Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜದಲ್ಲಿ ಶಾಂತಿ ಕದಡುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ವಾಗ್ದಾನವನ್ನು ನಾಡಿನ ಜನತೆಗೆ ನಾವು ಚುನಾವಣಾ ಪೂರ್ವದಲ್ಲೇ ನೀಡಿದ್ದೆವು
, ಅದರಂತೆ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಬಹುಮತದ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ ಮತ್ತು‌ ಸಾಮರಸ್ಯದ ವಾತಾವರಣವನ್ನು ನಿರ್ಮಾಣ ಮಾಡುವ ಅಗತ್ಯ ಎಂದಿಗಿಂತಲೂ ಈಗ ಹೆಚ್ಚಾಗಿದೆ.

 ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೋಮುವಾದಿ ದುಷ್ಕರ್ಮಿಗಳು ವಿದ್ವೇಷಕಾರಿ ಚಟುವಟಿಕೆಗಳ ಮೂಲಕ ಧಾರ್ಮಿಕ ಸಾಮರಸ್ಯವನ್ನು ಕೆಡಿಸಿ ಸಾಮಾಜಿಕ ಸ್ವಾಸ್ಥ್ಯವನ್ನು  ಹಾಳುಗೆಡಹುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಇಂತಹ ಕಾನೂನು ವಿರೋಧಿ ಚಟಿವಟಿಕೆಗಳನ್ನು ನಿಗ್ರಹಿಸಲು ನಮ್ಮ ಸರ್ಕಾರ ವಿಶೇಷ ಕಾರ್ಯಪಡೆಯನ್ನು ರಚಿಸಿದೆ. ಈಗಾಗಲೇ ಅಸ್ತಿತ್ವದಲ್ಲಿರುವ ನಕ್ಸಲ್‌ ನಿಗ್ರಹ ಪಡೆಯಿಂದ ಒಬ್ಬರು ಡಿಜಿಪಿ, ಒಬ್ಬರು ಡಿವೈಎಸ್‌ಪಿ, ಒಬ್ಬರು ಸಹಾಯಕ ಕಮಾಂಡೆಂಟ್‌, ನಾಲ್ವರು ಪೊಲೀಸ್ ಇನ್ಸ್‌ಪೆಕ್ಟರ್, 16 ಪಿಎಸ್‌ಐ ಸೇರಿ 248 ಹುದ್ದೆಗಳನ್ನು ಬೇರ್ಪಡಿಸಿ ಟಾಸ್ಕ್‌ ಫೋರ್ಸ್‌ ರಚಿಸಲಾಗಿದೆ.

ಕೋಮು ಭಾವನೆ ಕೆರಳಿಸುವ ಮತ್ತು ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನು ಯಾರೇ ಮಾಡಿದರು, ಯಾವುದೇ ಧರ್ಮದ, ಯಾವುದೇ ಸಂಘಟನೆಗೆ ಸೇರಿದವರಾಗಿದ್ದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಂಡು ತಪ್ಪಿತಸ್ಥರಿಗೆ ಕಾನೂನಿನಡಿ ಶಿಕ್ಷೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ