Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ನಡೆದಾಡುವ ದೇವರ 7ನೇ ವರ್ಷದ ಪುಣ್ಯ ಸ್ಮರಣೆ

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ತ್ರಿವಿಧ ದಾಸೋಹಿ
, ನಡೆದಾಡುವ ದೇವರು ಸಿದ್ಧಗಂಗಾ ಮಠದ ಶಿವೈಕ್ಯ ಡಾ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾಗಿ ಜನವರಿ-21ಕ್ಕೆ ಏಳು ವರ್ಷ ಪೂರ್ಣಗೊಳ್ಳಲಿದೆ.


ಈ ಹಿನ್ನೆಲೆ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮೀಜಿಗಳ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ನಡೆಯಲಿದೆ. ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್​​​​​ ಅವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗಿಯಾಗುತ್ತಿದ್ದಾರೆ. ಆ ಮೂಲಕ ಕರ್ನಾಟಕಕ್ಕೆ ಮೂರನೇ ಬಾರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಸಿದ್ಧಗಂಗಾ ಮಠದಲ್ಲಿ ಪೊಲೀಸ್ ಬಿಗಿಭದ್ರತೆ ನಿಯೋಜನೆ ಮಾಡಲಾಗಿದೆ.

ಉಪರಾಷ್ಟ್ರಪತಿ ಅವರ ವೇಳಾಪಟ್ಟಿ-
ತುಮಕೂರು ವಿವಿ ಹೆಲಿಪ್ಯಾಡ್​ನಿಂದ ನೇರವಾಗಿ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್​​​​​ ಅವರು ಸಿದ್ಧಗಂಗಾ ಮಠಕ್ಕೆ ಆಗಮಿಸುತ್ತಾರೆ. ಶ್ರೀಗಳ ಗದ್ದುಗೆಗೆ ಭೇಟಿ ನೀಡಿ ಪೂಜೆ ಸಲ್ಲಿಸಿ
, ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಮುಗಿದ ಬಳಿಕ ಹೆಲಿಪ್ಯಾಡ್​ನಿಂದ ನೇರವಾಗಿ ಬೆಂಗಳೂರಿಗೆ ತೆರಳಿದ್ದಾರೆ ಎಂದು ಅವರ ಪ್ರವಾಸದ ಟಿಪಿಯಲ್ಲಿ ವಿವರಿಸಲಾಗಿದೆ.

ಪೊಲೀಸ್ ಭದ್ರತೆ-ಎಸ್​​ಪಿ ಅಶೋಕ್
ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ ಅಶೋಕ್  ಮಾಧ್ಯಮಗಳೊಂದಿಗೆ ಮಾತನಾಡಿ
, ಉಪರಾಷ್ಟ್ರಪತಿಗಳ ಆಗಮನ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ. 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿಗಳು ಆಗಮಿಸುತ್ತಿದ್ದಾರೆ. ಸಿದ್ಧಗಂಗಾ ಮಠದ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುಮಾರು 10 ರಿಂದ 12 ಸಾವಿರ ಜನರು ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

1 ಸಾವಿರ ಪೊಲೀಸರ ನಿಯೋಜನೆ-
ಶ್ರೀಮಠದಲ್ಲಿ ಒಂದೇ ಕಾರ್ಯಕ್ರಮ ಇರುವುದು. ಈ ಕಾರ್ಯಕ್ರಮಕ್ಕೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
1 ಸಾವಿರ ಪೊಲೀಸರನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ. 3 ಕೆಎಸ್​​ಆರ್​ಪಿ ತುಕಡಿ, ಡಿಆರ್ ಸಿಬ್ಬಂದಿ, ಗುಪ್ತಚರ ಇಲಾಖೆಯ ಸಿಬ್ಬಂದಿ ಸೇರಿದಂತೆ 1 ಸಾವಿರ ಪೊಲೀಸರನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದು ಎಸ್ಪಿ ಅವರು ಹೇಳಿದ್ದಾರೆ.
ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್​​ ಅವರೊಂದಿಗೆ ರಾಜ್ಯಪಾಲರು
, ಕೇಂದ್ರ ಸಚಿವ ವಿ. ಸೋಮಣ್ಣ, ಡಾ. ಜಿ. ಪರಮೇಶ್ವರ್, ಸಂಸದರು, ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ತುಮಕೂರು ಎಸ್​​ಪಿ ಅಶೋಕ್ ಕೆವಿ ಹೇಳಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ