Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆಯಲ್ಲಿನ ಗುಂಡಿ ಮುಚ್ಚಲು ಸಿಎಂ ತಾಕೀತು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಸ್ತೆ ಗುಂಡಿ ಮುಚ್ಚುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಅಖಾಡಕ್ಕೆ ಇಳಿದಿದ್ದಾರೆ. ಸಿದ್ದರಾಮಯ್ಯ ಅವರು ಸಭೆ ಮಾಡಿ ಅಧಿಕಾರಿಗಳು, ಇಂಜಿನಿಯರ್​ಗಳನ್ನು ಸಕತ್ ಚಾರ್ಜ್ ಮಾಡಿದರು.
ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ಎಲ್ಲಾ ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲು ಒಂದು ತಿಂಗಳ ಗಡುವು ನೀಡಿದ್ದಾರೆ.


ಮುಖ್ಯಮಂತ್ರಿಗಳ ಸೂಚನೆ?
ಗುಂಡಿ ಬಿದ್ದ ರಸ್ತೆ ಬಳಸುವ ಜನರ ಪ್ರತಿನಿತ್ಯದ ಸಂಕಷ್ಟ ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವೇ
? ತುರ್ತು ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ? ಪ್ರತಿ ವಾರ್ಡ್​ನ ಎಂಜಿನಿಯರ್​ಗಳು, ಮುಖ್ಯ ಎಂಜಿನಿಯರ್​ಗಳು ಏನು ಮಾಡುತ್ತಿದ್ದಾರೆ? ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆಗಳನ್ನು ಸಂಚಾರಯೋಗ್ಯ ಮಾಡಲೇಬೇಕು. ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಗುತ್ತಿಗೆದಾರರೊಂದಿಗೆ ಶಾಮೀಲಾಗದೆ ಒದಗಿಸಿರುವ ಅನುದಾನಕ್ಕೆ ಉತ್ತಮ ಗುಣಮಟ್ಟದ ಮತ್ತು ವೈಜ್ಞಾನಿಕವಾದ ಕಾಮಗಾರಿಗಳನ್ನು ಪೂರೈಸಲು ಕ್ರಮವಹಿಸಿ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.


ಮಳೆಗಾಲಕ್ಕೆ ಮುನ್ನವೇ ರಸ್ತೆ ಕಾಮಗಾರಿಗಳನ್ನು ಯಾಕೆ ಮಾಡುತ್ತಿಲ್ಲ? ಮಳೆಗಾಲದಲ್ಲಿಯೇ ಏಕೆ ಪ್ರಾರಂಭಿಸುವಿರಿ? ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡಿರುವ ಆಯುಕ್ತರು ಇದರ ಮೇಲೆ ನಿಗಾ ಇರಿಸಬೇಕು. ಬಿಡಿಎ, ಬಿಎಂಆರ್ ಸಿಎಲ್, ಜಲಮಂಡಳಿ ಅಧಿಕಾರಿಗಳ ನಡುವೆ ಸಮನ್ವಯವೇ ಇರುವುದಿಲ್ಲ. ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ಎಲ್ಲಾ ರಸ್ತೆಗಳನ್ನು ಸಂಚಾರಯೋಗ್ಯ ಮಾಡಲು ಒಂದು ತಿಂಗಳ ಗಡುವು ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.

ಸಂಬಂಧಿಸಿದ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಮುಖ್ಯ ಆಯುಕ್ತರು ಪ್ರತಿ ವಾರ ಐದೂ ವಲಯಗಳ ಆಯುಕ್ತರೊಂದಿಗೆ ಸಭೆ ನಡೆಸಿ, ನಿರಂತರ ಸಂಪರ್ಕದಲ್ಲಿರಬೇಕು.  ಹಣದ ಕೊರತೆಯಿದ್ದರೆ ಆರ್ಥಿಕ ಇಲಾಖೆಯಿಂದ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುತ್ತೇವೆ. ಆದ್ಯತೆ ಮೇರೆಗೆ ಕ್ರಮ ವಹಿಸಿ. ಒಂದು ತಿಂಗಳ ನಂತರ ಮತ್ತೆ ಮೌಲ್ಯ ಮಾಪನ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ಖಡಕ್ ಸೂಚನೆ ನೀಡಿ ಎಚ್ಚರಿಕೆ ನೀಡಿದರು.
ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಸಭೆಯಲ್ಲಿ ಭಾಗಿಯಾಗಿದ್ದರು.


ಸಭೆಯ ಮುಖ್ಯಾಂಶಗಳು-
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಸ್ತೆ ಜಾಲದಲ್ಲಿ
1648.43 ಕಿ. ಮೀ ಉದ್ದದ ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಿವೆ. 46.61ಕಿ.ಮೀ ಹೈಡೆನ್ಸಿಟಿ ಕಾರಿಡಾರ್ ರಸ್ತೆಗಳಿವೆ.
ಬೆಂಗಳೂರು ಕೇಂದ್ರ
, ಬೆಂಗಳೂರು ಪೂರ್ವ, ಪಶ್ಚಿಮ ಉತ್ತರ ಮತ್ತು ದಕ್ಷಿಣ ನಗರ ಪಾಲಿಕೆ ಗಳಲ್ಲಿ ಒಟ್ಟು 14795 ರಸ್ತೆ ಗುಂಡಿಗಳನ್ನು ಗುರುತಿಸಿಲಾಗಿದೆ. ಈಗಾಗಲೇ 6749 ಗುಂಡಿಗಳನ್ನು ಮುಚ್ಚಲಾಗಿದ್ದು 8046 ಗುಂಡಿಗಳು ಮುಚ್ಚಲು ಬಾಕಿ ಇವೆ.


ಅಕ್ಟೋಬರ್ ಅಂತ್ಯದ  ವೇಳೆಗೆ ಎಲ್ಲಾ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
ಈಗಾಗಲೇ
108.20 ಕಿ.ಮೀ ಉದ್ದದ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದೆ.‌143.68 ಕಿ.ಮೀ ಉದ್ದದ ರಸ್ತೆ ಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ 401.63 ಕಿ. ಮೀ ರಸ್ತೆಗಳು ಡಾಂಬರೀಕರಣ ಗೊಂಡಿದ್ದು, 440.92 ಕಿ.ಮೀ ಡಾಂಬರೀಕರಣ ಕಾಮಗಾರಿ ಪ್ರಗತಿಯಲ್ಲಿದೆ. ಒಟ್ಟಾರೆ 584.60 ಕಿ ಮೀ ಉದ್ದದ ರಸ್ತೆಗಳಲ್ಲಿ  ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ.

ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆ ಗಳಲ್ಲಿ ಗುಂಡಿಗಳನ್ನು ಮುಚ್ಚಲು 2025-26 ರ ಆಯವ್ಯಯದಲ್ಲಿ 18 ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗಿದೆ.

ಎಲ್ಲಾ ನಗರ ಪಾಲಿಕೆಗಳಿಗೂ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು 25 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಪಾಲಿಕೆಗಳಿಂದ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ವಹಿಸಲಾಗಿದೆ.

ನೂತನ ತಂತ್ರಜ್ಞಾನ ಜೆಟ್ಪ್ಯಾಚರ್ ಯಂತ್ರ ಬಳಸಿಕೊಳ್ಳಲು 2.50 ಕೋಟಿಗಳ ಮೊತ್ತದ ಟೆಂಡರ್ ಚಾಲ್ತಿಯಲ್ಲಿದ್ದು ಸದರಿ ತಂತ್ರಜ್ಞಾನದಿಂದ ತೇವಾಂಶವಿರುವ ಸಮಯದಲ್ಲಿಯೂ ಗುಂಡಿಗಳನ್ನು ಮುಚ್ಚಬಹುದಾಗಿದೆ.


ತಾಂತ್ರಿಕ ಸಮನ್ವಯಾಧಿಕಾರಿ ನೇಮಿಸಲು ಕ್ರಮ-
ಇಬ್ಬಲೂರು ಜಂಕ್ಷನ್
, ಅಗರ, ವೀರಣ್ಣನ ಪಾಳ್ಯ, ನಾಗವಾರ ಮತ್ತು ಹೆಬ್ಬಾಳ  ಜಂಕ್ಷನ್ ಗಳಲ್ಲಿ ಜಲಮಂಡಳಿ ಮತ್ತು ಮೆಟ್ರೋ ಕಾಮಗಾರಿಯಿಂದ ಜಂಕ್ಷನ್ ಹಾಳಾಗಿದ್ದು 400 ಕೋಟಿಗಳ ಹೊರವರ್ತುಲ ರಸ್ತೆ ಅಭಿವೃದ್ಧಿ ಯೋಜನೆಯಡಿ ಸಮಗ್ರವಾಗಿ ಅಭಿವೃದ್ದಿ ಪಡಿಸಲು ಉದ್ದೇಶಿಸಲಾಗಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ