ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಆಸಕ್ತರು ಇದೇ ಜುಲೈ 21ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ರವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕುಲಸಚಿವ ಪ್ರೊ.ಎಸ್.ಕೆ.ನವೀನ್ ಕುಮಾರ್ ತಿಳಿಸಿದ್ದಾರೆ.



