Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಷ್ಟಾಚಾರ ಪಾಲನೆಯಲ್ಲೂ ಕಾಂಗ್ರೆಸ್ ಸರ್ಕಾರದ ಕೀಳು ರಾಜಕೀಯ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಿಷ್ಟಾಚಾರ ಪಾಲನೆಯಲ್ಲೂ ಕಾಂಗ್ರೆಸ್ ಸರ್ಕಾರದ ಕೀಳು ರಾಜಕೀಯ! ಮುಂದುವರೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕೆಂಡಕಾರಿದ್ದಾರೆ. ಮಂಗಳವಾರ ಸಂಜೆ ಉದ್ಘಾಟನೆಯಾದ ಜಾಗತಿಕ ಹೂಡಿಕೆದಾರರ ಸಮಾವೇಶದ ಬಗ್ಗೆ ರಾಜ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಲ್ಲಾ ದಿನಪತ್ರಿಕೆಗಳಲ್ಲೂ ಫುಲ್ ಪೇಜ್ ಜಾಹೀರಾತು ನೀಡಿದೆ. ಸಮಾವೇಶಕ್ಕೆ ನಮ್ಮ ಶುಭ ಹಾರೈಕೆಗಳು. ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಹರಿದು ಬರಲಿ
, ಕಳೆದ 20 ತಿಂಗಳುಗಳಿಂದ ಸಂಪೂರ್ಣವಾಗಿ ಸ್ತಬ್ಧವಾಗಿರುವ ರಾಜ್ಯದ ಅಭಿವೃದ್ಧಿಗೆ ಇನ್ನು ಮುಂದೆಯಾದರೂ ಚುರುಕು ಸಿಗಲಿ ಎಂದು ವಿಪಕ್ಷ ನಾಯಕರು ಆಶಿಸಿದ್ದಾರೆ.

ಆದರೆ ಹೂಡಿಕೆದಾರರ ಸಮಾವೇಶದ ಉದ್ಘಾಟನೆ ನೆರವೇರಿಸಲಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಫೋಟೋ ಜಾಹೀರಾತಿನಲ್ಲಿ ಯಾಕಿಲ್ಲ? ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿರುವ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಫೋಟೋ ಯಾಕೆ ಹಾಕಿಲ್ಲ?

ಕೇವಲ ಸಿಎಂ, ಡಿಸಿಎಂ ಹಾಗು ಕೈಗಾರಿಕಾ ಸಚಿವರ ಫೋಟೋ ಹಾಕಲು ಹೂಡಿಕೆದಾರರ ಸಮಾವೇಶ ರಾಜಕೀಯ ಕಾಂಗ್ರೆಸ್ ಪಕ್ಷದ ರಾಜಕೀಯ ಸಮಾವೇಶವಲ್ಲ. ಇಂತಹ ಜಾಗತಿಕ ಸಮಾವೇಶದ ಜಾಹೀರಾತಿನಲ್ಲೂ ಕ್ಷುಲ್ಲಕ ರಾಜಕೀಯ ಮಾಡುವ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ನಾಚಿಕೆಯಾಗಬೇಕು. ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವ ಅಂತ ಭಾಷಣ ಬಿಗಿಯುವ ಕಾಂಗ್ರೆಸ್ ನಾಯಕರಿಗೆ ರಾಜ್ಯದ ಪ್ರಥಮ ಪ್ರಜೆಯಾಗಿರುವ ರಾಜ್ಯಪಾಲರ ಫೋಟೋ ಹಾಕುವ ಕನಿಷ್ಠ ಶಿಷ್ಟಾಚಾರವನ್ನೂ ಪಾಲನೆ ಮಾಡುವ ಸೌಜನ್ಯವಿಲ್ಲ ಎಂದು ಅಶೋಕ್ ವಾಗ್ದಾಳಿ ಮಾಡಿದ್ದಾರೆ.

ಈ ಶಿಷ್ಟಾಚಾರದ ಕೀಳು ರಾಜಕೀಯ ಒಂದು ಕಡೆಯಾದರೆ ಮತ್ತೊಂದು ಕಡೆ ಹೂಡಿಕೆದಾರರ ಸಮಾವೇಶಕ್ಕೆ ಪ್ರವೇಶಾತಿ ಶುಲ್ಕ ವಿಧಿಸುವ ಮೂಲಕ ರಾಜ್ಯ ಸರ್ಕಾರ ಎಷ್ಟು ಪಾಪರ್ ಆಗಿದೆ ಎಂದು ಮತ್ತೊಮ್ಮೆ ಪ್ರದರ್ಶನ ಮಾಡಿದೆ ಎಂದು ಅಶೋಕ್ ಟೀಕಿಸಿದ್ದಾರೆ.

ಇಂಜಿನಿಯರಿಂಗ್, ಮ್ಯಾನೇಜ್ಮೆಂಟ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ನವೋದ್ಯಮ ಪ್ರಾರಂಭಿಸಬೇಕು ಎಂಬ ಉತ್ಸಾಹದಲ್ಲಿರುವ ಯುವಕ, ಯುವತಿಯರಿಗೆ, ವೃತ್ತಿಪರರಿಗೆ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳುವುದು ಒಂದು ಉತ್ತಮ ಕಲಿಕಾ ಅವಕಾಶವೂ ಹೌದು, ತಮ್ಮ ಕಾರ್ಯ ಕ್ಷೇತ್ರದಲ್ಲಿರುವ ಇತರರನ್ನು ಸಂಪರ್ಕ ಮಾಡಿ ನೆಟ್ವರ್ಕಿಂಗ್ ಮಾಡಿಕೊಳ್ಳುವ ವೇದಿಕೆಯೂ ಹೌದು. ಆದರೆ ಹೂಡಿಕೆದಾರರ ಸಮಾವೇಶಕ್ಕೆ ಪ್ರವೇಶ ಶುಲ್ಕ ವಿಧಿಸುವ ಮೂಲಕ ಇವರೆಲ್ಲರಿಗೂ ಸಮಾವೇಶದಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಈ ದರಿದ್ರ ಸರ್ಕಾರ ಕಿತ್ತುಕೊಂಡಿದೆ ಎಂದು ವಿಪಕ್ಷ ನಾಯಕರು ಹರಿಹಾಯ್ದಿದ್ದಾರೆ.

ನಮ್ಮ ರಾಜ್ಯದ ಯುವ ಜನಾಂಗಕ್ಕೆ ಈ ಹೂಡಿಕೆದಾರರ ಸಮಾವೇಶದಲ್ಲಿ ಪ್ರವೇಶ ಇಲ್ಲದ ಮೇಲೆ ಈ ಸಮಾವೇಶ ಮಾಡುತ್ತಿರುವುದಾದರೂ ಯಾರಿಗೋಸ್ಕರ? ಮೂರು ದಿನ ಫೋಟೋ ಶೂಟ್ ಮಾಡಿಸಿಕೊಂಡು ಪುಕ್ಕಟೆ ಪ್ರಚಾರ ಪಡೆಯೋದಕ್ಕಾ? ಅಥವಾ ಗ್ಯಾರೆಂಟಿಗಳಿಂದ ದಿವಾಳಿ ಆಗಿರುವ ಸರ್ಕಾರದ ಬೊಕ್ಕಸವನ್ನು ಪ್ರವೇಶ ಶುಲ್ಕ ಮೂಲಕ ವಸೂಲಿ ಮಾಡುವುದಕ್ಕಾ? ಎಂದು ಅಶೋಕ್ ಪ್ರಶ್ನಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ