LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿ ಹೋರಾಟದ ನೆಪದಲ್ಲಿ ಬೆಂಕಿ ಹಚ್ಚಲು ಯತ್ನಿಸಿದ 'ಮುಲ್ಲಾ'ನ ಕೃತ್ಯ ಖಂಡಿಸಿದ್ದೇನೆಯೇ ಹೊರತು ಮುಸ್ಲಿಂ ಸಮುದಾಯವನ್ನಲ್ಲ: ಸಿ.ಟಿ. ರವಿ ಸ್ಪಷ್ಟನೆ 

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
"ದೆಹಲಿಯಲ್ಲಿ ವಿದ್ಯಾರ್ಥಿ ಹೋರಾಟದ ಹೆಸರಿನಲ್ಲಿ ಜೀಪಿನ ಪೆಟ್ರೋಲ್ ಟ್ಯಾಂಕ್‌ಗೆ ಬೆಂಕಿ ಹಚ್ಚಲು ಹೋದ ವ್ಯಕ್ತಿಯ ಕೃತ್ಯ ಖಂಡಿಸಿ ಮಾತನಾಡಿದ್ದೇನೆಯೇ ಹೊರತುನಾನು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾತನಾಡಿಲ್ಲ," ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಸ್ಪಷ್ಟಪಡಿಸಿದ್ದಾರೆ.

ತಮ್ಮ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿ ನೋಟಿಸ್ ನೀಡಲು ನಿವಾಸಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರುರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಓರ್ವನ ಕೃತ್ಯ ಖಂಡಿಸಿದರೆ ಸಮುದಾಯದ ಅವಹೇಳನವೇ?:
"
ನಾನು ವಾಸ್ತವ ವಿಚಾರವನ್ನು ಜನರ ಮುಂದಿಟ್ಟಿದ್ದೇನೆ. ತಪ್ಪನ್ನು ತಪ್ಪು ಎಂದು ಹೇಳುವುದರಲ್ಲಿ ಯಾವುದೇ ಹಿಂಜರಿಕೆಯಿಲ್ಲ. ಓರ್ವ 'ಮುಲ್ಲಾ'ನ ತಪ್ಪಾದ ನಡೆಯನ್ನು ಖಂಡಿಸಿದ ತಕ್ಷಣ ಅದು ಇಡೀ ಸಮುದಾಯದ ಅವಹೇಳನವಾಗುವುದಿಲ್ಲ. ಪೊಲೀಸರು ಯಾವ ನಿಯಮದ ಅಡಿಯಲ್ಲಿ ನನ್ನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ?" ಎಂದು ಪ್ರಶ್ನಿಸಿದರು.

ಪೊಲೀಸರು ಆಡಳಿತ ಪಕ್ಷದ ಕೈಗೊಂಬೆ:
ಪೊಲೀಸರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, "ಪೂರ್ವ ನಿರ್ಧರಿತ ಕಾರ್ಯಕ್ರಮಗಳಿರುವುದರಿಂದ ಎರಡು ದಿನಗಳ ಬಳಿಕ ಖುದ್ದಾಗಿ ಠಾಣೆಗೆ ಭೇಟಿ ನೀಡುವುದಾಗಿ ತಿಳಿಸಿದ್ದೆ. ಹೀಗಿದ್ದರೂ ಪೊಲೀಸರು ಆಡಳಿತ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿರುವುದು ನಿಜಕ್ಕೂ ಆಘಾತಕಾರಿ ಬೆಳವಣಿಗೆ," ಎಂದು ದೂರಿದರು.

ತಮ್ಮ ಹೇಳಿಕೆಗೆ ಬದ್ಧವಾಗಿರುವುದಾಗಿ ಪುನರುಚ್ಚರಿಸಿದ ಸಿ.ಟಿ. ರವಿವಾಸ್ತವ ವಿಚಾರವನ್ನು ಹೇಳಿರುವುದಕ್ಕೆ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲ್ಲುಗುದಿಗೆ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಭಕ್ತಿ ಭಾವದಿಂದ ನಡೆದ ನಾಗ ಪಂಚಮಿ ಆಚರಣೆಬ್ಯಾಂಕ್ ಸರ್ಕಲ್ ಫುಟ್ ಪಾತ್ ಒತ್ತುವರಿ:ಸ್ಥಳೀಯರ ಆಕ್ರೋಶಪೌರಕಾರ್ಮಿಕನ ಪುತ್ರನಿಗೆ ಒಲಿದ ಸಚಿವ ಸ್ಥಾನನರಕಸದೃಶ ಬದುಕು - ಚರಂಡಿ ನೀರೆಲ್ಲಾ ರಸ್ತೆಗೆ!, ಸ್ವಚ್ಛತೆ ಇಲ್ಲದ ಊರು, ರೋಗಗಳ ತವರು!ಆ.22 ರಾಜ್ಯ ಮಟ್ಟದ ಕನ್ನಡ ಕರೋಕೆ ಸ್ಪರ್ಧೆ, ಆ.23ರಂದು ಗಾಯನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆಪೋಷಕರ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ : ರೈತ ಮುಖಂಡ ಮಹೇಶ್ವರಪ್ಪಪರಿಸರ ಮತ್ತು ಆಧ್ಯಾತ್ಮದ ಸಮನ್ವಯದ 'ನಾಗರ ಪಂಚಮಿ':ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ 'ಕ್ವಾಂಟಮ್ ಫೌಂಡ್ರಿ' ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಗ್ಯಾರಂಟಿ ಹೆಸರಲ್ಲಿ ಕನ್ನಡಿಗರ ಜೇಬಿಗೆ ಕನ್ನ: ಜೆಡಿಎಸ್ ತೀವ್ರ ಆಕ್ರೋಶ