Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.1ರಂದು ಸಾಹಿತಿ ಹಾಡ್ಲಹಳ್ಳಿ ನಾಗರಾಜ್ ಗೆ ಅಭಿನಂದನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯ ಸಾಹಿತಿ ಹಾಡ್ಲಹಳ್ಳಿ ನಾಗರಾಜ್ ಅವರಿಗೆ ಅಭಿನಂದನಾ ಸಮಾರಂಭವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಡಿ.1 ಭಾನುವಾರ ಆಯೋಜಿಸಲಾಗಿದ್ದು, ಅಂದು ಅವರ ಕುರಿತ ಅಭಿನಂದನಾ ಗ್ರಂಥವೂ ಬಿಡುಗಡೆ ಆಗಲಿದೆ.

ಪ್ರೆಸ್ಕ್ಲಬ್ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಇದೇ ಸಂದರ್ಭದಲ್ಲಿ ಬೇಲೂರು ರಘುನಂದನ್ ನಿರ್ದೇಶನದ ಬೆಂಕಿ ರೂಟುಎಂಬ ನಾಟಕದ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.

ಅಂದು ಮಧ್ಯಾಹ್ನ 2 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕಾರೆಕಾಯ್ ಹಡ್ಲುಅಭಿನಂದನಾ ಗ್ರಂಥವನ್ನು ಸಾಹಿತಿ ಡಾ.ವಿಜಯಮ್ಮ ಬಿಡುಗಡೆ ಮಾಡುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಶೋತ್ತ ಬಿಳಿಮಲೆ ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತರ ಜಾಣಗೆರೆ ವೆಂಕಟರಮಣಯ್ಯ ಅಭಿನಂದನಾ ಮಾತುಗಳನ್ನಾಡಲಿದ್ದಾರೆ ಎಂದರು.

ಹಾಸನದಿಂದಲೇ ನಾಗರಾಜ್ ಅವರನ್ನು ಗಮನಿಸಿದ್ದೇನೆ. ಅವರು ತಮ್ಮದೇ ಆದ ಓದುಗ ವಲಯವನ್ನು ಹೊಂದಿರುವ ಸಾಹಿತಿ ಹಾಡ್ಲಹಳ್ಳಿ ನಾಗರಾಜ್ ಅವರು ಮಲೆನಾಡಿಗೆ ಮಾತ್ರ ಸೀಮಿತವಲ್ಲ, ಇಡೀ ಕನ್ನಡ ಸಾರಸ್ವತ ಲೋಕಕ್ಕೆ ಅವರ ಕೊಡುಗೆ ಗಣನೀಯವಾದದ್ದು ಎಂದರು. ಎಪ್ಪತ್ತರ ದಶಕದಿಂದಲೂ ಸಾಹಿತಿ ಕೃಷಿಯಲ್ಲಿದ್ದಾರೆ.

ನಿಲುವಂಗಿಯ ಕನಸು ಕೃತಿ ನಾಟಕವಾಗಿ ಯಶಸ್ವಿ ಪ್ರದರ್ಶನ ಕಂಡಿದೆ. ಕಳೆದ 50 ವರ್ಷಗಳಿಂದಲೂ ಸಾಹಿತ್ಯ ರಚನೆ ಮಾಡಿಕೊಂಡು ಬಂದಿರುವ ಇವರಿಗೆ ಸಾಹಿತ್ಯಾಸಕ್ತರು, ಆಪ್ತರು ಎಲ್ಲರೂ ಸೇರಿ ಅಭಿನಂದನೆ ಸಲ್ಲಿಸುತ್ತಿರುವುದು ಮಹತ್ವದ ಸಂಗತಿ ಎಂದರು.

ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಉದ್ಯಮಿ ಶಿವಕುಮಾರ್ ಜಾಗಟೆ ಮಾತನಾಡಿ, ನಾವೆಲ್ಲ ಹಾಡ್ಲಹಳ್ಳಿ ನಾಗರಾಜ್ ಅವರ ಕಥೆ ಕಾದಂಬರಿಗಳನ್ನು ಓದಿ ಬೆಳೆದವರು. ಅವುಗಳಿಂದ ಸಾಕಷ್ಟು ಜೀವನ ಅನುಭವ ಹೊಂದಲು ಸಾಧ್ಯವಾಯಿತು. ನಮ್ಮಂತಹ ಹಲವಾರು ಮಂದಿಗೆ ಸ್ಪೂರ್ತಿಯಾಗಿರುವ ಮಲೆನಾಡಿನ ಹಿರಿಯರಿಗೆ ಅಭಿನಂದಿಸುವ ಕಾರ್ಯ ಖುಷಿ ಕೊಡುತ್ತದೆ ಎಂದರು.

ಕತೆಗಾರ್ತಿ ದಯಾ ಗಂಗನಘಟ್ಟ ಮಾತನಾಡಿ, ಸರ್ಕಾರ ಹಾಗೂ ಅದರ ಅಂಗ ಸಂಸ್ಥೆಗಳಿಂದ ಗುರುತಿಸಲು ಸಾಧ್ಯವಾಗದ ಸಾಹಿತಿಯೊಬ್ಬರನ್ನು ಜನಸಾಮಾನ್ಯರೇ ಗುರುತಿಸಿ ಅಭಿನಂದಿಸುತ್ತಿರುವುದು ಮಾದರಿ ಕೆಲಸವಾಗಿದೆ ಎಂದರು.

ನಾಡಿನ ಎಲ್ಲಾ ಸದಭಿರುಚಿಯ ಮನಸ್ಸುಗಳು ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕಾರ್ಯಕ್ರಮ ಸಂಘಟಕ ಹಾ..ಪ್ರಸನ್ನಕುಮಾರ್ ಮನವಿ ಮಾಡಿದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ