Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನುಭವ ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ: ಸಿ.ಎಂ ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಹಿಂದೆ ಸಂಸ್ಕೃತ ಕಲಿಯುವವರಿಗೆ
, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ‌ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು.

ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂಥಾ ಕತೆಗಳನ್ನು ಕಟ್ಟಿ ಬಿಡ್ತಾರೆ ಹುಷಾರು ಎಂದು ಎಚ್ಚರಿಸಿದರು.

ಬಸವಣ್ಣ 850 ವರ್ಷಗಳ ಹಿಂದೆಯೇ ಅನುಭವ ಮಂಟಪ ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು. ಪ್ರಗತಿಪರ ವಿಚಾರಗಳನ್ನು ಇಟ್ಟುಕೊಂಡವರಿಗೆ ನಿರಂತರವಾಗಿ ಸಮಸ್ಯೆ ಬರುತ್ತಲೇ ಇರುತ್ತವೆ. ಹೀಗಾಗಿ ಪ್ರಗತಿಪರ ವಿಚಾರಗಳ ಜೊತೆ ನೀವು ಸದಾ ಗಟ್ಟಿಯಾಗಿ ನಿಲ್ಲಬೇಕು. ಪ್ರಗತಿಪರ ವಿಚಾರಗಳ ಜೊತೆಗೆ ನಾವು ನಿಲ್ಲದೆ ಸಮ ಸಮಾಜ ಬರಬೇಕು ಎಂದರೆ ಸಾಧ್ಯವಿಲ್ಲ ಎಂದು ವಿವರಿಸಿದರು.

ಜಾತಿಗೆ ಚಲನ ಇಲ್ಲ. ವರ್ಗಕ್ಕೆ ಚಲನೆ ಇಲ್ಲ. ಜಾತಿ ವ್ಯವಸ್ಥೆ ನಿಂತ ನೀರು. ಚಲನೆ ಇಲ್ಲ. ಆರ್ಥಿಕ ಚಲನೆ  ಸಿಕ್ಕಾಗ ಮಾತ್ರ ಜಾತಿಯಲ್ಲೂ ಚಲನೆ ಸಿಗುತ್ತದೆ. ಈ ಚಲನೆ ಸಿಗಬೇಕಾದರೆ ಶಿಕ್ಷಣದ ಅಗತ್ಯ ಇದೆ ಎಂದರು.
ಜಾತಿ ಮುಕ್ತ ಮಾನವೀಯ ಸಮಾಜ ನಿರ್ಮಾಣ ನಮ್ಮ ಸಂವಿಧಾನದ ಆಶಯ ಮತ್ತು ಬದ್ಧತೆ. ಆದರೆ ಇವತ್ತಿಗೂ ಅಸ್ಪೃಶ್ಯತೆ ಹೋಗಿಲ್ಲದಿರುವುದು, ಶೈಕ್ಷಣಿಕ ಸಮಾನತೆ ಇಲ್ಲದಿರುವುದು  ಬೇಸರದ ಸಂಗತಿ.

ನಾನು ಶಿಕ್ಷಣ ಪಡೆದಿರುವುದು ನನ್ನ ಸ್ವಾರ್ಥಕ್ಕೆ ಅಲ್ಲ. ಅವಕಾಶ ವಂಚಿತ ಸಮುದಾಯಗಳ ಬಿಡುಗಡೆಗಾಗಿ ವಿದ್ಯೆ ಸಂಪಾದನೆ ಮಾಡಿದ್ದೇನೆ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಅರ್ಥ ಮಾಡಿಕೊಳ್ಳಬೇಕು.

ಸಂವಿಧಾನ ಬರದೇ ಇದ್ದರೆ ನಾವು, ನೀವು ಶಿಕ್ಷಣ ಪಡೆಯಲು ಸಾಧ್ಯವಿರಲಿಲ್ಲ. ಮನುಸ್ಮೃತಿ ಕಾರಣದಿಂದ ಜಾತಿ ಅಸಮಾನತೆ, ಜಾತಿ ಶೋಷಣೆ, ಜಾತಿ ದೌರ್ಜನ್ಯ ಹೆಚ್ಚಾಯಿತು.

ಪಟ್ಟಭದ್ರರು  ಹಿಂದಿನ ಜನ್ಮದ ಕರ್ಮ ಎಂದು ನಂಬಿಸಿ ಜನರನ್ನು ವಂಚಿಸುತ್ತಿದ್ದಾರೆ. ಅದಕ್ಕೇ ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದರು. ನಿಮ್ಮಲ್ಲಿ ಎಷ್ಟು ಜನ ಕರ್ಮ ಸಿದ್ಧಾಂತ ತಿರಸ್ಕರಿಸಿದ್ದೀರೋ ಗೊತ್ತಿಲ್ಲ.

ಬ್ರಹ್ಮ ಒಬ್ಬರಿಗೆ ಶಿಕ್ಷಣ, ಮತ್ತೊಬ್ಬರಿಗೆ ಅನಕ್ಷರತೆ ಸಿಗಲಿ ಅಂತ ಬರೆದರಾ? ಒಬ್ಬನಿಗೆ ಬಡವನಾಗು, ಮತ್ತೊಬ್ಬನಿಗೆ ಶ್ರೀಮಂತನಾಗು ಅಂತ ಬ್ರಹ್ಮ ಬರೆದರಾ ? ಒಬ್ಬ ಹೊಟ್ಟೆತುಂಬ ಉಣ್ಣಬೇಕು, ಉಳಿದವರು ಹಸಿವಿನಿಂದ ಬಿದ್ದಿರಬೇಕು ಎಂದು ಬ್ರಹ್ಮ ಬರೆದುಬಿಟ್ಟರಾ ಎಂದು ಪ್ರಶ್ನಿಸಿದರು.

ಪಟ್ಟಭದ್ರರು ಬಸವಣ್ಣನವರ ಕ್ರಾಂತಿ ಮುಂದುವರೆಸಲು ಬಿಡಲಿಲ್ಲ. ಆದ್ದರಿಂದ ನಾವು ವೈಜ್ಞಾನಿಕವಾಗಿ, ವೈಚಾರಿಕವಾಗಿ ಚಿಂತಿಸುವುದು ಅಗತ್ಯ

*ಅಹಿಂದ ಸಮಾಜ ಮತ್ತು ಎಲ್ಲಾ ಜಾತಿ, ಧರ್ಮಗಳ ಬಡತನ, ಹಸಿವು ನಿವಾರಣೆ ಆಗಬೇಕು. ಅನ್ನಕ್ಕಾಗಿ ಯಾರೂ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿ ನಿಲ್ಲಬಾರದು ಎನ್ನುವ ಕಾರಣದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ ಎಂದು ಸ್ಮರಿಸಿದರು. ಕಾಯಕ, ದಾಸೋಹ ಬಸವಣ್ಣನವರ ತತ್ವ. ಇದನ್ನು ಎಲ್ಲರೂ ಪಾಲಿಸಬೇಕು ಎಂದರು.

ಎಲ್ಲಾ ಶ್ರಮಿಕ ವರ್ಗಗಳ ಸಂಸ್ಕೃತಿ, ಆಚಾರ, ವಿಚಾರ ಹೊರಗೆ ಬರಬೇಕು. ಇದಕ್ಕಾಗಿ ಎಲ್ಲರೂ ಸಾಹಿತ್ಯ ರಚನೆಯಲ್ಲಿ ತೊಡಗೇಕು ಎಂದರು.

ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ನಿಗಧಿಯಾಗಿತ್ತು. ಆದರೆ ಈಗ ಶಿಕ್ಷಣ ಸಿಕ್ಕಿದೆ. ನಿಮ್ಮ ನಿಮ್ಮ‌ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ. ನಮ್ಮ ಜ್ಞಾನ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು ಎಂದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ