Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಕ್ ಸ್ವಾತಂತ್ರ್ಯ ಕಿತ್ತುಕೊಳ್ಳುವ ಷಡ್ಯಂತ್ರದಲ್ಲಿ ಕಾಂಗ್ರೆಸ್ ಸರ್ಕಾರ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾರ್ವಜನಿಕರಿಗೆ ಸಂವಿಧಾನ ನೀಡಿರುವ ವಾಕ್ ಸ್ವಾತಂತ್ರ್ಯ ಕಿತ್ತುಕೊಳ್ಳುವ ಷಡ್ಯಂತ್ರವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.


ಬೆಂಗಳೂರಿನ ಪಕ್ಷದ ರಾಜ್ಯ ಕಛೇರಿ ಜೆ.ಪಿ ಭವನದಲ್ಲಿ ಶುಕ್ರವಾರ ಕರ್ನಾಟಕ ದ್ವೇಷ ಭಾಷಣ ಮತ್ತು‌ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವನ್ನು ಗೃಹ ಸಚಿವ ಜಿ.ಪರಮೇಶ್ವರ್ ಅವರ ಮಂಡಿಸಿದ ಹಿನ್ನೆಲೆಯಲ್ಲಿ ಈ ವಿಧೇಯಕ ವಿರೋಧಿಸಿ, ಸುದ್ಧಿಗೋಷ್ಠಿ ನಡೆಸಿ ಅವರು ಮಾತನಾಡಿದರು.

ಕರ್ನಾಟಕ ದ್ವೇಷ ಭಾಷಣ ಮತ್ತು‌ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕವು ಸಂವಿಧಾನ ನಮಗೆ ನೀಡಿರುವ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತದೆ ಎಂದು ನಿಖಿಲ್ ಎಚ್ಚರಿಸಿದ್ದಾರೆ.


ಈ ವಿಧೇಯಕದ ಮೂಲಕ ಕಾಂಗ್ರೆಸ್ ಸರ್ಕಾರವು 1975 ರ ತುರ್ತು ಪರಿಸ್ಥಿತಿಯನ್ನು ಮರುಕಳಿಸುವ ಕುತಂತ್ರ ಮಾಡುತ್ತಿದ್ದು, ಇದರ ಮೂಲಕ ಪ್ರತಿ ಪಕ್ಷಗಳು, ಮಾಧ್ಯಮದವರ ಮೇಲೆ ನಿಯಂತ್ರಣ ಮತ್ತು ಹೆದರಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ನಿಖಿಲ್ ಗಂಭೀರ ಆರೋಪ ಮಾಡಿದರು.



ಈ ವಿಧೇಯಕದ ಮೂಲಕ ಪ್ರಜಾಪ್ರಭುತ್ವದ ಮೇಲೆ ಕಾಂಗ್ರೆಸ್ ದಾಳಿ ಮಾಡುತ್ತಿದೆ. ಈ ಬಿಲ್ ನನ್ನು ಬೇರೆ ಯಾರೋ ತಯಾರಿಸಿ, ಗೃಹ ಸಚಿವರಾದ ಜಿ.ಪರಮೇಶ್ವರ್ ಅವರ ಮೂಲಕ ಜಾರಿಗೆ ತರಲು ಯತ್ನಿಸುತ್ತಿದ್ದಾರೆ. ಏನು ಗೊತ್ತಿಲ್ಲದ ಮಂತ್ರಿಗಳು ಇಷ್ಟೊಂದು ಕಟುವಾದ ವಿಧೇಯಕ ಮಂಡಿಸಲು ಸಾಧ್ಯವಿಲ್ಲ ಎಂದು ನಿಖಿಲ್ ಅವರು ಪರಮೇಶ್ವರ್ ಅವರ ಕಾಲೆಳೆದರು.

ಈ ಕಾನೂನಿನ ಮೂಲಕ ಮಾಧ್ಯಮಗಳನ್ನು, ರಾಜಕೀಯ ಪಕ್ಷದ ಕಾರ್ಯಕರ್ತರನ್ನು ಹಾಗೂ ವಿರೋಧ ಪಕ್ಷದ ಕಾರ್ಯಕರ್ತರನ್ನು ಹೆದರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ. ಅದು ಈ ಸರ್ಕಾರದಿಂದ ಸಾಧ್ಯವಿಲ್ಲ. ಈ ವಿಧೇಯಕದ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಹೋರಾಟ ಮಾಡಲಿದೆ ಎಂದು ನಿಖಿಲ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಅಲ್ಲದೇ, ಕಾಂಗ್ರೆಸ್ ಸರ್ಕಾರ ಪತ್ರಿಕೋದ್ಯಮದ ಸ್ವಾತಂತ್ರ್ಯ  ಹತ್ತಿಕ್ಕುವ ಕೆಲಸ ಮಾಡುತ್ತಿದ್ದು, ನಾವು- ನೀವು ಒಗ್ಗಟ್ಟಾಗಿ ಈ ವಿಧೇಯಕ ಜಾರಿಯಾಗದಂತೆ ಹೋರಾಟ ಮಾಡೋಣ ಎಂದು ಮಾಧ್ಯಮ ಮಿತ್ರರಿಗೆ ಹಾಗೂ ಸಾಮಾಜಿಕ ಜಾಲತಾಣಗಳ ಅಡ್ಮಿನ್ ಗಳಿಗೆ ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾರೆಡ್ಡಿ, ಮಾಜಿ ವಿಧಾನ ಪರಿಷತ್ ಅಧ್ಯಕ್ಷ ತಿಪ್ಪೇಸ್ವಾಮಿ, ವಕ್ತಾರರಾದ ಗಂಗಾಧರ್ ಮೂರ್ತಿ, ಪ್ರದೀಪ್ ಕುಮಾರ್ ಜತೆಯಲ್ಲಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ