Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

'ಮತ ಕಳ್ಳತನ' ಖಂಡಿಸಿ 'ಇಂಡಿಯಾ' ಒಕ್ಕೂಟದಿಂದ ಜಂಟಿ ಹೋರಾಟ: ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆಗಾಗಿ ಆಗ್ರಹ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ದೇಶದಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್‌ಗಳ ಮೂಲಕವೇ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಹಾಗೂ 'ಎಸ್‌ಐಆರ್' ವಿಷಯಕ್ಕೆ ಸಂಬಂಧಿಸಿದಂತೆ ಪ್ರಬಲ ಜಂಟಿ ಹೋರಾಟ ನಡೆಸಲು 'ಇಂಡಿಯಾ' ಮೈತ್ರಿಕೂಟದ ನಾಯಕರು ನಿರ್ಧರಿಸಿದ್ದಾರೆ. ದೆಹಲಿಯಲ್ಲಿ ನಡೆದ ಪ್ರಮುಖ ವಿಪಕ್ಷ ನಾಯಕರ ಮೂರೂವರೆ ಗಂಟೆಗಳ ಮಹತ್ವದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ತೇಜಸ್ವಿ ಯಾದವ್ ಮತ್ತು ಸುಪ್ರಿಯಾ ಸುಳೆ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ಮುಖಂಡರು ಈ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Advertisement

ಪ್ರಜಾಪ್ರಭುತ್ವ ಉಳಿಸಿ ಮೆರವಣಿಗೆ: ಅಕ್ಟೋಬರ್ 2 ರಿಂದ 8 ರವರೆಗೆ ಯುವಕರು ಹಾಗೂ ಸ್ವಯಂಸೇವಾ ಸಂಸ್ಥೆಗಳನ್ನು ಒಳಗೊಂಡು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗಳ ಮುಂದೆ ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸಲಾಗುವುದು.

ಚುನಾವಣಾ ಆಯೋಗದತ್ತ ಮಾರ್ಚ್: ಅಕ್ಟೋಬರ್ 6 ರಂದು ಎಲ್ಲಾ ವಿಪಕ್ಷ ಸಂಸದರು ಚುನಾವಣಾ ಆಯೋಗದ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಿದ್ದಾರೆ.

ರಾಷ್ಟ್ರಪತಿ ಭೇಟಿ: ಅಕ್ಟೋಬರ್ ಎರಡನೇ ವಾರದಲ್ಲಿ ಭಾರತದ ರಾಷ್ಟ್ರಪತಿಗಳನ್ನು ಭೇಟಿಯಾಗಿ "ಮತ ಕಳ್ಳತನ ಮಾಡುವ ಸರ್ಕಾರ"ದ ವಿರುದ್ಧ ಜಂಟಿ ಅಹವಾಲು ಸಲ್ಲಿಸಲಾಗುವುದು.

ಬೃಹತ್ ರ‍್ಯಾಲಿಗಳು: ದೇಶಾದ್ಯಂತ ಒಟ್ಟು ಐದು ಬೃಹತ್ ರ‍್ಯಾಲಿಗಳನ್ನು ನಡೆಸಲಾಗಿದ್ದು, ಇದರ ದಿನಾಂಕ ಹಾಗೂ ಸ್ಥಳವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ.

ಮಲ್ಲಿಕಾರ್ಜುನ ಖರ್ಗೆ: "ಪ್ರಧಾನಿ ಮೋದಿ ಮೊದಲು 'ನೋಟು ರದ್ದತಿ' ಮಾಡಿದರು, ಈಗ 'ಮತ ರದ್ದತಿ'ಯಂತಹ ಕ್ರಮದ ಮೂಲಕ ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗದ ನಿಜವಾದ ಸೂತ್ರಧಾರರು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಆಗಿದ್ದು, ಅಲ್ಲಿರುವವರು ಕೇವಲ ದಾಳಗಳಷ್ಟೇ. ಎಸ್‌ಐಆರ್ ಮತ್ತು ಚುನಾವಣಾ ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲಿದ್ದೇವೆ" ಎಂದರು.

ರಾಹುಲ್ ಗಾಂಧಿ: "ಪ್ರಧಾನಿ ಮೋದಿ, ಗೃಹ ಸಚಿವ ಶಾ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಭಾರತದ ಪ್ರಜಾಪ್ರಭುತ್ವದ ರಚನೆಯ ಮೇಲೆ ದಾಳಿ ನಡೆಸಿದ್ದಾರೆ. ಪ್ರಜಾಪ್ರಭುತ್ವವನ್ನು ನಾಶಪಡಿಸಿ ಚುನಾವಣೆಗಳನ್ನು ಕದ್ದಿರುವವರಿಗೆ ತಕ್ಕ ಶಿಕ್ಷೆಯಾಗುವಂತೆ ಮಾಡುತ್ತೇವೆ" ಎಂದು ಎಚ್ಚರಿಸಿದರು.

ಮಮತಾ ಬ್ಯಾನರ್ಜಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, "ಜ್ಞಾನೇಶ್ ಕುಮಾರ್ ತಕ್ಷಣವೇ ತಮ್ಮ ಹುದ್ದೆಯಿಂದ ರಾಜೀನಾಮೆ ನೀಡಬೇಕು. ಮತದಾನ ನಮ್ಮ ಸಾಂವಿಧಾನಿಕ ಹಕ್ಕು, ಇದನ್ನು ಉಳಿಸಲು ಈ ಹೋರಾಟ ದೇಶದ ಮೂಲೆ ಮೂಲೆಗೆ ವ್ಯಾಪಿಸಲಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉದ್ಧವ್ ಠಾಕ್ರೆ ಮತ್ತು ಹೇಮಂತ್ ಸೊರೆನ್ ಸೇರಿದಂತೆ ದೇಶದ ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್, ಎಸ್‌ಪಿ, ಟಿಎಂಸಿ, ಎನ್‌ಸಿಪಿ (ಎಸ್‌ಪಿ), ಶಿವಸೇನೆ (ಯುಬಿಟಿ), ಆರ್‌ಜೆಡಿ, ಸಿಪಿಐ(ಎಂ), ಸಿಪಿಐ, ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಜೆಎಂಎಂ ಸೇರಿದಂತೆ 19ಕ್ಕೂ ಹೆಚ್ಚು ರಾಜಕೀಯ ಪಕ್ಷಗಳ ಮುಖಂಡರು ಮತ್ತು ಸ್ವತಂತ್ರ ಸಂಸದ ಕಪಿಲ್ ಸಿಬಲ್ ಈ ಸಭೆಯಲ್ಲಿ ಪಾಲ್ಗೊಂಡು ಒಮ್ಮತದ ಹೋರಾಟಕ್ಕೆ ಬೆಂಬಲ ಸೂಚಿಸಿದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ರಮವಾಗಿ ನೆಲೆಸಿದ್ದ ಮೂವರು ನೈಜೀರಿಯನ್ ಪ್ರಜೆಗಳ ವಶಕ್ಕೆಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದ ಹುಂಡಿಯಲ್ಲಿ 77ಲಕ್ಷ 58ಸಾವಿರದ 904 ರೂ ಸಂಗ್ರಹಕೆಂಪಮ್ಮ ದಂಪತಿಗೆ ವಾತ್ಸಲ್ಯ ಮನೆ ಹಸ್ತಾಂತರಪೋಷಣ್ ಮಾಸಾಚರಣೆ: ಸಿರಿಧಾನ್ಯ, ಸೊಪ್ಪು-ತರಕಾರಿ ಸೇವನೆಗೆ ಒತ್ತು ವಿದ್ಯಾರ್ಥಿಗಳು ಪಠ್ಯದ ಜೊತೆ ಕ್ರೀಡೆಗಳಲ್ಲಿ ತೊಡಗಿಸಿಕೊಂಡರೆ ಮಾನಸಿಕ ದೈಹಿಕ ಸದೃಢತೆ ಹೆಚ್ಚುತ್ತದೆ:ಡಾ. ಮುರುಳಿಡಿಕೆ ಶಿವಕುಮಾರ್ ವಿರುದ್ಧವೇ 'ಟ್ರ್ಯಾಪ್' ಯತ್ನ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸ್ಪೋಟಕ ಹೇಳಿಕೆ!ಡಿ.ಕೆ ಶಿವಕುಮಾರ್‌ಗೆ ರಿಯಲ್ ಎಸ್ಟೇಟ್‌ಮೇಲಿರುವ ಆಸಕ್ತಿ ರೈತರ ಮೇಲಿಲ್ಲ: ಬಿ.ವೈ. ವಿಜಯೇಂದ್ರಶಾರ್ಟ್ ಸರ್ಕ್ಯೂಟ್‌ನಿಂದ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ ಬೆಂಕಿ; ತಪ್ಪಿದ ಭಾರೀ ದುರಂತಭೀಕರ ಅಪಘಾತ: ನಾಲ್ವರು ಯುವ ಕ್ರಿಕೆಟಿಗರು ಸಾವುಡೀಸೆಲ್ ಕೊರತೆ ತಾತ್ಕಾಲಿಕ, ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಕೆ: ಡಿಸಿಎಂ ಜಿ. ಪರಮೇಶ್ವರ ಸ್ಪಷ್ಟನೆ