Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪರಾಧಿಗಳಿಗೆ ಕಾನೂನಿನ ಭಯದ ವಾತಾವರಣ ನಿರ್ಮಾಣ ಆಗಬೇಕು-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜನ ಸಾಮಾನ್ಯರಲ್ಲಿ ಭಯಮುಕ್ತ ವಾತಾವರಣ ನಿರ್ಮಿಸಬೇಕು ಅದೇ ರೀತಿ ಅಪರಾಧಿಗಳಲ್ಲಿ ಭಯದ ವಾತಾವರಣ ನಿರ್ಮಾಣ ಮಾಡುವ ಹೊಣೆಗಾರಿಕೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು ಉದ್ಘಾಟಿಸಿದ ಬಳಿಕ ಪುಲಕೇಶಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಸಮುಚ್ಛಯಗಳ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಸಾರ್ವಜನಿಕರ ಆಸ್ತಿಪಾಸ್ತಿ, ಮಾನ-ಪ್ರಾಣ ರಕ್ಷಿಸುವ ಹೊಣೆಗಾರಿಕೆ ಪೊಲೀಸರ ಮೇಲಿದೆ. ಅಲ್ಲದೆ ಪ್ರತಿಯೊಬ್ಬರ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ ಎಂದು ಸಿಎಂ ತಿಳಿಸಿದರು. ಪೊಲೀಸ್ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸಿದ್ಧವಿದೆ. ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಪ್ರಮಾಣ ಕಡಿಮೆಯಾಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ, ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ ಕಾನೂನಿನಿಂದ ತಪ್ಪಿಸಿಕೊಳ್ಳುವ ಅವಕಾಶ ಸಿಗಬಾರದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದರು.

ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ಇದಕ್ಕೆ ಅವಕಾಶ ನೀಡಬಾರದು ಎಂದು ಸಿಎಂ ಕಿವಿ ಮಾತು ಹೇಳಿದರು.
ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಿ
, ಠಾಣೆಗಳಿಗೆ ಬರುವವರನ್ನು ಉತ್ತಮ ರೀತಿಯಲ್ಲಿ ನಡೆಸಿಕೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದರು.

ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಹೊಂದಾಣಿಕೆ ಬೇಡ:
ರಿಯಲ್ ಎಸ್ಟೇಟ್‌ಮಾಫಿಯಾ ಜೊತೆ ಪೊಲೀಸರು ಯಾವುದೇ ಕಾರಣಕ್ಕೂ ಕೈ ಜೋಡಿಸಬಾರದು. ರಿಯಲ್ ಎಸ್ಟೇಟ್ ಮಾಫಿಯಾಗಳಿಗೆ ಕೈಜೋಡಿಸಿ ಸರ್ಕಾರ ಸಹಿಸುವುದಿಲ್ಲ ಎಂದು ಸಿದ್ದರಾಮಯ್ಯ ಎಚ್ಚರಿಸಿದರು.


ಪೊಲೀಸ್ ಇಲಾಖೆಯಲ್ಲಿ ಕಾನ್ಸ್‌ಟೇಬಲ್‌ಗಳು, ಎಸ್ಐಗಳು, ಇನ್ಸ್‌ಪೆಕ್ಟರ್​​ಗಳ ಮೇಲೆ ಹೆಚ್ಚಿನ ಕೆಲಸದ ಒತ್ತಡವಿರುತ್ತದೆ. ಅವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳು ಇದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ