Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಕ್ಕು ಹಿಡಿದ ಟ್ಯಾಂಕರ್‌ಗಳಲ್ಲಿ "ಅಶುದ್ಧ ನೀರು" ಪೂರೈಕೆಗೆ ಮುಂದಾದ ಕಾಂಗ್ರೆಸ್ ಸರ್ಕಾರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಕ್ಕು ಹಿಡಿದ ಟ್ಯಾಂಕರ್‌ಗಳಲ್ಲಿ "ಅಶುದ್ಧ ನೀರು"? – ಕಾಂಗ್ರೆಸ್ ಸರ್ಕಾರದ 8ನೇ ಗ್ಯಾರಂಟಿ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಿಯಾಲಿಟಿ ಚೆಕ್ ಮಾಡಿ ವಿಡಿಯೋ ಪೋಸ್ಟ್ ಮಾಡಿ ಟೀಕಿಸಿದ್ದಾರೆ.

"ಮನೆ ಬಾಗಿಲಿಗೆ ಶುದ್ಧ ನೀರನ್ನು ತಲುಪಿಸುವ" ಹೆಸರಿನಲ್ಲಿ ತುಕ್ಕು ಹಿಡಿದ ಹಳೆಯ ಟ್ಯಾಂಕರ್‌ಗಳಿಗೆ ಬಣ್ಣ ಬಳಿದು ನವೀಕರಿಸಿದಂತೆ ತೋರಿಸಿ, “ಸಂಚಾರಿ ಕಾವೇರಿಎಂಬ ಯೋಜನೆಯನ್ನು ವಿಧಾನಸೌಧದಿಂದ ಆರಂಭಿಸಿದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಈ ನಿರ್ಧಾರವನ್ನು ಖಂಡಿಸುತ್ತೆವೆ.

ಜನಪರ ಯೋಜನೆಎಂಬ ಮಂತ್ರ ಜಪಿಸುತ್ತಲೇ, ಸರ್ಕಾರ ನಿಜವಾದ ಜನಪರತೆಯಿಂದ ದೂರವಾಗಿ, ಟ್ಯಾಂಕರ್‌ಗಳ ಮೇಲ್ಮೈ ಬಣ್ಣವನ್ನು ಬದಲಾಯಿಸುವ ಮೂಲಕ ಜನರ ಆರೋಗ್ಯಕ್ಕೆ ಬಣ್ಣದ ಲೇಪನವನ್ನು ಹಾಕುತ್ತಿದೆ. ಈ ಯೋಜನೆಯ ರೂವಾರಿಯಾದ ಮಂತ್ರಿಗಳ ಚಿಂತನೆಗೂ ಈಗಾಗಲೇ ತುಕ್ಕು ಹಿಡಿದಿದೆ ಎಂಬುದು ಸ್ಪಷ್ಟ ಎಂದು ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಮಾಡಿದ್ದಾರೆ.

ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಈ ಯೋಜನೆಯನ್ನು "ಮನೆ ಬಾಗಿಲಿಗೆ ಶುದ್ಧ ನೀರನ್ನು ತಲುಪಿಸುವ" ಎಂದು ಹೇಳುವ ಬದಲಿಗೆ "ತುಕ್ಕು ಹಿಡಿದ ಟ್ಯಾಂಕರ್ ಗಳಲ್ಲಿ, ಮನೆ ಬಾಗಿಲಿಗೆ ಅಶುದ್ಧ ನೀರನ್ನು ತಲುಪಿಸುವ" ಯೋಜನೆ ಎಂದು ಹೇಳುವುದು ಸೂಕ್ತ. ಅದಲ್ಲದೆ ಟ್ಯಾಂಕರ್ ಗಳ ಖರೀದಿಯಲ್ಲಿ ಆಗಿರುವ ಭ್ರಷ್ಟಾಚಾರವನ್ನು ಊಹಿಸಲು ಅಸಾಧ್ಯ ಮತ್ತು ಶುದ್ಧವಾದ ಟ್ಯಾಂಕರ್ ಗಳಲ್ಲಿ ಶುದ್ಧವಾದ ನೀರನ್ನು ಕಳುಹಿಸಬೇಕಾದ ಇವರು ಅಶುದ್ಧವಾದ ಟ್ಯಾಂಕರ್ ಗಳಲ್ಲು ಇವರ ಜಾಹೀರಾತನ್ನು ಶುದ್ಧವಾಗಿ ಹಾಕಿಕೊಂಡಿರುವುದು ಹಾಸ್ಯಾಸ್ಪದ ಎಂದು ಅವರು ವಾಗ್ದಾಳಿ ಮಾಡಿದ್ದಾರೆ.

ತುಕ್ಕು ಹಿಡಿದ ಟ್ಯಾಂಕರ್‌ಗಳಿಗೆ ಬಣ್ಣ ಬಳಿದು ಅವುಗಳಲ್ಲಿ ಬಿ.ಐ.ಎಸ್ ಪ್ರಮಾಣಿತ ನೀರನ್ನು ಪೂರೈಸಲಾಗುತ್ತಿದೆ ಎಂಬ ನಾಟಕವನ್ನು ಜನರು ನಂಬಲಾರರು. ವಿಧಾನಸೌಧದ ಆವರಣದಲ್ಲೇ ಇಂತಹ ತುಕ್ಕು ಹಿಡಿದ ಟ್ಯಾಂಕರ್‌ಗಳನ್ನು ಪ್ರದರ್ಶಿಸಿದ್ದು, ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ನಿಲುವನ್ನು ಸ್ಪಷ್ಟಪಡಿಸುತ್ತದೆ.

ಈ ಯೋಜನೆಯ ಟ್ಯಾಂಕರ್‌ಗಳಿಗೆ ಮಾತ್ರ ತುಕ್ಕು ಹಿಡಿದಿಲ್ಲ, ಯೋಜನೆ ರೂಪಿಸುವ ಕಲ್ಪನೆಗೂ, ಜವಾಬ್ದಾರಿ ನಿಯೋಜನೆಗೂ, ಸಿದ್ದರಾಮಯ್ಯ ಸರ್ಕಾರದ ಸಾರ್ವಜನಿಕ ಸೇವೆಯ ಮಾನವೀಯ ದೃಷ್ಟಿಕೋನಕ್ಕೂ ಗಂಭೀರ ತುಕ್ಕು ಹಿಡಿದಿದೆ.

ಸ್ವಚ್ಛತೆ, ಸುರಕ್ಷತೆ ಮತ್ತು ಆರೋಗ್ಯಕ್ಕೆ ಆದ್ಯತೆ ನೀಡಬೇಕಾದ ಸರ್ಕಾರ, ಭ್ರಷ್ಟಾಚಾರದಲ್ಲಿ ಮುಳುಗಿ ಸಾರ್ವಜನಿಕರ ಜೀವನಕ್ಕೆ ಗ್ಯಾರಂಟಿ ಇಲ್ಲದಂತೆ ಮಾಡಿದೆ ಎಂದು ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಮಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್.ಕೇಶವಪ್ರಸಾದ್ ರವರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ