Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಪಿಯುಸಿ ಫಲಿತಾಂಶ ಸುಧಾರಣೆಯಲ್ಲಿ ಬದ್ದತೆ ಪ್ರಮುಖ ಪಾತ್ರವಹಿಸುತ್ತದೆ


ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪಿಯುಸಿ ಫಲಿತಾಂಶ ಸುಧಾರಣೆಯಲ್ಲಿ ಉಪನ್ಯಾಸಕರುಗಳ ಹಾಗೂ ವಿದ್ಯಾರ್ಥಿಗಳ ಬದ್ದತೆ ಪ್ರಮುಖ ಪಾತ್ರವಹಿಸುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪನಿರ್ದೇಶಕರಾದ ಆರ್.ಪುಟ್ಟಸ್ವಾಮಿ ತಿಳಿಸಿದರು.
ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ರಾಜ್ಯಶಾಸ್ತ್ರ ವಿಷಯದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.


ಪಿಹೆಚ್‌ಡಿ ಸಹಿತ ಹತ್ತು ಹಲವು ಪದವಿ ಪಡೆದ ಉಪನ್ಯಾಸಕರು ಎಷ್ಟೇ ಬುದ್ದಿವಂತರಾಗಿದ್ದರೂ ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ತಲುಪದೆ ಹೋದರೆ ತರಗತಿಗಳು ಯಶಸ್ವಿಯಾಗುವುದಿಲ್ಲ ಎಂದರು.

ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಬಿ.ಆರ್.ಮಲ್ಲೇಶ್ ಮಾತನಾಡಿ ಈ ಹಿಂದೆ ಉಪನ್ಯಾಸಕನಾಗಿ ಕೆಲಸ ನಿರ್ವಹಿಸುವಾಗ ನೆಮ್ಮದಿಯಿತ್ತು. ಬೋಧನೆ ಹೊರತು ಬೇರೆ ಯಾವುದೇ ಕಾರ್ಯಭಾರ ಇರಲಿಲ್ಲ. ಆದರೆ ಈಗ ಬೋಧನೆ ಸಹಿತ ಇನ್ನಿತರೆ ಕೆಲಸಗಳ ಒತ್ತಡದಲ್ಲಿ ಕಲಿಸುವುದು ಒಂದು ಭಾಗವಾಗಿ ಮಾತ್ರ ಉಳಿದಿದೆ ಎಂದು ಹೇಳಿದರು.

ರಾಜ್ಯಶಾಸ್ತ್ರ ವೇದಿಕೆಯ ಅಧ್ಯಕ್ಷ ಡಾ.ಜೆ.ಮೋಹನ್ ಪ್ರಾಸ್ತಾವಿಕ ಮಾತನಾಡಿ ಕಾರ್ಯಾಗಾರಗಳು ಫಲಿಶಾಂಶ ಹೆಚ್ಚುಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತವೆ. ಹೀಗಾಗಿ ಉಪನ್ಯಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.
ಪ್ರಾಂಶುಪಾಲ ವಿ.ಲೋಕೇಶ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಬದಲಾದ ಪಠ್ಯವಸ್ತು
, ಪ್ರಶ್ನೆಪತ್ರಿಕೆಗೆ ಅನುಗುಣವಾಗಿ ಬೋಧನಾ ವಿಧಾನದಲ್ಲಿ ಹೊಸತನ ಕಂಡುಕೊಳ್ಳಲು ಇಂತಹ ಕಾರ್ಯಾಗಾರಗಳು ಹೆಚ್ಚು ಸಹಕಾರಿಯಾಗುತ್ತವೆ ಎಂದರು.

ಹಿರಿಯ ಪ್ರಾಂಶುಪಾಲ ಹೆಚ್.ಬಿ.ನರಸಿಂಹಮೂರ್ತಿ, ಜಿ.ದೇವರಾಜ್, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಸ್.ದೇವೇಂದ್ರಪ್ಪ, ಸಂಪನ್ಮೂಲ ವ್ಯಕ್ತಿ ಡಾ.ಎನ್. ಪ್ರಭಾಕರ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಉಪನ್ಯಾಸಕಿ ಮೀರಾ ನಾಡಿಗ್ ಪ್ರಾರ್ಥಿಸಿದರು. ಉಪನ್ಯಾಸಕ ಬುಡೇನ್ ಸಾಬ್ ಸ್ವಾಗತಿಸಿದರು. ಪ್ರಾಂಶುಪಾಲೆ ಸರೋಜಮ್ಮ ವಂದಿಸಿದರು. ಉಪನ್ಯಾಸಕ  ಆರ್.ಚಂದ್ರಶೇಖರ್ ನಿರೂಪಿಸಿದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು