Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಇಲ್ಲ-ಸಿಎಂ ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಾಮಾಜಿಕ ನ್ಯಾಯ ಸುಮ್ಮ ಸುಮ್ಮನೆ ಬರುವುದಿಲ್ಲ. ಇಂಥಾ ತೀರ್ಮಾನ ಮಾಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಒಳಮೀಸಲಾತಿ ಕುರಿತ ಸಚಿವ ಸಂಪುಟದ ನಿರ್ಣಯಕ್ಕಾಗಿ ತಮ್ಮನ್ನು ಅಭಿನಂದಿಸಿದ ಮಾದಿಗ ಸಮುದಾಯದ ರಾಜ್ಯ ಮುಖಂಡರು
, ಒಳಮೀಸಲಾತಿ ಹೋರಾಟದ ನಾಯಕರುಪದಾಧಿಕಾರಿಗಳು ಮತ್ತು ಸಮುದಾಯದ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.

ಒಳಮೀಸಲಾತಿಗಾಗಿ ಮಾದಿಗ ಸಮುದಾಯ ದಶಕಗಳಿಂದ ಹೋರಾಟ ನಡೆಸಿದೆ. ಈಗ ಸುಪ್ರೀಂಕೋರ್ಟ್ ಕೂಡ ತೀರ್ಪು ನೀಡಿದೆ. ನಾವು ಜಾರಿ ಮಾಡಲೇಬೇಕಿದೆ. 101 ಪರಿಶಿಷ್ಟ ಜಾತಿಗಳಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮುಖ್ಯ. ಎಲ್ಲರನ್ನೂ ಸಮಾಧಾನ ಮಾಡುವುದು ಸಾಧ್ಯವಿಲ್ಲದಿದ್ದರೂ, ಶೇ.90 ರಷ್ಟು ಸಮುದಾಯಗಳಿಗೆ ಸಮಾಧಾನ‌ಆಗುವ ತೀರ್ಮಾನ ತೆಗೆದುಕೊಳ್ಳಬೇಕಿದೆ. ಇದನ್ನು ನಮ್ಮ‌ಸರ್ಕಾರ ಮಾಡಲಿದೆ ಎಂದು ಅವರು ಹೇಳಿದರು.

ಗೃಹ ಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ನಡೆದ ದಲಿತ ಶಾಸಕರ ಸಭೆಯಲ್ಲಿ, "ಒಳ ಮೀಸಲಾತಿಗೆ ತಮ್ಮ ವಿರೋಧ ಇಲ್ಲ" ಎನ್ನುವ ನಿರ್ಣಯ ಮಾಡಿದ್ದಾಗಿದೆ. ಹೀಗಾಗಿ ಎಲ್ಲರೂ ಒಳಮೀಸಲಾತಿ ಪರವಾಗಿದ್ದಾರೆ. ತೆಲಂಗಾಣ ಸರ್ಕಾರ ಈಗಾಗಲೇ ಒಳಮೀಸಲಾತಿ ಜಾರಿ ಸಂಬಂಧ ಒಂದು ಆಯೋಗ ರಚನೆ ಮಾಡಿದೆ. ನಾನು ತೆಲಂಗಾಣ ಸಿಎಂ ಜೊತೆಗೂ ಇತ್ತೀಚಿಗೆ ಮೈಸೂರಿನಲ್ಲಿ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಹರಿಯಾಣದಲ್ಲೂ ಕ್ಯಾಬಿನೆಟ್ ನಿರ್ಣಯ ಆಗಿದೆ. ಆದರೆ ಆದೇಶ ಆಗಿಲ್ಲ. ನಮ್ಮ ಕ್ಯಾಬಿನೆಟ್ ನಲ್ಲೂ ಹಿಂದೊಮ್ಮೆ ಅನೌಪಚಾರಿಕ ಚರ್ಚೆ ಮಾಡಿದ್ದೆ.

ನಿನ್ನೆಯ ಕ್ಯಾಬಿನೆಟ್ ನಲ್ಲಿ ಸಚಿವರಾದ ಹೆಚ್.ಸಿ. ಮಹದೇವಪ್ಪ ಅವರು ಒಳಮೀಸಲಾತಿ ವಿಚಾರ ಪ್ರಸ್ತಾಪಿಸಿದರು. ಸಚಿವರಾದ ಪ್ರಿಯಾಂಕ್ ಖರ್ಗೆ, ತಿಮ್ಮಾಪುರ, ಮುನಿಯಪ್ಪ ಅವರು ಎಲ್ಲರೂ ಮಾತನಾಡಿದರು. ಎಲ್ಲರೂ ಒಳ ಮೀಸಲಾತಿಗೆ ಒಪ್ಪಿಕೊಂಡರು. ಯಾರದ್ದೂ ವಿರೋಧ ಇರಲಿಲ್ಲ. ಆದರೆ ಸೂಕ್ತ ಡಾಟಾ ಅಗತ್ಯವಿದೆ ಎನ್ನುವ ಸಂಗತಿ ಕೂಡ ಚರ್ಚೆಗೆ ಬಂದಿದೆ. ಹೀಗಾಗಿ ಆಯೋಗ ರಚನೆ ಮಾಡಿದ್ದೇವೆ.

ಆಯೋಗ ಎಲ್ಲ ವರದಿಗಳನ್ನೂ ಅಧ್ಯಯನ ಮಾಡಿ ಅಗತ್ಯ ಅಂಕಿ ಅಂಶಗಳ ಸಮೇತ ವರದಿ ನೀಡುತ್ತದೆ. ವರದಿ ಬರುವವರೆಗೂ ಹೊಸದಾಗಿ ಯಾವ ನೇಮಕಾತಿ ನೋಟಿಫಿಕೇಶನ್ ಹೊರಡಿಸುವುದು ಬೇಡ ಎನ್ನುವ ನಿರ್ಣಯ ಆಗಿದೆ. ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಸಮುದಾಯಗಳನ್ನು ಪರಸ್ಪರ ಸುಳ್ಳುಗಳ ಮೂಲಕ ಎತ್ತಿಕಟ್ಟುವ ಬಿಜೆಪಿ ಕೇಂದ್ರದಲ್ಲಿ ಏಕೆ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆ ಜಾರಿ ಮಾಡಿಲ್ಲ? ಬಿಜೆಪಿ ಆಡಳಿತದಲ್ಲಿರುವ ಯಾವ ರಾಜ್ಯಗಳಲ್ಲೂ ನಾವು ಜಾರಿ ಮಾಡಿದ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆಯನ್ನು ಅವರೇಕೆ ಮಾಡಲಿಲ್ಲ ಹೇಳಿ. ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ. ಬಿಜೆಪಿಯ ಯಾವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ. ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಮ್ಮ ರಾಜ್ಯ ಮಾತ್ರ. ಇದು ನನ್ನ ಕಮಿಟ್ ಮೆಂಟ್. ರಾಜಕಾರಣಕ್ಕಾಗಿ ಇದೆಲ್ಲಾ ಮಾಡಿದ್ದಲ್ಲ. ಇದರ ಮುಂದುವರೆದ ಭಾಗವಾಗಿಯೇ ಒಳಮೀಸಲಾತಿ ಜಾರಿಗೆ ಮುಂದಾಗಿದ್ದೇವೆ.

ಹೊಸ ಆಯೋಗದ ವರದಿ ನಿಗದಿತ ಸಮಯದೊಳಗೆ ಬರುವ ನಿರೀಕ್ಷೆ ಇದೆ. ವರದಿ ಬಂದ ತಕ್ಷಣ ಒಳ ಮೀಸಲಾತಿ ಜಾರಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಶಾಸಕ ಬಸವಂತಪ್ಪ ಸೇರಿದಂತೆ ದಲಿತ ಒಕ್ಕೂಟಗಳ ಮುಖಂಡರು ಇದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ