿದ ಎಂಜಿನಿಯರ್ ಮತ್ತು ಸಿಬ್ಬಂದಿಗೆ ಪ್ರಶಂಸಾ ಪತ್ರ ನೀಡಿ ಸನ್ಮಾನಿಸಿ ಮಾತನಾಡಿದರು.

 ಗೇಟ್ ಮುರಿದಾಗ ನನ್ನ ರೈತರು ಆತಂಕದಲ್ಲಿದ್ದರು. ಜಲ ಸಂಪನ್ಮೂಲ ಸಚಿವರು ಮತ್ತು ನಾನು ಚರ್ಚಿಸಿ ತುರ್ತಿನ ಕ್ರಮಕ್ಕೆ ಮುಂದಾದೆವು. ನಮ್ಮ ಸೂಚನೆಯಂತೆ ಒಂದೇ ವಾರದಲ್ಲಿ ಗೇಟ್ ಅಳವಡಿಸಿ 20 ಟಿಎಂಸಿ ನೀರನ್ನು  ಉಳಿಸಿದ ತಜ್ಞ ಕನ್ನಯ್ಯ ನಾಯ್ಡು ಮತ್ತು ಎಂಜಿನಿಯರ್ ಸಿಬ್ಬಂದಿಗೆ ಸರ್ಕಾರ ಮತ್ತು ರೈತರ ಪರವಾಗಿ ಮುಖ್ಯಮಂತ್ರಿಗಳು ಧನ್ಯವಾದ ಅರ್ಪಿಸಿದರು.

 ಕರ್ನಾಟಕಕ್ಕೆ ಎಡ ಮತ್ತು ಬಲ ದಂಡೆ ಸೇರಿ 9,26,438 ಎಕರೆಗೆ, ಆಂದ್ರಪ್ರದೇಶದ 625097 ಎಕರೆ, ತೆಲಂಗಾಣದ 87,000 ಎಕರೆಗೆ ನೀರಾವರಿ ಸೌಲಭ್ಯ ಕಲ್ಪಿಸುವ ತುಂಗಭದ್ರಾ ಅಣೆಕಟ್ಟು ಎರಡನೇ ಬಾರಿ ತುಂಬಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಸಿಎಂ ಎರಡನೇ ಬೆಳೆಗೂ ರೈತರಿಗೆ ನೀರು ಸಿಗಲಿದೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.‌

 ವಿರೋಧ ಪಕ್ಷದ ಮಾತುಗಳಿಗೆ ಕಿವಿಕೊಡಬೇಡಿ. ಮೊದಲು ದಿನಕ್ಕೊಂದು ಸುಳ್ಳು ಹೇಳುತ್ತಿದ್ದ BJP ಈಗ ಗಳಿಗೆಗೊಂದು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುತ್ತಿದೆ. BJP ನಿಮ್ಮನ್ನು ಯಾಮಾರಿಸಿ ದಿಕ್ಕು ತಪ್ಪಿಸಲು ಸಾಧ್ಯವಿಲ್ಲ ಎನ್ನುವ ನಂಬಿಕೆ. ಏಕೆಂದರೆ ಕೊಪ್ಪಳ, ಬಳ್ಳಾರಿ, ವಿಜಯನಗರದ ಜನತೆ ಏನು ಅಂತ ನನ್ನ ಹೃದಯಕ್ಕೆ ಚನ್ನಾಗಿ ಗೊತ್ತು. ಬಿಜೆಪಿ ಮಾತನ್ನು ನಂಬಬೇಡಿ. ಎರಡೂ ಬೆಳೆಗೂ ನೀರು ಕೊಡುತ್ತೇವೆ ಎಂದು ಪುನರುಚ್ಚರಿಸಿದರು.

 ಕಲ್ಯಾಣ ಕರ್ನಾಟಕದ ಎಲ್ಲಾ ಲೋಕಸಭಾ ಸ್ಥಾನಗಳನ್ನು ಕಾಂಗ್ರೆಸ್ ಗೆ ಕೊಟ್ಟಿದ್ದೀರಿ. ನಾವು ಕಲ್ಯಾಣ ಕರ್ನಾಟಕದಲ್ಲಿ ವಿಶೇಷ ಕ್ಯಾಬಿನೆಟ್ ನಡೆಸಿ 46 ವಿಷಯಗಳನ್ನು, ಕಾರ್ಯಕ್ರಮಗಳನ್ನು ಕಲ್ಯಾಣ ಕರ್ನಾಟಕದ ಅಭಿವಧ್ಧಿಗಾಗಿ ಘೋಷಿಸಿದ್ದೇವೆ ಎಂದರು.

 ಕಲ್ಯಾಣ ಕರ್ನಾಟಕಕ್ಕೆ 371J ಜಾರಿ ಮಾಡಲು ಕೇಂದ್ರದಲ್ಲಿದ್ದ ಬಿಜೆಪಿ ಸರ್ಕಾರ ವಿರೋಧಿಸಿತ್ತು. ಆದರೆ ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಸೋನಿಯಾಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಪರಿಣಾಮದಿಂದ 371 ಜೆ ಜಾರಿಯಾಯಿತು ಎಂದರು.

ಪ್ರಾದೇಶಿಕ ಅಸಮಾಮತೆ ಅಧ್ಯಯನಕ್ಕೆ ಗೋವಿಂದರಾವ್ ಅವರ ಸಮಿತಿ ರಚಿಸಿದ್ದೇವೆ. ಸಮಿತಿ ವರದಿ ನೀಡುತ್ತಿದ್ದಂತೆ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ಹೊಸ ನೀಲನಕ್ಷೆ ರಚಿಸುತ್ತೇವೆ. ಈಗಾಗಲೇ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ 5000 ಕೋಟಿ ಘೋಷಿಸಿ ಆಗಿದೆ. ಕೇಂದ್ರ ಸರ್ಕಾರ ಕೂಡ 5000 ಕೋಟಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದೇವೆ. ಕೇಂದ್ರ ಕೊಡುತ್ತೋ ಇಲ್ವೋ ನೀವೇ ನೋಡಿ ಎಂದರು.

ಕೊಟ್ಟ ಭರವಸೆ ಈಡೇರಿದ ಸಂಭ್ರಮ- ಅಣೆಕಟ್ಟೆಯ 19ನೇ ಕ್ರೆಸ್ಟ್ ಗೇಟ್ ಕೊಚ್ವಿಕೊಂಡು ಹೋಗಿ ಅಪಾರ ಪ್ರಮಾಣದ ನೀರು ಹರಿದು ಹೋಗಿದ್ದನ್ನು ಪರಿಶೀಲಿಸಲು ಆಗಸ್ಟ್ 13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಣೆಕಟ್ಟೆಗೆ ಆಗಮಿಸಿದ್ದರು. ತುಂಗಭದ್ರಾ ಅಣೆಕಟ್ಟು ಮತ್ತೆ ಮೈ ತುಂಬಿಕೊಳ್ಳುತ್ತದೆ. ಆಗ ನಾನೇ ಬಂದು ಬಾಗಿನ‌ಅರ್ಪಿಸುತ್ತೇನೆ ಎಂದು ಆಗಸ್ಟ್ 13 ರಂದು ಹೇಳಿದ್ದರು.

ಮುಖ್ಯಮಂತ್ರಿಗಳ ಮಾತು ಮತ್ತು ಆಶಯ ಈಡೇರಿದ ಸಂಭ್ರಮದ ಕ್ಷಣಕ್ಕೆ ಇಡೀ ರಾಜ್ಯ ಇಂದು ಸಾಕ್ಷಿಯಾಯಿತು. ಜಲ ಸಂಪನ್ಮೂಲ ಸಚಿವರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿರಾಜ್ ತಂಗಡಗಿ, ಸಚಿವರುಗಳಾದ ಬೋಸ್ ರಾಜ್, ಶರಣಪ್ರಕಾಶ್ ಪಾಟೀಲ್, ಕೊಪ್ಪಳ ಸಂಸದರಾದ ರಾಜಶೇಖರ್ ಹಿಟ್ನಾಳ್, ಬಳ್ಳಾರಿ ಸಂಸದರಾದ ಈ.ತುಕಾರಾಮ್ ಹಾಗೂ ಎರಡೂ ಜಿಲ್ಲೆಗಳ ಶಾಸಕರುಗಳು, ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ