Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರ ಅಳಿಯನ ವಿರುದ್ಧ ದೂರು ದಾಖಲು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯನ ವಿರುದ್ಧ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಭೂ ಹಗರಣಕ್ಕೆ  ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಕೆಯಾಗಿದೆ.


ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್‌ನಲ್ಲಿನ ಐದು ಎಕರೆ ಭೂಮಿಯನ್ನು ಕೆಐಎಡಿಬಿಯಿಂದ ಸಿಎ ಸೈಟ್​ ಹೆಸರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಇವರ ಅಳಿಯ ಸಿದ್ದಾರ್ಥ ವಿಹಾರ ಟ್ರಸ್ಟ್​ಗೆ ಮಂಜೂರು ಮಾಡಿಕೊಂಡಿರುವ ಆರೋಪ ಕೇಳಿ ಬಂದಿತ್ತು. ಏರೋಸ್ಪೇಸ್, ರಿಸರ್ಚ್ ಇತ್ಯಾದಿಗಳಲ್ಲಿ ಅನುಭವವಿಲ್ಲದಿದ್ದರೂ ಭರ್ತಿ ಮಾಡದ ಅರ್ಜಿ ಸಲ್ಲಿಸಿ ಭೂಮಿ‌‌ ಮಂಜೂರು ಪಡೆದಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಮತ್ತು ಇವರ ಅಳಿಯನ ವಿರುದ್ಧ ವಿಜಯ ರಾಘವನ್ ಎಂಬುವರು ಖಾಸಗಿ ದೂರು ನೀಡಿರುವ ಘಟನೆ ಜರುಗಿದೆ.


ಇದರ ಜೊತೆಯಲ್ಲಿ 2014ರಲ್ಲಿ ಬಿಟಿಎಂ 4ನೇ ಸ್ಟೇಜ್​ನ ಎರಡನೇ ಬ್ಲಾಕ್​ನಲ್ಲಿ 2 ಎಕರೆ ಬಿಡಿಎ ವ್ಯಾಪ್ತಿಯ ಸಿಎ ನಿವೇಶನವನ್ನು ಪರಭಾರೆ ಮಾಡಿಕೊಳ್ಳಲಾಗಿದೆ. ಜೊತೆಗೆ ದಲಿತರೆಂದು ಶೇಕಡಾ 50ರಷ್ಟು ಸಬ್ಸಿಡಿ ಪಡೆದಿದ್ದಾರೆ ಎಂದು ಮತ್ತೊಂದು ದೂರು ದಾಖಲಿಸಲಾಗಿದೆ.

ಈಗಾಗಲೇ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಭೂಮಿ ಹಂಚಿಕೆ ಪ್ರಕರಣ ರಾಜ್ಯಪಾಲರ ಅಂಗಳ ತಲುಪಿತ್ತು. ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರು ಕಾನೂನು ತಜ್ಞರಿಂದ ಮಾಹಿತಿ ಪಡೆದಿದ್ದರು.
ತಜ್ಞರ ಅಭಿಪ್ರಾಯವೇನು
?


ರಾಜ್ಯಪಾಲರಿಗೆ ಸಲ್ಲಿಕೆ ಮಾಡಿರುವ ಅಭಿಪ್ರಾಯದಲ್ಲಿ ತರಾತುರಿಯಲ್ಲಿ ಭೂಮಿ ಹಂಚಿಕೆ ಮಾಡಿರುವ ಬಗ್ಗೆ ತಜ್ಞರು ಸಂಶಯ ವ್ಯಕ್ತಪಡಿಸಿದ್ದರು. ಅರ್ಜಿ ಸಲ್ಲಿಕೆಯಾದ ಎರಡೇ ದಿನಗಳಲ್ಲಿ ಭೂ ಹಂಚಿಕೆ ಪ್ರಕ್ರಿಯೆ ಮಾಡಿರುವುದರಿಂದ ಪ್ರಶ್ನೆ ಮೂಡಿದೆ ಎಂದಿದ್ದರು.


ನಿವೇಶನ ವಾಪಸ್​ ​-
​ ಕೆಐಎಡಿಬಿಯಿಂದ ಅಕ್ರಮವಾಗಿ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್ ನಿವೇಶನ ಪಡೆದಿದೆ ಎಂದು ವಿಪಕ್ಷಗಳು ಆರೋಪ ಮಾಡಿದ್ದರ ಬೆನ್ನಲ್ಲೇ ರಾಹುಲ್​, ಮಲ್ಲಿಕಾರ್ಜುನ ಖರ್ಗೆ ಅವರು ಕೆಐಎಡಿಬಿಗೆ ಪತ್ರ ಬರೆದು ಕೌಶಲ ಅಭಿವೃದ್ಧಿ ತರಬೇತಿಗಾಗಿ ನಿವೇಶನ ಪಡೆಯಲಾಗಿತ್ತು. ಆದರೆ
, ಅನಗತ್ಯ ವಿವಾದ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಸ್ವಯಂಪ್ರೇರಣೆಯಿಂದ ನಿವೇಶನವನ್ನು ವಾಪಸ್​ ನೀಡಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದನ್ನು ಸ್ಮರಿಸಬಹುದಾಗಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ