Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪು ಭಾವುಟ ಪ್ರದರ್ಶನ

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಇದೇ ಡಿಸೆಂಬರ್ 2 ರಂದು ಸಿಎಂ ಸಿದ್ದರಾಮಯ್ಯ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮಕ್ಕೆ ತುಮಕೂರಿಗೆ ಆಗಮಿಸುತ್ತಿದ್ದಾರೆ. ಆ ಸಂದರ್ಭದಲ್ಲಿ ಸಿಎಂ
ವಿರುದ್ಧ ಬಿಜೆಪಿ- ಜೆಡಿಎಸ್ ಶಾಸಕರು ಪ್ರತಿಭಟನೆ ಮಾಡಲು  ನಿರ್ಧರಿಸಿದ್ದಾರೆ.

ತುಮಕೂರಿನ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಫಲಾನುಭವಿಗಳಿಗೆ ಸವಲತ್ತು ವಿತರಣೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಡಿ. 2ರಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಂದ ಕಪ್ಪು ಬಾವುಟ ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಸುರೇಶ್ ಗೌಡ, ಸಿಎಂ ಯಾವ ಪುರುಷಾರ್ಥಕ ತುಮಕೂರಿಗೆ ಬರುತ್ತಿದ್ದಾರೆ. ಅವರು ಬರುವುದರ ಒಳಗೆ ಅನುದಾನ ಹಂಚಿಕೆಯಲ್ಲಿ ಮಾಡಲಾಗಿರುವ ತಾರತಮ್ಯ ಸೇರಿದಂತೆ ಇತರೆ ವಿಚಾರಗಳ ಕುರಿತು ಸಮಸ್ಯೆ ನಿವಾರಣೆ ಮಾಡದಿದ್ದರೆ, ಸಾವಿರಾರು ಜನ ಕಾರ್ಯಕರ್ತರು ಬಂದು ಕಪ್ಪು ಭಾವುಟ ಪ್ರದರ್ಶನ ಮಾಡಿ ಗೋ ಬ್ಯಾಕ್ ಸಿದ್ದರಾಮಯ್ಯ ಅಂತ ಘೋಷಣೆ ಕೂಗುತ್ತೇವೆ ಎಂದು ಎಚ್ಚರಿಸಿದರು.

ಕರ್ನಾಟಕದ ಪಾಲಿಗೆ ಸತ್ತು ಹೋಗಿರುವ ಸರ್ಕಾರ ಅಂತ ಘೋಷಣೆ ಕೂಗುತ್ತೇವೆ ಎಂದು ವಾಗ್ದಾಳಿ ಮಾಡಿದ್ದಾರೆ.
ಅನುದಾನ ಬಿಡುಗಡೆ ಮಾಡದೇ ಇದ್ದರೇ ನಾವು ಯಾವುದೇ ಕಾರಣಕ್ಕೂ ಕಾರ್ಯಕ್ರಮ ನಡೆಯಲು ಬಿಡಲ್ಲ. ಅಧಿಕಾರ ದುರ್ಬಳಕೆ ಮಾಡಿಕೊಂಡು ಪೊಲೀಸ್ ಬಲ ಬಳಸಿದರೆ
, ಸಾವಿರಾರು ಜನ ಕಾರ್ಯಕರ್ತರೊಂದಿಗೆ ಕಪ್ಪು ಭಾವುಟ ಪ್ರದರ್ಶನ ಮಾಡುತ್ತೇವೆ. ಟೋಲ್​ನಲ್ಲಿ ಸಿದ್ದರಾಮಯ್ಯ ಕಾರಿಗೆ ಅಡ್ಡಲಾಗಿ ಮಲಗುತ್ತೇವೆ ಎಂದು ಸರ್ಕಾರಕ್ಕೆ ಸುರೇಶ್ ಗೌಡ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ 8 ತಿಂಗಳು ಪೂರೈಸಿದೆ. ತುಮಕೂರಿನಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಈ ಸರ್ಕಾರ ಬಂದ ಮೇಲೆ ವಿರೋಧ ಪಕ್ಷಗಳಿಗೆ ಸಾಕಷ್ಟು ತಾರತಮ್ಯ ಮಾಡಿದೆ. ಪ್ರತಿ ಶಾಸಕರಿಗೆ 25 ಕೋಟಿ ರೂ. ವಿಶೇಷ ಅನುದಾನ ಕೊಡುತ್ತೇವೆ ಅಂತ ಘೋಷಣೆ ಮಾಡಿ ಒಂದು ವರ್ಷ ಕಳೆದರೂ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ ಎಂದು ಅವರು ದೂರಿದರು.

ಎಷ್ಟು ಅನುದಾನ-
ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಒಂದು ಬಿಡಿಗಾಸನ್ನು ಬಿಡುಗಡೆ ಮಾಡಿಲ್ಲ. ಆದರೆ ತುಮಕೂರು ಜಿಲ್ಲೆಯ ಕಾಂಗ್ರೆಸ್​ ಶಾಸಕರ ಕ್ಷೇತ್ರಗಳಿಗೆ ವಿಶೇಷ ಅನುದಾನ ಅಂತ ಬಿಡುಗಡೆ ಮಾಡಲಾಗಿದೆ. ಶಿರಾ ಕ್ಷೇತ್ರಕ್ಕೆ 8 ಕೋಟಿ
, ಕೊರಟಗೆರೆ 10 ಕೋಟಿ, ಪಾವಗಡಕ್ಕೆ 12 ಕೋಟಿ ರೂ, ಗುಬ್ಬಿ ಕ್ಷೇತ್ರಕ್ಕೆ 5 ಕೋಟಿ, ತಿಪಟೂರು ಕ್ಷೇತ್ರಕ್ಕೆ 10 ಕೋಟಿ, ಕುಣಿಗಲ್ ಕ್ಷೇತ್ರಕ್ಕೆ 42 ಕೋಟಿ ರೂ. ಬಿಡುಗಡೆ ಆಗಿದೆ ಎಂದು ಶಾಸಕರು ಆರೋಪಿಸಿದ್ದಾರೆ.

ಮಧುಗಿರಿ ಕ್ಷೇತ್ರಕ್ಕೆ ವಿಶೇಷ ಅನುದಾನ ಅಂತ ಹೇಳಿ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿದ್ದಾರೆ. ವಿರೋಧ ಪಕ್ಷದವರನ್ನ ಆಯ್ಕೆ ಮಾಡಿದ ಶಾಸಕರನ್ನ ದಂಡಿಸಲು ಈ ರೀತಿ ಮಾಡಿದ್ದಾರಾ? ಸಿದ್ದರಾಮಯ್ಯ ಅವರದ್ದು ಸರ್ವಾಧಿಕಾರನಾ ಇದು ಎಂದು ಸುರೇಶ್ ಗೌಡ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದ್ವೇಷ, ದುರಂಹಕಾರ ರಾಜಕಾರಣ ಹೆಚ್ಚಾಗಿದೆ. ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಬಿಟ್ಟಿ ಭಾಗ್ಯದ ಅಡಿಯಲ್ಲಿ ಈ ಸರ್ಕಾರ ನಡೆಸುತ್ತಿದ್ದಾರೆಂದು ಅವರು ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. 25 ಕೋಟಿ ರೂ. ಕೊಡುತ್ತೇವೆ ಅಂತ ಹೇಳಿದ್ದರು. ಅನುದಾನ ಕೊಡುವುದರಲ್ಲಿ ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ.

8 ಬಾರಿ ಶಾಸಕರಾಗಿರುವ ಹಿರಿಯ ನಾಯಕ ಟಿ.ಬಿ ಜಯಚಂದ್ರಗೆ ಕೇವಲ 8 ಕೋಟಿ ರೂ. ಕೊಡಲಾಗಿದೆ. ಕೇವಲ ಎರಡು ಬಾರಿ ಗೆದ್ದಿರುವ ಡಿಕೆ ಶಿವಕುಮಾರ್ ಸಂಬಂಧಿ ಕುಣಿಗಲ್ ಶಾಸಕ ಡಾ ರಂಗನಾಥ್​ಗೆ 43 ಕೋಟಿ ರೂ. ಕೊಟ್ಟಿದ್ದಾರೆ.

ಕೊರಟಗೆರೆ ಪರಮೇಶ್ವರ್ ಕ್ಷೇತ್ರಕ್ಕೆ ಅವರಿಗೆ 10 ಕೋಟಿ ರೂ. ಕೊಟ್ಟಿದ್ದಾರೆ. ಗುಬ್ಬಿ ಶಾಸಕರನ್ನ ಮಂತ್ರಿ ಮಾಡುತ್ತೇವೆ ಅಂತ ಕರೆದುಕೊಂಡು ಹೋಗಿದ್ದರು. ಪಾಪ ಅವರಿಗೆ ಮಕ್ಮಲ್ ಟೋಪಿ ಹಾಕಿ ಕೇವಲ 5 ಕೋಟಿ ರೂ. ಕೊಟ್ಟಿದ್ದಾರೆ. ಅವರವರಲ್ಲೇ ತಾರತಮ್ಯ ಮಾಡಿ ಅನುದಾನ ಕೊಟ್ಟಿದ್ದಾರೆ. ನಾವೇನು ತಪ್ಪು ಮಾಡಿದ್ದೇವೆ. ದ್ವೇಷದ ರಾಜಕಾರಣವನ್ನ ನಾವು ಸಹಿಸಲ್ಲ ಎಂದು ಶಾಸಕ ಸುರೇಶ್ ಗೌಡ ಗುಡುಗಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ