Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಾಂಗ್ರೆಸ್ ದುರಾಡಳಿತ ವಿರುದ್ಧ 'ಯುದ್ಧ' ಆರಂಭ: ಬಿ.ವೈ. ವಿಜಯೇಂದ್ರ ರಣಕಾಹಳೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ರಾಜ್ಯದಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ರಣರಂಗದ ಹೋರಾಟ ಹಾಗೂ ಯುದ್ಧ ಇಂದಿನಿಂದ ಆರಂಭವಾಗಿದೆ. ಈ ಹೋರಾಟದಲ್ಲಿ ಅಂತಿಮವಾಗಿ ಗೆಲುವು ನಮ್ಮದೇ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಾರಿದ್ದಾರೆ.

ಬಳ್ಳಾರಿಯಲ್ಲಿ ನಡೆದ ಐತಿಹಾಸಿಕ 'ಬಳ್ಳಾರಿ ಚಲೋ' ಪಾದಯಾತ್ರೆಯ ಸಮಾರೋಪ ಸಮಾರಂಭದ ಮುನ್ಸಿಪಲ್ ಮೈದಾನದಲ್ಲಿ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ಒಂದೂವರೆ ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸುದೀರ್ಘವಾಗಿ ಹೋರಾಟ ಮುಂದುವರಿಸಲಿದೆ ಎಂದು ಎಚ್ಚರಿಕೆ ನೀಡಿದರು.

Advertisement

15 ವರ್ಷಗಳ ಬಳಿಕ ಸಿಕ್ಕ ಅವಕಾಶ, 224 ಕ್ಷೇತ್ರಗಳಿಗೂ ಯಾತ್ರೆ:
ಕಾಂಗ್ರೆಸ್ ಸರ್ಕಾರವು ಮುನ್ಸಿಪಲ್ ಮೈದಾನದಲ್ಲಿ ಕಾರ್ಯಕ್ರಮ ನಡೆಸಲು ಆರಂಭದಲ್ಲಿ ಅವಕಾಶ ನೀಡಿರಲಿಲ್ಲ. ಆದರೆ, ಬಿಜೆಪಿ ನಾಯಕರ ಮತ್ತು ಕಾರ್ಯಕರ್ತರ ಸತತ ಹೋರಾಟಕ್ಕೆ ಮಣಿದು 15 ವರ್ಷಗಳ ಬಳಿಕ ಇಲ್ಲಿ ಸಮಾವೇಶ ನಡೆಸಲು ಅನುಮತಿ ನೀಡಿದೆ. ಲಿಂಗಸುಗೂರಿನಿಂದ ಆರಂಭವಾದ ಈ 10 ದಿನಗಳ ಪಾದಯಾತ್ರೆಯು 9 ವಿಧಾನಸಭಾ ಕ್ಷೇತ್ರಗಳ ಮೂಲಕ ಹಾದುಬಂದಿದ್ದು, ಅತ್ಯಂತ ಯಶಸ್ವಿಯಾಗಿದೆ.

"ಹಿಂದೆ ಮೈಸೂರಿಗೆ ಪಾದಯಾತ್ರೆ ನಡೆಸಿದ್ದೆವು. ಆದರೆ ನಮ್ಮ ನಿಜವಾದ ಹೋರಾಟ ಇವತ್ತಿನಿಂದ ಆರಂಭವಾಗಿದ್ದು, ಎನ್‌ಡಿಎ ಸರ್ಕಾರವನ್ನು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರುವವರೆಗೆ ವಿಶ್ರಮಿಸುವುದಿಲ್ಲ. ರಾಜ್ಯದ ಎಲ್ಲಾ 224 ಕ್ಷೇತ್ರಗಳಿಗೂ ಈ ಯಾತ್ರೆ ಮುಂದುವರೆಯಲಿದೆ," ಎಂದು ವಿಜಯೇಂದ್ರ ಘೋಷಿಸಿದರು.

ಜನರ ಕಣ್ಣೀರು ಒರೆಸಿದ 10 ದಿನಗಳ ಪಾದಯಾತ್ರೆ:
ಪಾದಯಾತ್ರೆಯುದ್ದಕ್ಕೂ ರಸ್ತೆಯ ಎರಡೂ ಬದಿಯಲ್ಲಿ ರೈತರು
, ದೀನದಲಿತರು, ಕುರಿಗಾರರು ಹಾಗೂ ವಿದ್ಯಾರ್ಥಿಗಳು ತಮ್ಮ ಸಂಕಷ್ಟಗಳನ್ನು ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗಗಳು ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿವೆ.

"ಮುಖ್ಯಮಂತ್ರಿಗಳು ತಮ್ಮ ಸರ್ಕಾರದ 100 ದಿನಗಳ ಸಂಭ್ರಮಾಚರಣೆಯಲ್ಲಿದ್ದರೆ, ನಾವು 10 ದಿನಗಳ ಪಾದಯಾತ್ರೆಯ ಮೂಲಕ ಜನರ ನೈಜ ನೋವಿಗೆ ಸ್ಪಂದಿಸಿದ್ದೇವೆ. ಈ ಯಾತ್ರೆಯು ನಮ್ಮ ಕಣ್ಣು ತೆರೆಸುವ ಮತ್ತು ಹೃದಯ ಸ್ಪರ್ಶಿಸುವ ಕೆಲಸ ಮಾಡಿದೆ," ಎಂದು ಅವರು ಹೇಳಿದರು.

ಹಗರಣಗಳ ವಿರುದ್ಧ ಬಿಜೆಪಿ ಪ್ರಮುಖ ಬೇಡಿಕೆಗಳು: ವಾಲ್ಮೀಕಿ ನಿಗಮದ ಹಗರಣ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಅಕ್ರಮದ ಹೊಣೆ ಹೊತ್ತು ಭ್ರಷ್ಟ ಸಚಿವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಮತ್ತು ಲೂಟಿಯಾದ ಹಣವನ್ನು ಮರಳಿ ತರಬೇಕು.

ಕೃಷಿ ಸಾಲ ಮನ್ನಾ: ರೈತರ 5 ಲಕ್ಷದವರೆಗಿನ ಕೃಷಿ ಸಾಲವನ್ನು ತಕ್ಷಣವೇ ಮನ್ನಾ ಮಾಡಬೇಕು.

ಎಸ್‌ಸಿಪಿ/ಟಿಎಸ್‍ಪಿ ಹಣ ಮರುಳಿಕೆ: ಎಸ್‌ಸಿಪಿ ಮತ್ತು ಟಿಎಸ್‌ಪಿ ಗೆ ಸೇರಬೇಕಾದ 45,000 ಕೋಟಿ ಹಣವನ್ನು ಇತರೆ ಇಲಾಖೆಗಳಿಗೆ ಅಕ್ರಮವಾಗಿ ವರ್ಗಾಯಿಸಲಾಗಿದ್ದು, ಅದನ್ನು ಮೂಲ ಯೋಜನೆಗೆ ಮರಳಿಸಬೇಕು.

ಅಭಿವೃದ್ಧಿ ಅನುದಾನ: ರಸ್ತೆಗಳ ದುರಸ್ತಿಗೆ ಪ್ರತಿಯೊಬ್ಬ ಶಾಸಕರ ಕ್ಷೇತ್ರಕ್ಕೆ ತಲಾ 200 ಕೋಟಿ ಬಿಡುಗಡೆ ಮಾಡಬೇಕು.
ನವಲಿ ಜಲಾಶಯ ಯೋಜನೆ: ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಬೇಡಿಕೆಯನ್ನು ತಕ್ಷಣ ಅನುಷ್ಠಾನಕ್ಕೆ ತರಬೇಕು.

"ರಿಯಲ್ ಎಸ್ಟೇಟ್ ಸರ್ಕಾರ, ರೈತರ ಬಗ್ಗೆ ಕಾಳಜಿಯಿಲ್ಲ":
ಸರ್ಕಾರದ ಆದ್ಯತೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ವಿಜಯೇಂದ್ರ
, "ಈ ಸರ್ಕಾರ ಬಡವರ ಮತ್ತು ರೈತರ ಹಿತವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. 50-55 ಸಾವಿರ ಕೋಟಿ ವೆಚ್ಚದ ಟನಲ್ ರಸ್ತೆ ಮತ್ತು ಬಿಡದಿ ಟೌನ್‌ಶಿಪ್‌ಗಳಂತಹ ರಿಯಲ್ ಎಸ್ಟೇಟ್ ಯೋಜನೆಗಳಿಗೆ ಆದ್ಯತೆ ನೀಡುತ್ತಿರುವ ಈ ಸರ್ಕಾರಕ್ಕೆ ಕೃಷಿಕರ ಸಂಕಷ್ಟ ಕಣ್ಣಿಗೆ ಕಾಣುತ್ತಿಲ್ಲ," ಎಂದು ಕಿಡಿಕಾರಿದರು.

ಅಲ್ಲದೆ, "ನಾನು ಶೇಕಡಾ 90 ರಷ್ಟು ಬ್ಯುಸಿನೆಸ್‌ಮನ್" ಎಂದು ಹೇಳಿಕೊಳ್ಳುವ ನಾಯಕರು ರಿಯಲ್ ಎಸ್ಟೇಟ್ ದಂಧೆಯಲ್ಲಿ ಮುಳುಗಿದ್ದಾರೆ. ಗುಟ್ಕಾ ನಿಷೇಧದ ನೆಪದಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ನೀಡಲು ಹೊರಟಿದ್ದರು ಎಂದು ಆರೋಪಿಸಿದರು.

ಮೈತ್ರಿ ಸರ್ಕಾರ ಮತ್ತು ಭವಿಷ್ಯದ ಹೆಜ್ಜೆ:
"ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಹೋರಾಟದ ಹಿನ್ನೆಲೆಯಿಂದ ಬಂದು ರೈತರು ಹಾಗೂ ಬಡವರ ಪರವಾಗಿ ಸಾಲ ಮನ್ನಾ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ನೆರೆಯ ಮಹಾರಾಷ್ಟ್ರದ ಬಿಜೆಪಿ ಸರ್ಕಾರವೂ ರೈತರ ಸಾಲ ಮನ್ನಾ ಮಾಡಿದೆ. ಆದರೆ ಈ ಸರ್ಕಾರ ರಾಜ್ಯವನ್ನು ಕುಡುಕರ ರಾಜ್ಯವನ್ನಾಗಿ ಮಾಡುತ್ತಿದೆ. ಅಲ್ಪಸಂಖ್ಯಾತರ ಓಲೈಕೆಗಾಗಿ ಸಚಿವ ಸಂಪುಟವು
'ವಂದೇ ಮಾತರಂ' ಗೀತೆಯನ್ನು ಮೊಟಕುಗೊಳಿಸುವ ನಿರ್ಧಾರ ಕೈಗೊಂಡಿದೆ," ಎಂದು ಆಕ್ಷೇಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ 'ಪ್ರಧಾನ ಸೇವಕ'ನಾಗಿ ಶ್ರಮಿಸುತ್ತಿದ್ದರೆ, ಸಿಎಂ ಡಿ.ಕೆ. ಶಿವಕುಮಾರ್ ಅವರು ಕಪಟ ನಾಟಕವಾಡುತ್ತಿದ್ದಾರೆ. ರೈತರು ಮತ್ತು ಯುವಜನರನ್ನು ನಿರ್ಲಕ್ಷಿಸಿರುವ ಕಾಂಗ್ರೆಸ್ ಸರ್ಕಾರವನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಮನೆಗೆ ಕಳುಹಿಸುವುದು ನಿಶ್ಚಿತ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು