Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಗ್ನಿ ಅವಘಡಗಳಾಗದಂತೆ ಸುರಕ್ಷತಾ ಕ್ರಮ ಕೈಗೊಳ್ಳಿ- ಜಿಲ್ಲಾಧಿಕಾರಿ

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲಾಸ್ಪತ್ರೆಯು ಹಳೆಯ ಕಟ್ಟಡವಾಗಿರುವುದರಿಂದ ಯಾವುದೇ ರೀತಿಯ ಅಗ್ನಿ ಅವಘಡಗಳಾಗದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್   ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಅಸ್ಗರ್ ಬೇಗ್ ಅವರಿಗೆ ಸೂಚನೆ ನೀಡಿದರು.

ಮೊನ್ನೆ ಶುಕ್ರವಾರ ರಾತ್ರಿ ಉತ್ತರ ಪ್ರದೇಶದ ಝಾನ್ಸಿ ಮಹಾರಾಣಿ ಲಕ್ಷ್ಮಿಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ   ೧೦ ನವಜಾತ ಶಿಶುಗಳು ಮೃತಪಟ್ಟಿರುವ ಬಗ್ಗೆ ವರದಿಯಾಗಿರುವ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅವರು ಪರಿಶೀಲಿಸಿದರು.

ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕ, ಹೆರಿಗೆ ವಾರ್ಡ್, ಡೆಂಗ್ಯು ರೋಗಿಗಳ ವಾರ್ಡ್, ಟ್ರಯೇಜ್ ಕೊಠಡಿ, ಹೊರ ರೋಗಿ ಚೀಟಿ ವಿಭಾಗಳಿಗೆ ಭೇಟಿ ನೀಡಿದ ಅವರು ವಿದ್ಯುತ್ ಶಾರ್ಟ್ ಸರ್ಕ್ಯುಟ್ ವಿದ್ಯುತ್ ವೈರ್‌ಗಳನ್ನು ಪರಿಶೀಲಿಸಬೇಕು. ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ ಹೊಗೆ ತುಂಬಿಕೊಂಡಲ್ಲಿ ಎಚ್ಚರಿಕೆ ನೀಡಲು ಫೈರ್ ಡಿಟೆಕ್ಟರ್ ಅನ್ನು ಅಳವಡಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಅಗ್ನಿ ಅವಘಡಗಳು ಸಂಭವಿಸಿದಾಗ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಆಸ್ಪತ್ರೆ ಸಿಬ್ಬಂದಿಗಳಿಗೆ ಅಣುಕು ಪ್ರದರ್ಶನ ಏರ್ಪಡಿಸಬೇಕೆಂದು ಹಾಗೂ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಹಳೆ ಕಟ್ಟಡಗಳಲ್ಲಿ ಪರಿಶೋಧನೆ ಕೈಗೊಂಡು ವರದಿ ನೀಡಬೇಕೆಂದು ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಕೆ.ಪಿ. ಶಶಿಧರ್ ಅವರಿಗೆ ಸೂಚನೆ ನೀಡಿದರು.

 ಹೆರಿಗೆ ವಾರ್ಡ್‌ಗೆ ಭೇಟಿ ನೀಡಿ ಗರ್ಭಿಣಿ / ಬಾಣಂತಿಯರ ಆರೋಗ್ಯ ವಿಚಾರಿಸಿದ ಅವರು ರೋಗಿಗಳಿಗೆ ಗುಣಮಟ್ಟದ  ಚಿಕಿತ್ಸೆ ನೀಡಬೇಕು. ದೂರದ ಊರುಗಳಿಂದ ಬರುವ ರೋಗಿಗಳನ್ನು ಕಾಯಿಸದೆ ಸೂಕ್ತ ಚಿಕಿತ್ಸೆ ನೀಡಲು ಮುಂದಾಗಬೇಕೆಂದರಲ್ಲದೆ ಯಾವುದೇ ಸಮಸ್ಯೆಗಳು ಎದುರಾದಾಗ ಕ್ರಮ ಕೈಗೊಳ್ಳುವುದಕ್ಕಿಂತ ಮುಂಜಾಗ್ರತೆ ಕ್ರಮವಾಗಿ ಸಮಸ್ಯೆ ಬಾರದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.

ಆಸ್ಪತ್ರೆಯಲ್ಲಿ ರೋಗಿಗಳು ದಾಖಲಾಗಿರುವ ವಾರ್ಡುಗಳಲ್ಲಿ ಪ್ರತಿದಿನ ಹಾಸಿಗೆ, ಹೊದಿಕೆಗಳನ್ನು ಬದಲಾಯಿಸಬೇಕು. ಹಳೆಯ ಅನುಪಯುಕ್ತ ಉಪಕರಣಗಳನ್ನು ವಾರ್ಡಿನಲ್ಲಿ ಇಡಬಾರದು ಎಂದು ಸೂಚನೆ ನೀಡಿದರು.

ನಂತರ ಆಸ್ಪತ್ರೆ ಆವರಣದಲ್ಲಿ ಹೊಸದಾಗಿ ನಿರ್ಮಾಣ ಮಾಡಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಕ್ಕಳ ತಜ್ಞ ಡಾ.ಶ್ರೀನಿವಾಸ್ ಪ್ರಸಾದ್, ಸಹಾಯಕ ಆಡಳಿತ ಅಧಿಕಾರಿ ರವಿ, ಸ್ಥಾನಿಕ ವೈದ್ಯಾಧಿಕಾರಿ ಡಾ.ಚೇತನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ