Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ: ಸಿಎಂ ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಹೈಕೋರ್ಟ್ ನಲ್ಲಿ ನಮ್ಮ‌ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ದಿನ
ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ED ಯವರು ತಮ್ಮ ತನಿಖೆಯ ವಿವರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿರುವುದರ ಬಗ್ಗೆ ಮತ್ತು ಲೋಕಾಯುಕ್ತಕ್ಕೆ ಪತ್ರ ಬರೆದಿರುವುದರ ಹಿಂದಿನ ಉದ್ದೇಶದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ED ಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ತಿಳಿಸಿದರು.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ತಿಳಿಸಿದರು.

ಡಿಸೆಂಬರ್ 24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ED ಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.

ನಾನು ಹೇಳಿದ್ನಾ?
ಮಂತ್ರಿ ಮಂಡಲ ಪುನಾರಚನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ
, ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ನೀವು ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ? ಈ ಬಗ್ಗೆ ಹೈ ಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದರು.

ಇಂದು ಹಾಸನದಲ್ಲಿ ನಡೆಯುತ್ತಿರುವ ಸಮಾವೇಷದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಕ್ಷದಿಂದ ಸಮಾವೇಷ ನಡೆಯುತ್ತಿದೆ ಎಂದರು.
ಸಚಿವರಾದ ಕೆ.ಎನ್.ರಾಜಣ್ಣ
, ಚಲುವರಾಯಸ್ವಾಮಿ ಮತ್ತು ಶಾಸಕರುಗಳು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ