ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರಿನಲ್ಲಿ ಏ.20ರಂದು ಏರ್ಪಡಿಸಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅಭಿನಂದನೆಗೆ ಪಾತ್ರರಾಗಿದ್ದಾರೆ.
ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮತ್ತು ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳು ಒಟ್ಟಾಗಿ ಸಂಘಟಿಸಿರುವ ಈ ಕಾರ್ಯಕ್ರಮದಲ್ಲಿ ಐಎಎಸ್ ಅಧಿಕಾರಿ ನಿತೇಶ್ ಪಾಟೀಲ್, ಐಪಿಎಸ್ ಅಧಿಕಾರಿ ಸೀಮಾ ಲಾಟ್ಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಖ್ಯಾತಶಿಲ್ಪಿ ಅರುಣ್ ಯೋಗಿರಾಜ್, ಡಾ.ಶರಣ್ ಪಾಟೀಲ್, ಚಿನ್ನಸ್ವಾಮಿ ವಡ್ಡಗೆರೆ ಸೇರಿದಂತೆ ಹನ್ನೊಂದು ಗಣ್ಯರನ್ನು ಪುರಸ್ಕರಿಸಲಾಗುತ್ತಿದೆ.
ಕಲಾಮಂದಿರದಲ್ಲಿ ಏರ್ಪಡಿಸಿರುವ ಬಸವ ಜಯಂತಿ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸುತ್ತೂರು ಶ್ರೀ ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ವಹಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕ ಗಣ್ಯರನ್ನು ಅಭಿನಂದಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.


