ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಗರದ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೈಗಾರಿಕಾ ಅಭಿವೃದ್ಧಿ ಹಾಗೂ ಯೋಜನೆಗಳ ಸಕಾಲಿಕ ಅನುಷ್ಠಾನ ಕುರಿತು ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.
ಸಭೆಯಲ್ಲಿ ರಾಜ್ಯದಲ್ಲಿ ಹೊಸ ಹೂಡಿಕೆಗಳು, ಮೂಲಸೌಕರ್ಯ ಕಲ್ಪಿಸುವಿಕೆ ಹಾಗೂ ಕೈಗಾರಿಕಾ ವಲಯದ ಪ್ರಗತಿ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಲಾಯಿತು.
ಈ ಪರಿಶೀಲನಾ ಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್. ಕೆ. ಅತೀಕ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್ ಸೇರಿದಂತೆ ಸರ್ಕಾರದ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.




