Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೃಕ್ಷ ಮಾತೆ ತುಳಸಿಗೌಡ ನಿಧನಕ್ಕೆ ಪರಿಷತ್‍ನಲ್ಲಿ ಸಂತಾಪ

Advertisement
ಚಂದ್ರವಳ್ಳಿ ನ್ಯೂಸ್, ಬೆಳಗಾವಿ/ಬೆಂಗಳೂರು:
ಪದ್ಮಶ್ರೀ ಪುರಸ್ಕø ವೃಕ್ಷ ಮಾತೆ ತುಳಸಿಗೌಡ ಅವರ ನಿಧನಕ್ಕೆ ವಿಧಾನ ಪರಿಷತ್ತನಲ್ಲಿ ಡಿ.17 ರಂದು ಸಂತಾಪ ಸೂಚಿಸಲಾಯಿತು.

ಸಭಾಪತಿ ಬಸವರಾಜ ಹೊರಟ್ಟಿ ಅವರು, ತುಳಸಿಗೌಡ ಅವರ ನಿಧನರಾದ ವಿಷಯವನ್ನು ಸದನಕ್ಕೆ ತಿಳಿಸಲು ವಿಷಾಧಿಸುತ್ತೇನೆ ಎಂದು ಹೇಳಿ ಸಂತಾಪ ಸೂಚನೆಯ ನಿರ್ಣಯ ಮಂಡಿಸಿದರು.

 ತುಳಸಿ ಗೌಡ ಅವರು 1944 ಡಿಸೆಂಬರ್ 16 ರಂದು ಅಂಕೋಲ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದ ಹಾಲಕ್ಕಿ ಬುಡಕಟ್ಟು ಕುಟುಂಬದಲ್ಲಿ ಜನಿಸಿದ್ದ ಶ್ರೀಯುತರು 'ಪರಿಸರವೇ ನನ್ನ ಉಸಿರು' ಎಂದು ತಮ್ಮ ಜೀವನದುದ್ದಕ್ಕೂ ಲಕ್ಷಾಂತರ ಮರಗಳನ್ನು ಬೆಳೆಸಿ ಪಾಲನೆ ಪೋಷಣೆ ಮಾಡುವ ಮೂಲಕ 'ವೃಕ್ಷ ಮಾತೆ' ಎಂದು ಕರೆಯಲ್ಪಡುತ್ತಿದ್ದರು. ಯಾವುದೇ ಔಪಚಾರಿಕ ಶಿಕ್ಷಣವಿಲ್ಲದಿದ್ದರೂ ಶಾಲಾ ಮಕ್ಕಳಿಗೆ ಗಿಡಗಳನ್ನು ಬೆಳೆಸುವ ತರಬೇತಿ ನೀಡುತ್ತಿದ್ದರು. ಪ್ರತಿ ವರ್ಷ 30 ಸಾವಿರ ಸಸಿಗಳನ್ನು ಪೋಷಿಸಿದ ಕೀರ್ತಿಗೆ ಭಾಜನರಾಗಿದ್ದರು.

 ಶ್ರೀಯುತರಿಗೆ ಅರಣ್ಯ ತಿಳುವಳಿಕೆ ಅಪಾರವಾಗಿತ್ತು. ಸಾಗವಾನಿಯನ್ನೇ ಹೆಚ್ಚಾಗಿ ಬೆಳೆಸುತ್ತಿದ್ದ ಇವರು ಇದರ ಹೊರತಾಗಿ ಎಳ್ಳು, ನಂದಿ, ಪೀಫುಲ್, ಫಿಕಸ್, ಬಿದಿರು, ರಾಟನ್, ಜಮುನ್, ಗೋಡಂಬಿ, ಮತ್ತಿ ಮುಂತಾದ ಮರಗಳ ಎಲ್ಲಾ ಮಾಹಿತಿಗಳ ಅರಿವನ್ನು ಹೊಂದಿದ್ದರು. ಪರಿಸರದ ಮೇಲಿನ ಈಕೆಯ ಪ್ರೀತಿಯನ್ನು ಕಂಡು ಅಂದಿನ ಅರಣ್ಯಾಧಿಕಾರಿಯವರು ಅರಣ್ಯದಲ್ಲಿ ಬೀಜಗಳನ್ನು ಶೇಖರಣೆ ಮಾಡಿ ಸಸಿಗಳನ್ನಾಗಿ ಮಾಡಿಕೊಡುವ ಹಾಗೂ ಪೋಷಿಸುವ ದಿನಗೂಲಿ ನೌಕರಿಯನ್ನು ನೀಡಿದ್ದರು.

 ಕಾಡಿನಿಂದ ಅಪರೂಪದ ಬೀಜ ಸಂಗ್ರಹಿಸಿ, ಸಸಿಗಳನ್ನು ಬೆಳೆಸಿ ಅದೇ ಸಸಿಗಳನ್ನು ಅರಣ್ಯದಲ್ಲಿ, ಸರ್ಕಾರಿ ಕಛೇರಿ, ಶಾಲಾ ಆವರಣ, ರಸ್ತೆಯ ಪಕ್ಕದಲ್ಲಿ ಬೆಳೆಸಿದ ಕೀರ್ತಿ ಇವರದ್ದಾಗಿದೆ. ಯಾವ ಯಾವ ಮರದಿಂದ ಏನೇನು ಪ್ರಯೋಜನ, ಯಾವ ಜಾತಿಯ ಸಸಿಗಳಿಗೆ ಎಷ್ಟು ನೀರಿನ ಅವಶ್ಯಕತೆ ಇದೆ ಮುಂತಾದ ಹಲವಾರು ಮಾಹಿತಿಗಳ ಕಣಜವಾಗಿದ್ದ ಶ್ರೀಯುತರು ಅರಣ್ಯದ ವಿಶ್ವಕೋಶ' ಎಂದೇ ಜನಜನಿತರಾಗಿದ್ದರು.

ಶ್ರೀಯುತರ ಪರಿಸರ ಕಾಯಕಕ್ಕೆ ಕೇಂದ್ರ ಸರ್ಕಾರದಿಂದ ಪದ್ಮಶ್ರೀ ಪ್ರಶಸ್ತಿ, ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿಗಳಲ್ಲದೆ ರಾಜ್ಯೋತ್ಸವ ಪ್ರಶಸ್ತಿಗೂ ಸಹ ಭಾಜನರಾಗಿದ್ದರು.

ಶ್ರೀಯುತರ ನಿಧನದಿಂದಾಗಿ ರಾಜ್ಯ ಹಾಗೂ ರಾಷ್ಟ್ರವು ಒಬ್ಬ ಶ್ರೇಷ್ಠ ಪರಿಸರ ವೃಕ್ಷ ಮಾತೆ'ಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಭಾಪತಿ ಅವರು ಸಂತಾಪ ಸೂಚನೆಯ ನಿರ್ಣಯವನ್ನು ಸದನಕ್ಕೆ ತಿಳಿಸಿದರು.

ಸಭಾ ನಾಯಕರು ಮತ್ತು ಸಚಿವ ಎನ್.ಎಸ್. ಬೋಸರಾಜು ಹಾಗೂ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಂತಾಪ ಸೂಚನಾ ನಿರ್ಣಯದ ಮೇಲೆ ಮಾತನಾಡಿ, ಮೃತರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಪರಮಾತ್ಮನು ಕರುಣಿಸಲೆಂದು ಪ್ರಾರ್ಥಿಸುವೆ ಎಂದು ತಿಳಿಸಿದರು.
ಮೃತರ ಗೌರವಾರ್ಥ ಮಾನ್ಯ ಸದಸ್ಯರು ಎದ್ದು ನಿಂತು ಒಂದು ನಿಮಿಷ ಮೌನ ಆಚರಿಸಿ ಸಂತಾಪ ಸಲ್ಲಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ