Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಾಯುಕ್ತದ ಮೂವರು ಐಪಿಎಸ್‌ಅಧಿಕಾರಿಗಳ ವಿರುದ್ಧ ದೂರು

Advertisement
ಚಂದ್ರವಳ್ಳಿ ನ್ಯೂಸ್, ಮೈಸೂರು:
ಮುಡಾ ಹಗರಣದಲ್ಲಿ ಸುಳ್ಳು ವರದಿ ಸಲ್ಲಿಸಿದ ಲೋಕಾಯುಕ್ತದ ಮೂವರು ಹಿರಿಯ ಐಪಿಎಸ್‌ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತಿ ಆಯೋಗಕ್ಕೆ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ದೂರು ಸಲ್ಲಿಸಿದ್ದಾರೆ.


ಮಾಧ್ಯಮಗಳ ಜೊತೆ ಮಾತನಾಡಿದ ಸ್ನೇಹಮಯಿ ಕೃಷ್ಣ, "ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಕುಟುಂಬ ಭಾಗಿಯಾಗಿರುವ ಕುರಿತು ಸಾಕಷ್ಟು ಸಾಕ್ಷಿ, ಆಧಾರಗಳು ಇದ್ದರೂ, ಆರೋಪಿಗಳನ್ನು ರಕ್ಷಣೆ ಮಾಡಲು ಲೋಕಾಯುಕ್ತ ಪೊಲೀಸರು ಸುಳ್ಳು ವರದಿಗಳನ್ನು ಸಲ್ಲಿಸಿದ್ದರು.
ಈ ಮೂವರು ಲೋಕಾಯುಕ್ತ
ADGP ಮನೀಷ್ ಖರ್ಬೀಕರ್‌, IGP ಸುಬ್ರಮಣ್ಯೇಶ್ವರ್‌ರಾವ್‌ ಹಾಗೂ ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದ್ದೇಶ್‌ವಿರುದ್ಧ ಕೇಂದ್ರದ ಜಾಗೃತ ಆಯೋಗಕ್ಕೆ ಮೂರು ಪುಟದ ದೂರನ್ನು ಇಮೇಲ್‌ಹಾಗೂ ರಿಜಿಸ್ಟರ್‌ಅಂಚೆ ಮೂಲಕ ಕಳುಹಿಸಿದ್ದೇನೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದರು.

ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ವರದಿಯನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿದ್ದೇನೆ. ಈ ವರದಿಯಲ್ಲಿ ಲೋಕಾಯುಕ್ತ ಪೊಲೀಸರು ಯಾವುದೇ ದಾಖಲಾತಿಗಳನ್ನು ಪರಿಶೀಲಿಸದೆ, ಯಾರನ್ನೋ ರಕ್ಷಣೆ ಮಾಡಲು ಸುಳ್ಳು ವರದಿ ತಯಾರಿಸಿ ನೀಡಿದ್ದಾರೆ. ಅದರಲ್ಲಿ ಒಂದು ಉದಾಹರಣೆ ಎಂದರೆ, ಸಿದ್ದರಾಮಯ್ಯ ಅವರ ಭಾಮೈದ ಮಲ್ಲಿಕಾರ್ಜುನ ಸ್ವಾಮಿ 1998ರಲ್ಲಿ ಪ್ರಕರಣದ ಎ4 ಆರೋಪಿ ದೇವರಾಜ್‌ಹೆಸರಿನಲ್ಲಿ ಸುಳ್ಳು ಪತ್ರ ಸೃಷ್ಟಿಸಿದ್ದ. ಆ ಪತ್ರಕ್ಕೆ ದೇವರಾಜು ಸಹಿಯನ್ನು ಮಲ್ಲಿಕಾರ್ಜುನ ಸ್ವಾಮಿ ಮಾಡಿ, ಅಪರಾಧ ಕೃತ್ಯವೆಸಗಿದ್ದಾರೆ. ಈ ದಾಖಲೆಗಳು ವರದಿಯಲ್ಲಿ ಇವೆ. ಆದರೂ ಇದೆಲ್ಲ ಸಾಕ್ಷಿಗಳು ಇದ್ದರೂ, ಲೋಕಾಯುಕ್ತದ ಐಪಿಎಸ್‌ಅಧಿಕಾರಿಗಳು ಸಾಕ್ಷಿಯಿಲ್ಲ ಎಂದು ಸುಳ್ಳು ವರದಿ ನೀಡಿದ್ದಾರೆ. ಯಾರನ್ನೋ ರಕ್ಷಣೆ ಮಾಡಲು ಈ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಕೇಂದ್ರ ಜಾಗೃತಿ ಆಯೋಗಕ್ಕೆ ದೂರು ಸಲ್ಲಿಸಿದ್ದೇನೆ" ಎಂದು ಸ್ನೇಹಮಯಿ ಕೃಷ್ಣ ಮಾಹಿತಿ ನೀಡಿದರು.

ಲೋಕಾಯುಕ್ತ ವರದಿಯ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದು, ಇದರ ಬಗ್ಗೆ ಇನ್ನೂ ದಿನಾಂಕ ನಿಗಧಿಯಾಗಿಲ್ಲ. ನ್ಯಾಯಾಲಯದ ಮುಂದೆ ಬಂದ ನಂತರ ದಾಖಲೆ ಸಮೇತ ಈ ವಿಚಾರವನ್ನು ಕೋರ್ಟ್​ಗೆ ಮನವರಿಕೆ ಮಾಡಿಕೊಡುತ್ತೇನೆ. ಮುಡಾ ಹಗರಣದ ಸಮಗ್ರ ತನಿಖೆ ನಡೆಸುವಂತೆ ಈ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಹೈಕೋರ್ಟ್​ನಲ್ಲಿ ಮನವಿ ಮಾಡಿರುವ ವಿಚಾರದಲ್ಲಿ ವಕೀಲರು ವಾದ ಮಂಡಿಸುತ್ತಾರೆ. ಹಾಗೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಾನು ವಾದ ಮಂಡಿಸುತ್ತೇನೆ ಎಂದು ಹೇಳಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ