Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಿಎಪಿಎಂಸಿಎಸ್ ಗೆ ರೈತ ಸಂಘದಿಂದ ಸ್ಪರ್ಧೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಸ್ಥಳೀಯ ಚುನಾವಣೆಗಳಲ್ಲಿ
  ರೈತರು ಭಾಗವಹಿಸಿ ಅಧಿಕಾರ ಪಡೆಯಬೇಕು ಎಂಬ  ಉದ್ದೇಶದಿಂದ ತಾಲೂಕು ವ್ಯವಸಾಯೋತ್ಪನ್ನ ಸಹಕಾರಿ ಸಂಘದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ನಮ್ಮ  ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ನಮ್ಮ ಸಂಘದ ಸಕ್ರಿಯ ಕಾರ್ಯಕರ್ತ ತಿಪ್ಪುರು ತಿಮ್ಮಣ್ಣ ಅವರನ್ನು ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದ್ದು ಅ. 25ರಂದು ನಾಮಪತ್ರ ಸಲ್ಲಿಸಲಿದ್ದೇವೆ ಎಂದು ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್ ತಿಳಿಸಿದರು. 

ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು   ಕರ್ನಾಟಕ ಸಹಕಾರಿ ಕ್ಷೇತ್ರದಲ್ಲಿ ವ್ಯವಸಾಯೋತ್ಪನ್ನ ಸಹಕಾರ ಸಂಘಗಳು ಬಹಳ ಗಟ್ಟಿಯಾಗಿ, ವ್ಯವಸ್ಥಿತವಾಗಿ ಕೃಷಿ ಕ್ಷೇತ್ರದಲ್ಲಿ ರೈತರ ಸಹಕಾರಿಯಾಗಿ ಹಲವು ಅವಶ್ಯಕತೆಗಳನ್ನು ಪೂರೈಸುವ ಹೆಮ್ಮೆಯ ಸಂಸ್ಥೆಯಾಗಿ ರೂಪುಗೊಂಡಿದ್ದು, ರೈತರ ಪಾಲಿನ ಆಶಾಕಿರಣವಾಗಿದೆ. ಇಂತಹ ಸಹಕಾರಿ ಸಂಸ್ಥೆಗಳಲ್ಲಿ ರಾಜಕೀಯ ಪಕ್ಷಗಳು ತಮ್ಮ ತಮ್ಮ ಹೈಕಮಾಂಡ್ ಒತ್ತಡಕ್ಕೆ ಮಣಿದು ಸ್ಥಳೀಯ ಹಿತಾಸಕ್ತಿಗಳನ್ನ ಕಡೆಗಣಿಸುತ್ತಿರುವುದು ದುರಂತದ ಸಂಗತಿಯಾಗಿದೆ ಎಂದರು. 

 ನಮಗೆ ಎಂಟು ಅಭ್ಯರ್ಥಿಗಳು ನಿಲ್ಲಿಸುವ  ಅವಕಾಶವಿದ್ದರೂ  ಒಂದೇ ಅಭ್ಯರ್ಥಿಯನ್ನು  ಸೂಚಿಸುವ ಮೂಲಕ  ತಾಲೂಕಿನ ಹಲವು ಸಂಘ ಸಂಸ್ಥೆಗಳು  ಕನ್ನಡಪರ, ದಲಿತಪರ ಹಾಗೂ ಪ್ರಗತಿಪರ ಸಂಘಟನೆಗಳು ಮತ್ತು ಹೋರಾಟಗಾರರು ಒಟ್ಟಾಗಿ  ಈ ಚುನಾವಣೆ ಎದುರಿಸಲು ಮುಂದಾಗಿದ್ದೇವೆಚುನಾವಣಾ ಪ್ರಕ್ರಿಯೆಯಲ್ಲಿ ಮತದಾರರಿಗೆ ಯಾವುದೇ ಆಮಿಷಗಳನ್ನು ನೀಡದೆ ಪ್ರಾಮಾಣಿಕ ಚುನಾವಣಾ ನಿಯಮಗಳನ್ನು ಅನುಸರಿಸುವ ಮೂಲಕ  ಇತರರಿಗೆ ಮಾದರಿಯಾಗುವಂತೆ  ಈ ಚುನಾವಣೆಯಲ್ಲಿ ಭಾಗವಹಿಸಿ ಗೆಲುವು ಸಾಧಿಸಲಿದ್ದೇವೆ  ಎಂದರು.  

 ಕನ್ನಡ ಪಕ್ಷದ ರಾಜ್ಯ ಮುಖಂಡರಾದ ಸಂಜೀವ್ ನಾಯಕ್ ಮಾತನಾಡಿ ಪ್ರಸ್ತುತ ಕಾಲಮಾನದಲ್ಲಿ  ಚುನಾಯಿತ ಪ್ರತಿನಿಧಿಗಳು  ಕೇವಲ ಹೈಕಮಾಂಡ್ ಕೈಗೊಂಬೆಗಳಾಗಿ ಹೇಳಿದಂತೆ ಕೇಳುವ ಪರಿಸ್ಥಿತಿ ಎದುರಾಗಿದೆ ರಾಜಕೀಯ ಪಕ್ಷಗಳು ಸ್ಥಳೀಯ ಚುನಾವಣೆಗಳಲ್ಲಿ ಭಾಗವಹಿಸಿ ಅಧಿಕಾರ ವಹಿಸಿಕೊಂಡರು  ರೈತರಿಗೆ ಒಳಿತಾಗುವುದು ಕಡಿಮೆಯೇ  ಹಾಗಾಗಿ ಸ್ಥಳೀಯ ಮಟ್ಟದಲ್ಲಿ ನಡೆಯುವ  ಚುನಾವಣೆಗಳಲ್ಲಿ  ಪ್ರಾದೇಶಿಕ ಪಕ್ಷಗಳ ಭಾಗವಹಿಸುವಿಕೆ  ಅಗತ್ಯವಾಗಿದೆ ಎಂದರು. 

 ಅ.25ರಂದು ತಾಲೂಕಿನ ಹಲವು ಸಂಘಟನೆಗಳ ಪ್ರಮುಖರು ಹಾಗೂ ರೈತ ಮುಖಂಡರೊಂದಿಗೆ  ನಗರದ ನೆಲದಾಂಜನೇಯ  ಸ್ವಾಮಿ ದೇವಾಲಯದಿಂದ ಹೊರಟು ಟಿಎಪಿಎಂಸಿಎಸ್ ಕಚೇರಿ ತಲುಪಿ ನಾಮಪತ್ರ ಸಲ್ಲಿಸಲಿದ್ದೇವೆ ಎಂದರು. 

 ಪ್ರಾಂತ ರೈತ ಸಂಘದ ಮುಖಂಡರಾದ  ಚಂದ್ರ ತೇಜಸ್ವಿ ಮಾತನಾಡಿ  ಇದೊಂದು ಉತ್ತಮ ಅವಕಾಶ ಚುನಾವಣೆಯಲ್ಲಿ ಎಲ್ಲರೂ ಪ್ರಾಮಾಣಿಕವಾಗಿ  ಶ್ರಮಿಸುವ ಮೂಲಕ  ನಮ್ಮ ಅಭ್ಯರ್ಥಿ ಗೆಲುವಿಗೆ ಕಾರಣಕರ್ತರಾಗಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ರೈತರು ಅಧಿಕಾರವನ್ನು ಪಡೆಯುವ ಮೂಲಕ ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿಪರ ಕಾರ್ಯಗಳನ್ನು ಮಾಡಬಹುದಾಗಿದೆ. ನಮ್ಮ ಸಂಘದ ವತಿಯಿಂದ  ಕರ್ನಾಟಕ ರಾಜ್ಯ ರೈತ ಸಂಘದ ಅಭ್ಯರ್ಥಿ ತಿಮ್ಮಣ್ಣ ಅವರ ಗೆಲುವಿಗೆ ಸಂಪೂರ್ಣ ಬೆಂಬಲ ನೀಡಲಿದ್ದೇವೆ ಎಂದರು. 

 ಸುದ್ದಿಗೋಷ್ಠಿಯಲ್ಲಿ ಸ್ಥಳೀಯ  ರೈತ ಮುಖಂಡರು, ಕನ್ನಡಪರ ಹೋರಾಟಗಾರರು, ಪ್ರಗತಿಪರ ಚಿಂತಕರು, ದಲಿತ ಮುಖಂಡರು  ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ