ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾವಿಗೆ ಬೆಂಬಲ ಬೆಲೆ ಘೋಷಿಸಲು ಹಿಂದೇಟು ಹಾಕುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ ಎಂದು ಜೆಡಿಎಸ್ ಆರೋಪಿಸಿದೆ.
ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ರಾಜ್ಯದ ಮಾವಿಗೆ ಆಂಧ್ರದಲ್ಲಿ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಮಾವು ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದ್ದಾರೆ. ರೈತ ವಿರೋಧಿ ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ ! ಎಂದು ಜೆಡಿಎಸ್ ಕಿಡಿಕಾರಿದೆ.


