Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಬಸವ ಹರಳಯ್ಯ ಸ್ವಾಮೀಜಿ ಮೇಲಿನ ಹಲ್ಲೆ ಖಂಡನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ಯುವ ಘಟಕ ಆಗ್ರಹ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶ್ರೀಮಠದ ಶ್ರೀ ಶ್ರೀ ಬಸವ ಹರಳಯ್ಯ ಮಹಾಸ್ವಾಮೀಜಿಗಳ ಮೇಲೆ ನಡೆದಿರುವ ಹಲ್ಲೆ ಹಾಗೂ ಜಾತಿ ನಿಂದನೆ ಪ್ರಕರಣವನ್ನು ಚಿತ್ರದುರ್ಗ ಜಿಲ್ಲಾ ಜೆಡಿಎಸ್ ಯುವ ಘಟಕ ಮತ್ತು ಕಾನೂನು ವಿಭಾಗ ತೀವ್ರವಾಗಿ ಖಂಡಿಸಿದೆ.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲರಾಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ನೈತಿಕ ಹೊಣೆ ಹೊತ್ತು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಪ್ರತಾಪ್ ಜೋಗಿ ಒತ್ತಾಯಿಸಿದ್ದಾರೆ.

ಹಿರಿಯೂರು ತಾಲ್ಲೂಕಿನಲ್ಲಿ ಪ್ರಸ್ತುತ ಶಾಸಕರು ಇಲ್ಲದೇ ಇರುವುದರಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಇದರ ಪರಿಣಾಮವಾಗಿ ಶ್ರೀ ಬಸವ ಹರಳಯ್ಯ ಸ್ವಾಮೀಜಿಗಳ ಮೇಲೆ ಹಲ್ಲೆ ಹಾಗೂ ಜಾತಿ ನಿಂದನೆ ನಡೆದಿದ್ದು, ಈ ಸಂಬಂಧ ಈಗಾಗಲೇ ಪ್ರಕರಣ ದಾಖಲಾಗಿದೆ. ಹಲ್ಲೆಯಿಂದಾಗಿ ತೀವ್ರವಾಗಿ ಗಾಯಗೊಂಡಿರುವ ಶ್ರೀಗಳು ಸದ್ಯ ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಆಕ್ರೋಶ:
ಚಿತ್ರದುರ್ಗ ಜೆಡಿಎಸ್ ಯುವ ಘಟಕ ಹಾಗೂ ಕಾನೂನು ವಿಭಾಗದ ತಂಡವು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಸ್ವಾಮೀಜಿಗಳ ಆರೋಗ್ಯ ವಿಚಾರಿಸಿದೆ. ಈ ಸಂದರ್ಭದಲ್ಲಿ ಶ್ರೀಗಳ ಎದೆ
, ಹೊಟ್ಟೆ ಹಾಗೂ ದೇಹದ ಇತರೆ ಭಾಗಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿರುವುದನ್ನು ವೈದ್ಯರು ಹಾಗೂ ಸ್ವಾಮೀಜಿಗಳು ಖಚಿತಪಡಿಸಿದ್ದಾರೆ.

ಘಟನೆ ನಡೆದು ಇಷ್ಟಾದರೂ ಪೊಲೀಸ್ ಇಲಾಖೆ ನಿರ್ಲಕ್ಷ್ಯ ವಹಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಸ್ವಾಮೀಜಿಗಳ ಪ್ರಾಣಕ್ಕೆ ಅಪಾಯವಿರುವ ಹಿನ್ನೆಲೆಯಲ್ಲಿ, ರಕ್ಷಣೆ ಕೋರಿ ಹಿರಿಯೂರು ತಾಲ್ಲೂಕು ಡಿವೈಎಸ್ಪಿ ಅವರಿಗೆ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿಲ್ಲ. ಅಲ್ಲದೆ, ಇದುವರೆಗೆ ಯಾವುದೇ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಸ್ಥಿತಿಯನ್ನು ಪರಿಶೀಲಿಸದೇ ಇರುವುದು ಅತ್ಯಂತ ವಿಷಾದನೀಯ ಎಂದು ಪ್ರತಾಪ್ ಜೋಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಪ್ರಮುಖರ ಒತ್ತಾಯಗಳು:
ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಹಲ್ಲೆಕೋರರ ವಿರುದ್ಧ ಸೂಕ್ತ ತನಿಖೆ ನಡೆಸಬೇಕು.

ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಸಂಗ್ರಹಿಸಿ, ತಪ್ಪಿತಸ್ಥರನ್ನು ತಕ್ಷಣ ಬಂಧಿಸಬೇಕು.

ಶ್ರೀಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತದಿಂದಲೇ ಸೂಕ್ತ ಉನ್ನತ ಚಿಕಿತ್ಸೆ ಹಾಗೂ ಸೂಕ್ತ ಪೊಲೀಸ್ ರಕ್ಷಣೆಯನ್ನು ಒದಗಿಸಬೇಕು.

ಸ್ವಾಮೀಜಿಗಳ ಆರೋಗ್ಯ ವಿಚಾರಣೆಯ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಪ್ರತಾಪ್ ಜೋಗಿ .ಎನ್, ವಕೀಲರಾದ ರಾಜಣ್ಣ, ಜೆಡಿಎಸ್ ಕಾನೂನು ವಿಭಾಗದ ಉಪಾಧ್ಯಕ್ಷ ಅಶೋಕ್ ಬೆಳಗಟ್ಟ, ಪ್ರಧಾನ ಕಾರ್ಯದರ್ಶಿ ರಮೇಶ್, ಜಿಲ್ಲಾ ಕಾರ್ಯದರ್ಶಿ ಗುರುಮೂರ್ತಿ, ಮಲ್ಲಿಕಾರ್ಜುನ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.