LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಶ್ನೆ ಪತ್ರಿಕೆ ಸೋರಿಕೆಗೆ ಜಿಲ್ಲಾಧಿಕಾರಿಗಳ ಹೊಣೆ: ಕಾಂಗ್ರೆಸ್ ವಿರುದ್ಧ ‘ದ್ವಂದ್ವ ನೀತಿ’ ಆರೋಪ ಹೊರಿಸಿದ ಆರ್. ಅಶೋಕ್

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಶ್ನೆ ಪತ್ರಿಕೆ ಚೋರಿ ಅಥವಾ ಸೋರಿಕೆಯಾದರೆ ಜಿಲ್ಲಾಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದುಇದು ಕಾಂಗ್ರೆಸ್ ಪಕ್ಷದ 'ದ್ವಂದ್ವ ನೀತಿಹಾಗೂ 'ರಾಜಕೀಯ ನಾಟಕಎಂದು ವೀಕ್ಷಿಸಿದ್ದಾರೆ. 

ದೆಹಲಿಯಲ್ಲಿ ಹೊಣೆಗಾರಿಕೆಯ ಭಾಷಣ ಬಿಗಿಯುವ ಕಾಂಗ್ರೆಸ್ಕರ್ನಾಟಕದಲ್ಲಿ ತನ್ನ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಐಎಎಸ್ ಅಧಿಕಾರಿಗಳನ್ನು ಬಲಿಪಶು ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.  

ರಾಹುಲ್-ಪ್ರಿಯಾಂಕಾ-ಡಿಕೆಶಿ: ಒಂದೇ ನಾಣ್ಯದ ಎರಡು ಮುಖಗಳು

ಟ್ವಿಟರ್ ನಲ್ಲಿ ಕಿಡಿಕಾರಿರುವ ಆರ್. ಅಶೋಕ್, "ರಾಹುಲ್ ಗಾಂಧಿಪ್ರಿಯಾಂಕಾ ಗಾಂಧಿ ಮತ್ತು ಡಿ.ಕೆ. ಶಿವಕುಮಾರ್ - ಈ ಮೂವರೂ ಒಂದೇ ನಾಣ್ಯದ ಎರಡು ಮುಖಗಳು. ದೆಹಲಿಯಲ್ಲಿ ರಾಜೀನಾಮೆಗೆ ಆಗ್ರಹಿಸುವ ಕಾಂಗ್ರೆಸ್ಕರ್ನಾಟಕದಲ್ಲಿ ಮಾತ್ರ ತನ್ನ ನೈಜ ಮನಸ್ಥಿತಿಯನ್ನು ಪ್ರದರ್ಶಿಸುತ್ತಿದೆ," ಎಂದು ವಾಗ್ದಾಳಿ ನಡೆಸಿದ್ದಾರೆ.

ಐಎಎಸ್ ಅಧಿಕಾರಿಗಳನ್ನು ಬಲಿಪಶು ಮಾಡುವ ಯತ್ನ:
ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ವ್ಯವಸ್ಥಿತ ಬದಲಾವಣೆ ತರುವುದು ಅಥವಾ ಪರೀಕ್ಷಾ ಅಕ್ರಮ ತಡೆಯುವ ಸುರಕ್ಷಿತ ವ್ಯವಸ್ಥೆ ಮಾಡುವುದನ್ನು ಬಿಟ್ಟು, "ಮುಂದಿನ ಯಾವುದೇ ವೈಫಲ್ಯಕ್ಕೂ ಜಿಲ್ಲಾಧಿಕಾರಿಗಳೇ ಹೊಣೆ" ಎಂದು ಹೇಳಿರುವುದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಯತ್ನ. "ರಾಜಕೀಯ ನಾಯಕರನ್ನು ರಕ್ಷಿಸಿಅಧಿಕಾರಿಗಳ ಮೇಲೆ ಪೂರ್ಣ ಗೂಬೆ ಕೂರಿಸುವುದು ಕಾಂಗ್ರೆಸ್‌ಗೆ ಅಭ್ಯಾಸವಾಗಿಬಿಟ್ಟಿದೆ" ಎಂದು ಅವರು ಟೀಕಿಸಿದ್ದಾರೆ. 

ಅಶೋಕ್ ಎತ್ತಿರುವ ನೇರ ಪ್ರಶ್ನೆ:
"ಬಿಜೆಪಿ ಆಡಳಿತದಲ್ಲಿದ್ದಾಗ ಅಧಿಕಾರಸ್ಥರು ರಾಜೀನಾಮೆ ನೀಡಬೇಕೆಂದು ಆಗ್ರಹಿಸುವ ಕಾಂಗ್ರೆಸ್ತಾನು ಅಧಿಕಾರದಲ್ಲಿದ್ದಾಗ ಮಾತ್ರ ಕೆಳಹಂತದ ಅಧಿಕಾರಿಗಳನ್ನು ಏಕೆ ಬಲಿಪಶು ಮಾಡುತ್ತದೆದೆಹಲಿಯಲ್ಲಿ ನೈತಿಕತೆಯ ಪಾಠಕರ್ನಾಟಕದಲ್ಲಿ ಅಧಿಕಾರಿಗಳ ಮೇಲೆ ಗೂಬೆ ಕೂರಿಸುವ ತಂತ್ರ - ಇದು ಕಾಂಗ್ರೆಸ್‌ನ ದ್ವಂದ್ವ ನೀತಿ ಹಾಗೂ ರಾಜಕೀಯ ನಾಟಕವಲ್ಲದೇ ಮತ್ತೇನು?".

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್