Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಅವಧಿ ವಿಸ್ತರಣೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರದ ಆದೇಶ ದಿನಾಂಕ 2024 ನೇ ನವೆಂಬರ್ 12 ರಲ್ಲಿ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ಸಲ್ಲಿಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಡಾ: ಹೆಚ್.ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿರುತ್ತದೆ.

ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು (Emperical Data) ಸಂಗ್ರಹಿಸಲು ಹೊಸದಾದ ಸಮೀಕ್ಷೆಯನ್ನು ನಡೆಸಲು ದಿನಾಂಕ: 27-03-2025 ರ ಆಯೋಗದ ಮಧ್ಯಂತರ ವರದಿಯಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾದ ಹಿನ್ನೆಲೆಯಲ್ಲಿ ಸಮೀಕ್ಷೆಯನ್ನು ದಿನಾಂಕ: 05-05-2025 ರಿಂದ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವುದರ ಮೂಲಕ ರಾಜ್ಯಾದ್ಯಂತ ಈಗಾಗಲೇ ಪ್ರಾರಂಭಿಸಲಾಗಿರುತ್ತದೆ.

ಬಿಬಿಎಂಪಿ ವ್ಯಾಪ್ತಿಯ ವಲಯಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ಇನ್ನೂ ಪ್ರಗತಿಯಾಗಬೇಕಾಗಿರುವುದರಿಂದ, ಮಳೆ/ಹವಾಮಾನ ವೈಪರೀತ್ಯ ಕಾರಣಗಳಿಂದಾಗಿ, ಅನೇಕ ಪರಿಶಿಷ್ಟ ಜಾತಿ ಸಂಘಗಳಿಂದ ಮತ್ತು ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕೋರಿಕೆಯ ಮೇರೆಗೆ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲು ಅನುವಾಗುವಂತೆ ದಿನಾಂಕವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ.

ಮನೆ-ಮನೆ ಭೇಟಿ ನೀಡಿ ಸಮೀಕ್ಷೆಯು ದಿನಾಂಕ:26-05-2025 ರಿಂದ 29-05-2025 ರವರೆಗೆ ವಿಸ್ತರಿಸಲಾಗಿದೆ. ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) - 03 ದಿನಗಳ ಕಾಲ - ಮೇ 30, 31 ಹಾಗೂ 01 ನೇ ಜೂನ್ -2025 ರವರೆಗೆ ಮರು ನಿಗದಿಪಡಿಸಲಾಗಿದೆ ಮತ್ತು ಆನ್ ಲೈನ್ ಮೂಲಕ ಸ್ವಯಂ ಘೋಷಣೆ- ದಿನಾಂಕ: 01-06-2025 ರವರೆಗೆ ಮುಂದುವರೆಯಲಿದೆ ಎಂದು ಏಕ ಸದಸ್ಯ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ