Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆರ್‌ಸಿಬಿಗೆ ಅಭಿನಂದನೆ ಸಲ್ಲಿಸಿ, ಕಳೆದ ವರ್ಷ ದುರಂತದ 11 ಬಲಿಪಶುಗಳಿಗೆ ನ್ಯಾಯಕ್ಕಾಗಿ ಒತ್ತಾಯಿಸಿದ ನಿಖಿಲ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಕೋಟಿ ಕೋಟಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಆದರೆ, ಈ ಮಹಾ ಸಂಭ್ರಮದ ನಡುವೆಯೇ ಕಳೆದ ವರ್ಷದ ವಿಜಯೋತ್ಸವದ ವೇಳೆ ನಡೆದ ಕರಾಳ ದುರಂತವನ್ನು ನೆನೆದು, ಮೃತಪಟ್ಟ ಅಭಿಮಾನಿಗಳ ಕುಟುಂಬಗಳಿಗೆ ನ್ಯಾಯ ಒದಗಿಸಬೇಕೆಂದು ಅವರು ಕಳಕಳಿಯ ಮನವಿ ಮಾಡಿದ್ದಾರೆ.

Advertisement

​ಆರ್‌ಸಿಬಿ ಐತಿಹಾಸಿಕ ಗೆಲುವಿನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಸಂದೇಶ ಹಂಚಿಕೊಂಡಿರುವ ಅವರು, ಬೆಂಗಳೂರಿನಾದ್ಯಂತ ಮನೆಮಾಡಿರುವ ಕೆಂಪು ಸಾಗರದ ಸಂಭ್ರಮ ಶ್ಲಾಘಿಸುತ್ತಲೇ, ವ್ಯವಸ್ಥೆಯ ಬೇಜವಾಬ್ದಾರಿಯ ವಿರುದ್ಧ ಧ್ವನಿ ಎತ್ತಿದ್ದಾರೆ.

​ಆರ್‌ಸಿಬಿ ಮ್ಯಾನೇಜ್‌ಮೆಂಟ್‌ಹಾಗೂ ಸರ್ಕಾರಕ್ಕೆ ಕಳಕಳಿಯ ವಿನಂತಿ:
​ಕಳೆದ ವರ್ಷ ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ದುರದೃಷ್ಟವಶಾತ್ 11 ಜನ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದರು. ಈ ಕರಾಳ ಘಟನೆಯನ್ನು ಪ್ರಸ್ತಾಪಿಸಿರುವ ನಿಖಿಲ್, ಆರ್‌ಸಿಬಿ ಮ್ಯಾನೇಜ್‌ಮೆಂಟ್‌, ಕೆಎಸ್‌ಸಿಎ ಮತ್ತು ರಾಜ್ಯ ಸರ್ಕಾರಕ್ಕೆ ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ.

​ಗೆಲುವಿನ ಸಮರ್ಪಣೆ: ಈ ಬಾರಿಯ ಐತಿಹಾಸಿಕ ಗೆಲುವು ಮತ್ತು ಕಪ್ಪನ್ನು ಆರ್‌ಸಿಬಿ ತಂಡಕ್ಕಾಗಿ ಪ್ರಾಣ ಕಳೆದುಕೊಂಡ ಆ 11 ಅಭಿಮಾನಿಗಳಿಗೆ ಮುಡಿಪಾಗಿಡಬೇಕು.

​ಖಾಲಿ ಕುರ್ಚಿಗಳಷ್ಟೇ ಸಾಲದು: "ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೇವಲ 11 ಖಾಲಿ ಕುರ್ಚಿಗಳನ್ನು ಕಾಯ್ದಿರಿಸುವುದು ಕೇವಲ ಸಾಂಕೇತಿಕ ಆಚರಣೆಯಷ್ಟೇ ಆದೀತು. ಆ ಬಡ ಅಭಿಮಾನಿಗಳ ಪ್ರಾಣಕ್ಕೆ ಅದಕ್ಕಿಂತ ಹೆಚ್ಚಿನ ಬೆಲೆಯಿದೆ," ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ಬಡ ಕುಟುಂಬಗಳಿಗೆ ಸಿಗದ ನ್ಯಾಯ: ದುರಂತ ನಡೆದು ಇಷ್ಟು ದಿನಗಳಾದರೂ ಇಂದಿನವರೆಗೂ ಸಂತ್ರಸ್ತ ಬಡ ಕುಟುಂಬಗಳಿಗೆ ಯಾವುದೇ ನ್ಯಾಯವಾಗಲಿ, ಸೂಕ್ತ ಆಸರೆಯಾಗಲಿ ಸಿಕ್ಕಿಲ್ಲ. ಯಾರೂ ಅವರ ಪರವಾಗಿ ನಿಂತಿಲ್ಲ ಎಂದು ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

​ಅಭಿಮಾನಿಗಳಲ್ಲಿ ನಿಖಿಲ್ ಮನವಿ:
​"
ನನ್ನ ಪ್ರೀತಿಯ ಆರ್‌ಸಿಬಿ ಅಭಿಮಾನಿ ಬಂಧುಗಳೇ, ಕೊನೆಯ ಕ್ಷಣದವರೆಗೂ ಆರ್‌ಸಿಬಿಯನ್ನು ಉಸಿರಾಡಿ, ಇಂದು ನಮ್ಮೊಂದಿಗೆ ಸಂಭ್ರಮಿಸಲು ಇರಬೇಕಾಗಿದ್ದ ಆ 11 ಜನರಿಗೆ ಈ ವಿಜಯವನ್ನು ಸಮರ್ಪಿಸೋಣ. ನಮ್ಮವರ ತ್ಯಾಗವನ್ನು ನಾವು ಎಂದಿಗೂ ಮರೆಯದಿರೋಣ," ಎಂದು ನಿಖಿಲ್ ಕುಮಾರಸ್ವಾಮಿ ಆರ್‌ಸಿಬಿ ಅಭಿಮಾನಿ ಬಳಗಕ್ಕೆ ಕರೆ ನೀಡಿದ್ದಾರೆ.

​ಈ ವರ್ಷದ ವಿಜಯೋತ್ಸವವು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸುಸೂತ್ರವಾಗಿ ಮತ್ತು ಸುರಕ್ಷಿತವಾಗಿ ಮುಕ್ತಾಯಗೊಳ್ಳಲಿ ಎಂದು ಹಾರೈಸುವ ಜೊತೆಗೆ, ತಂಡಕ್ಕಾಗಿ ಕೊನೆಯುಸಿರೆಳೆದ ಅಭಿಮಾನಿಗಳಿಗೆ ನಿಜವಾದ ಗೌರವ ಹಾಗೂ ನ್ಯಾಯ ಸಿಗಬೇಕಿರುವುದು ಅತ್ಯಂತ ಅನಿವಾರ್ಯ ಎಂದು ಅವರು ಒತ್ತಿ ಹೇಳಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು