Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳೆ ಹಾನಿ ರೈತರ ಪಟ್ಟಿ ಪ್ರಕಟ: ಆಕ್ಷೇಪಣೆಗಳಿಗೆ ಆಹ್ವಾನ-ಜಿಲ್ಲಾಧಿಕಾರಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಳೆದ ಅಕ್ಟೋಬರ್ ಮಾಹೆಯಲ್ಲಿ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಬೆಳೆಹಾನಿ ಆದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಕಳೆದ ಅಕ್ಟೋಬರ್ ಮಾಹೆಯಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಉಂಟಾದ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷಾ ತಂಡವು ಸ್ಥಳ ಪರಿಶೀಲನೆ ನಡೆಸಿ, ಬೆಳೆ ಹಾನಿ ಕ್ಷೇತ್ರಗಳ ಮಾಹಿತಿ ನೀಡಿದೆ.

ಜಿಲ್ಲೆಯಲ್ಲಿ ಒಟ್ಟು 914.45 ಹೆಕ್ಟೇರ್ ಕೃಷಿ ಬೆಳೆ ಹಾಗೂ 241.80 ತೋಟಗಾರಿಕೆ ಬೆಳೆ ಸೇರಿ ಒಟ್ಟು 1,156.25 ಹೆಕ್ಟೇರ್ ಕ್ಷೇತ್ರದಲ್ಲಿ ಬೆಳೆ ಹಾನಿಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 172.77 ಹೆಕ್ಟೇರ್ ಕೃಷಿ, 94.50 ತೋಟಗಾರಿಕೆ ಸೇರಿ 267.27 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ 478.47 ಹೆಕ್ಟೇರ್ ಕೃಷಿ ಬೆಳೆ, 89.40 ಹೆಕ್ಟೇರ್ ತೋಟಗಾರಿಕೆ ಸೇರಿ 567.87 ಹೆಕ್ಟೇರ್ ಬೆಳೆ ಹಾನಿಯಾಗಿದೆ.

ಹಿರಿಯೂರು ತಾಲ್ಲೂಕಿನಲ್ಲಿ 162.50 ಹೆಕ್ಟೇರ್ ಕೃಷಿ, 35 ಹೆಕ್ಟೇರ್ ತೋಟಗಾರಿಕೆ ಬೆಳೆ ಸೇರಿ 197.50 ಹೆಕ್ಟೇರ್ ಹಾನಿಯಾಗಿದೆ. ಮೊಳಕಾಲ್ಮೂರು ತಾಲ್ಲೂಕಿನಲ್ಲಿ 100.71 ಹೆಕ್ಟೇರ್ ಕೃಷಿ ಬೆಳೆ ಹಾಗೂ 22.90 ಹೆಕ್ಟೇರ್ ತೊಟಗಾರಿಕೆ ಬೆಳೆ ಸೇರಿ 123.61 ಹೆಕ್ಟೇರ್ ಬೆಳೆ ಹಾನಿಯಾಗಿದೆ.

ಬೆಳೆಹಾನಿಯಾದ ರೈತರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕರಿಗಳ ಕಚೇರಿ ಸೇರಿದಂತೆ ಆಯಾ ತಾಲ್ಲೂಕು ತಹಶೀಲ್ದಾರ್ ಕಚೇರಿ, ಗ್ರಾಮ ಪಂಚಾಯತಿ ಕಚೇರಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಬುಧವಾರದಂದು ಪ್ರಕಟಿಸಲಾಗಿದೆ.

 ಈ ಕುರಿತು ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ, ಸಂಬಂಧಪಟ್ಟ ತಹಶೀಲ್ದಾರ್, ಕೃಷಿ, ತೋಟಗಾರಿಕೆ ಇಲಾಖೆಯ ಕಚೇರಿಗಳಿಗೆ 7 ದಿನಗಳೊಳಗಾಗಿ ಸಲ್ಲಿಸಬಹುದು.

ಈ ಅವಧಿಯಲ್ಲಿ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದಿದ್ದರೆ ಪಟ್ಟಿಯನ್ನು ಅಂತಿಮಗೊಳಿಸಿ ನಿಯಮಾನುಸಾರ ಪರಿಹಾರ ಪಾವತಿಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ