ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗaಳೂರಿನ ಅರಮನೆ ಮೈದಾನದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ವೃತ್ತಿ ತರಬೇತಿ ಹಾಗೂ ಕೌಶಲ್ಯಾಭಿವೃದ್ಧಿ ನಿಗಮದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ‘ವಿದೇಶದಲ್ಲಿ ಅಧ್ಯಯನ - 2026’ ಬೃಹತ್ ಮಾರ್ಗದರ್ಶನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು
ರಾಜ್ಯದ ವಿದ್ಯಾರ್ಥಿಗಳಿಗೆ ವಿದೇಶಗಳ ಅತ್ಯಂತ ಪ್ರತಿಷ್ಠಿತ: ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಸೂಕ್ತ ಮಾರ್ಗದರ್ಶನ, ಅಧಿಕೃತ ಮಾಹಿತಿ ಮತ್ತು ಅಗತ್ಯ ನೆರವು ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಉದ್ಘಾಟನೆಯ ಬಳಿಕ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು, ಅವರ ಪೋಷಕರು ಹಾಗೂ ವಿವಿಧ ವಿದೇಶಿ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳೊಂದಿಗೆ ನೇರ ಸಂವಾದ ನಡೆಸಿ ಅಭಿಪ್ರಾಯ ಹಂಚಿಕೊಂಡರು.
ಉನ್ನತ ಶಿಕ್ಷಣಕ್ಕೆ ಮಾರ್ಗದರ್ಶನ: ವಿದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಲು ಬಯಸುವ ರಾಜ್ಯದ ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲವಿಲ್ಲದೆ ಸರಿಯಾದ ವೇದಿಕೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಈ ಮೇಳವನ್ನು ಆಯೋಜಿಸಲಾಗಿದೆ.
ಸಂವಾದ ಮತ್ತು ಸಂಕಲ್ಪ: ವಿದ್ಯಾರ್ಥಿಗಳು ಹಾಗೂ ವಿದೇಶಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನೇರ ಸಂವಾದ ನಡೆಸಿದ ಮುಖ್ಯಮಂತ್ರಿಗಳು, ಯುವಜನತೆಯ ವಿದೇಶಿ ಶಿಕ್ಷಣದ ಕನಸುಗಳಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದರು.
ಪ್ರಮುಖ ಗಣ್ಯರ ಉಪಸ್ಥಿತಿ: ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಆಸ್ಟ್ರೇಲಿಯಾದ ಕಾನ್ಸಲೇಟ್ ಜನರಲ್‌ಸ್ಟೀವೆನ್‌ಕನೋಲಿ, ಕ್ವೀನ್ಸ್‌ಲ್ಯಾಂಡ್‌ವಿಶ್ವವಿದ್ಯಾಲಯದ ನಿರ್ದೇಶಕ ಜೋಗ್ವಾನ್ ಕ್ಲೈನ್ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಶಿವಕಾಂತಮ್ಮ (ಕಾಂತಾ) ನಾಯಕ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.




