Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ - 2025 - ಅವಧಿ ವಿಸ್ತರಣೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ (ಉಪ ವರ್ಗೀಕರಣ) ಕುರಿತಾಗಿ ವರದಿ ಸಲ್ಲಿಸಲು ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಡಾ. ಹೆಚ್.ಎನ್.ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿದ್ದು ಸದರಿ ಆಯೋಗವು,  2025ನೇ ಮಾರ್ಚ್ ರಂದು ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿದ ಆಧಾರದ ಮೇರೆಗೆ ವೈಜ್ಞಾನಿಕವಾದ ದತ್ತಾಂಶವನ್ನು (Empirical Data) ಸಂಗ್ರಹಿಸಲು ಪರಿಶಿಷ್ಟ ಜಾತಿ ಕುಟುಂಬಗಳ ಸಮಗ್ರ ಸಮೀಕ್ಷೆಯನ್ನು 2025 ನೇ ಏಪ್ರಿಲ್  05 ರಿಂದ ಕೈಗೊಳ್ಳಲಾಗುತ್ತಿದೆ.

ಪ್ರಸ್ತುತ ಕರ್ನಾಟಕ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ - 2025 ರನ್ನು  2025 ನೇ ಜೂನ್ 08 ರವರೆಗೆ ವಿಶೇಷ ಶಿಬಿರಗಳು ಹಾಗೂ online ನಲ್ಲಿ ಸ್ವಯಂ ಘೋಷಣೆಗಳನ್ನು ಒಳಗೊಂಡಂತೆ ಒಟ್ಟು 2 ವಿಧಾನಗಳಲ್ಲಿ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.

ಈಗಾಗಲೇ 2025ನೇ ಜೂನ್ 06 ವರೆಗೆ ರಾಜ್ಯಾದ್ಯಂತ ನಡೆಸಲಾದ ಸಮೀಕ್ಷೆಯಲ್ಲಿ ಶೇ.90.00 ರಷ್ಟು ಪ್ರಗತಿಯನ್ನು ಸಾಧಿಸಲಾಗಿರುತ್ತದೆ.  ಉಳಿದಂತೆ ಸುಮಾರು ಶೇ. 10 ರಷ್ಟು ಪ್ರಗತಿಯನ್ನು ಸಾಧಿಸಬೇಕಾಗಿರುತ್ತದೆ.
ಕೆಲವು ಪರಿಶಿಷ್ಟ ಜಾತಿಗೆ ಸೇರಿದ ಸಂಘ ಸಂಸ್ಥೆಗಳು ಸಮೀಕ್ಷೆಯ ಅವಧಿಯನ್ನು ಪುನಃ ವಿಸ್ತರಿಸಬೇಕೆಂದು ಮನವಿಯನ್ನು ಸಲ್ಲಿಸಿರುತ್ತಾರೆ. ಆದರೆ, ರಾಜ್ಯದಲ್ಲಿ ಶಾಲೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷೆಗೆ ಗಣತಿದಾರರನ್ನಾಗಿ ನೇಮಕ ಮಾಡಲಾಗಿದ್ದ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಿಂದ ಬಿಡುಗಡೆಗೊಳಿಸಲಾಗಿದೆ.

ಹೀಗಾಗಿ, ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಇವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರು 2025 ಜೂನ್ ರಿಂದ ರಾಜ್ಯದಲ್ಲಿನ ಒಟ್ಟು 9400 ನಾಗರೀಕ ಸೇವಾ ಕೇಂದ್ರಗಳಾದ, "ಕರ್ನಾಟಕ ಒನ್" (Karnataka one) 'ಬೆಂಗಳೂರು ಒನ್" (Bengaluru one) " " (Grama one)  ಹಾಗೂ 198  ಬಿ.ಬಿ.ಎಂ. ಪಿ ವಾರ್ಡ್ ಕಚೇರಿ" (BBMP ward offices) ಗಳಿಗೆ ಭೇಟಿ ನೀಡಿ 2025ನೇ ಜೂನ್ 22 ರವರೆಗೂ ತಮ್ಮ ಮಾಹಿತಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಇದಲ್ಲದೆ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸದರಿ ಅವಕಾಶವನ್ನು ಕಲ್ಪಿಸಲಾಗುವುದು. ಸದರಿ ಮಾಹಿತಿಯನ್ನು ನಮೂದಿಸಲು ಸಾರ್ವಜನಿಕರಿಗೆ, ತಮ್ಮ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ಸಂಖ್ಯೆಯ ಅವಶ್ಯಕತೆಯಿರುತ್ತದೆ.

ಮುಂದುವರೆದು, online ನಲ್ಲಿ ಪರಿಶಿಷ್ಟ ಜಾತಿ ಕುಟುಂಬದವರು ಸ್ವಯಂ ಘೋಷಣೆ ಮಾಡಿಕೊಳ್ಳಲು https://schedulecastesurvey.karnataka.gov.in/selfdeclaration  ಲಿಂಕ್ ಮೂಲಕ  2025ನೇ ಜೂನ್ 22 ರವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಈ ಸಮೀಕ್ಷೆಯನ್ನು ಪೂರ್ಣಗೊಳಿಸಲು ಸಹಕರಿಸಲು ಪರಿಶಿಷ್ಟ ಜಾತಿ ಒಳ ಮೀಸಲಾತಿ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ