Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೆಂಪೇಗೌಡರ ರಾಜಧಾನಿಯಾಗಿದ್ದ ಮಾಗಡಿ ಅಭಿವೃದ್ಧಿಗೆ ಸಹಕಾರ- ಸಿಎಂ ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಮಾಗಡಿ:
ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ  ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
 

ಅವರು ಇಂದು ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ನೂತನ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.

 ಬೆಂಗಳೂರಿನ ಹೊರವಲಯದಲ್ಲಿರುವ ಮಾಗಡಿ ಬಹಳ ಪ್ರಮುಖ ಪಟ್ಟಣ. ಕೆಂಪೇಗೌಡರ ರಾಜಧಾನಿಯಾಗಿದ್ದ ನಗರ. ಮಾಗಡಿ ಅಭಿವೃದ್ಧಿಯಾಗಬೇಕು ಎನ್ನುವ ವಾದದಲ್ಲಿ ನನ್ನ ಸಹಮತವೂ ಇದೆ ಎಂದರು.

ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಚರಣೆಗೆ ತಂದು ಪ್ರಾಧಿಕಾರವನ್ನೂ ರಚನೆ ಮಾಡಲಾಯಿತು.  ಇದರ ಉದ್ದೇಶ ಕೆಂಪೇಗೌಡರನ್ನು ಎಲ್ಲರೂ ಸ್ಮರಿಸಬೇಕು ಎನ್ನುವುದಾಗಿತ್ತು. ಒಕ್ಕಲಿಗರ ನಾಯಕರು ಎಂದು ಹೇಳಿಕೊಳ್ಳುವವರು ಇದನ್ನು ಮಾಡಲಿಲ್ಲ.  ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದ್ದು, ಅವರ ಜಯಂತ್ಯೋತ್ಸವವನ್ನು ಆಚರಿಸುವುದು ಸರ್ಕಾರದ ಕರ್ತವ್ಯ ಎಂದು ಭಾವಿಸಿ 2016-17 ರಲ್ಲಿ ಆಚರಣೆಗೆ ತಂದಿದ್ದ ನಮ್ಮ ಸರ್ಕಾರ ಎಂದರು.   

ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ-ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಮೇಲೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದಾರೆ. ಹಾಗಾದರೆ ಅಭಿವೃದ್ಧಿ ಕೆಲಸಗಳಿಗೆ 120 ಕೋಟಿ ರೂ.ಗಳನ್ನು ಅನುದಾನವನ್ನು ಏಕೆ ಮೀಸಲಿಡಲಾಗಿದೆ ಎಂದು ಪ್ರಶ್ನಿಸಿದರು.

ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಾರೆ.  ಹಾಲಿಗೆ ಬೆಲೆಏರಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದರು, ರೈತರಿಗೆ ಹಣ ಸೇರಬೇಡವೇ? ರೈತರಿಗೆ ಇದನ್ನು ಪ್ರಶ್ನಿಸಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು. 

ಹಾಲಿಗೆ 5.೦೦ ರೂ.ಗಳ ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ಏನೂ ಮಾಡದೇ ರೈತರ ಮಕ್ಕಳು ,ಮಣ್ಣಿನ ಮಕ್ಕಳು ಎನ್ನುತ್ತಾರೆ. ಅಭಿವೃದ್ಧಿಗಾಗಿ ಮೀಸಲಿಡಲಾಗಿದೆ ಎಂದರು. 

ಮೋದಿಯವರ 10 ವರ್ಷದ ಅವಧಿಯಲ್ಲಿ ದೇಶದ ಸಾಲ 182 ಲಕ್ಷ ಕೋಟಿಗೆ ತಲುಪಿದೆ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ರಾಜ್ಯದ ಸುಮಾರು 1.20 ಲಕ್ಷ ಕುಟುಂಬಗಳಿಗೆ ವಾರ್ಷಿಕವಾಗಿ 50 ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ಗ್ಯಾರಂಟಿಗಳ ಮೂಲಕ ಒದಗಿಸಲಾಗುತ್ತಿದೆ.  ದೇಶದ ಸ್ವಾತಂತ್ರ್ಯಕ್ಕೆ ದುಡಿದ ನೆಹರೂ ರವರು ಹಾಗೂ ಇಂದಿರಾಗಾಂಧಿ ಸೇರಿದಂತೆ ಹಲವು  ನಾಯಕರು ದೇಶಕ್ಕಾಗಿ ದುಡಿದಿದ್ದಾರೆ. ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ  ಎಂದು ಈ ಬಾರಿ ಮೋದಿಯವರಿಗ ವೋಟು ನೀಡಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಭಾರತದ  ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ. ಹಿಂದೆ ಸಾಲದ ಮೊತ್ತ 53.11 ಲಕ್ಷ ಕೋಟಿ ಇದ್ದ ಸಾಲದ ಮೊತ್ತ ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರೂ.ಗೆ ತಲುಪಿದೆ. ಗರೀಬಿ ಹಠಾವೋ, ಆಹಾರಸ್ವಾವಲಂಬನೆಯಂತ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಿದೆ ಎಂದರು. ಎಸ್ ಸಿ ಎಸ್ ಪಿ / ಟಿಎಸ್ ಪಿ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ-ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಅನುದಾನವನ್ನು ಬೇರೆಯವರಿಗೆ ನೀಡಲಾಗಿದೆ ಎಂದು ಸುಳ್ಳು ನುಡಿದರು.

ಆದರೆ 89.62 ಕೋಟಿ ಮೊತ್ತದ ಅವ್ಯವಹಾರವಾಗಿದ್ದು, ಅದರಲ್ಲಿ 56 ಕೋಟಿ ವಸೂಲು ಮಾಡಲಾಗಿದೆ. ಆದರೂ ಅಭಿವೃದ್ಧಿ ನಿಗಮಕ್ಕೆ ಈ ಮುಂಚೆ ನಿಗದಿಪಡಿಸಿರುವಂತೆ ಅನುದಾನವನ್ನು ನೀಡಿ, ಸಮುದಾಯದ ಅಭಿವೃದ್ಧಿಗೆ ಬಳಸಲಾಗುವುದು. ಎಸ್ ಸಿ ಎಸ್ ಪಿ / ಟಿಎಸ್ ಪಿ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಈ ರೀತಿಯ ಜನಪರ ಕಾನೂನು ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯದಲ್ಲಿ ಜಾರಿಯಾಗಿಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರವನ್ನು ಮೂದಲಿಸಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ  ಜನಸಂಖ್ಯೆಗೆ ಅನುಗುಣವಾಗಿ ಅವರ ಅಭಿವೃದ್ಧೀಗೆ ಪ್ರತ್ಯೇಕ ಅನುದಾನ ನೀಡುವ ಕಾನೂನು ಕಾಂಗ್ರೆಸ್ ಸರ್ಕಾರ ಎಂದರು. ಮೋದಿಯವರು ಬಂಡವಾಳಶಾಹಿಗಳ ಪರ-ಬಿಜೆಪಿಯವರ ಬಡವರ ಹಾಗೂ ರೈತರ ವಿರೋಧಿಗಳಾಗಿದ್ದಾರೆ. ಬಿಜೆಪಿಯವರು ಕೈಗಾರಿಕೋದ್ಯಮಿಗಳ 16 ಲಕ್ಷ ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಿದರು. ಮೋದಿಯವರು ಬಂಡವಾಳಶಾಹಿಗಳ ಪರವಾಗಿದ್ದಾರೆ. ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಹಳಷ್ಟು ಹಗರಣಗಳು ನಡೆದಿವೆ.  ಸುಳ್ಳು ಹೇಳುವ ಬಿಜೆಪಿ ಪಕ್ಷವನ್ನು ನಂಬಬೇಡಿ ಎಂದು ಜನರಿಗೆ ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಸದಾ ಬಡಜನರ ಪರವಾಗಿದೆ. ಶಕ್ತಿ ಯೋಜನೆಯಡಿ 3.50 ಕೋಟಿ ಜನ ಉಚಿತವಾಗಿ ಪ್ರಯಾಣಿಸಿದ್ದು, ಇದುವರೆಗೆ 287 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ. ನಾನು ಬಡವರ ಏಳಿಗೆಗಾಗಿಯೇ ಅಧಿಕಾರದಲ್ಲಿರುವುದು ಎಂದು ತಿಳಿಸಿರುವುದು. ಸರ್ಕಾರ ಹಾಲು ಉತ್ಪಾದಕರ , ದಲಿತರ, ಅಲ್ಪಸಂಖ್ಯಾತರ, ಬಡವರ ಪರವಾಗಿರಲಿದೆ. ನನ್ನ ಜೀವನ ತೆರೆದ ಪುಸ್ತಕವಿದ್ದಂತೆ.ರಾಜ್ಯದ ಜನರ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು.  

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ-ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್ ದೇವಸ್ಥಾನ ಲೋಕಾರ್ಪಣೆ ಹಾಗೂ ಮಲ್ಟಿಜಿಮ್ ಉದ್ಘಾಟನೆಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ಕಾಟಿಹಳ್ಳಿ ಕರಿಯಪ್ಪ ಅವಿರೋಧ ಆಯ್ಕೆ ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಮತ್ತೆ ಇಡಿ ಶಾಕ್, ವಿಚಾರಣೆಗೆ ಹಾಜರ್‘ಭಾರತ್ ಜೋಡೋ ಯಾತ್ರೆ’ಗೆ ೪ ವರ್ಷ: ಸಮಗ್ರ ಆಡಳಿತ ಮಾದರಿಗೆ ಯಾತ್ರೆಯೇ ಸ್ಫೂರ್ತಿ –ಸಿಎಂ ಡಿ.ಕೆ. ಶಿವಕುಮಾರ್ಭವಿಷ್ಯದ ತಂತ್ರಜ್ಞಾನಕ್ಕೆ ಬೆಂಗಳೂರು ಹೆಬ್ಬಾಗಿಲು -ಸಿಎಂ ಡಿ.ಕೆ. ಶಿವಕುಮಾರ್ಸೈನ್ಸ್ ಅಂಡ್ ಮ್ಯಾನೇಜ್‌ಮೆಂಟ್ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಅಮೆರಿಕದ ಅಕ್ಕ ಸಮ್ಮೇಳನದಲ್ಲಿ ಭಾರತದ ಪ್ರಗತಿ ಬಿಚ್ಚಿಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೆಚ್ಚಿದ್ದ ನಿಂಗಮ್ಮನ ಅಂಗಡಿ ತೆರವಿಗೆ ಜಿಬಿಎ ನೋಟಿಸ್: ಆರ್. ಅಶೋಕ್ ಕಿಡಿ ಭಾರತದ ಕೀರ್ತಿ ಪತಾಕೆ ಹಾರಿಸಿದ ಸಾತ್ವಿಕ್-ಚಿರಾಗ್ ಜೋಡಿಗೆ ಅಭಿನಂದನೆಗಳ ಮಹಾಪೂರ