LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಕಾಂಗ್ರೆಸ್ ಸರ್ಕಾರ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿ ಆತಂಕ ಸೃಷ್ಟಿಯಾಗಿರುವ ಬೆನ್ನಲ್ಲೇ, ಕಾವೇರಿ ವಿಚಾರವಾಗಿ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷದ ನಾಯಕ ಆರ್. ಅಶೋಕ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಬರದ ಭೀತಿ ಇದ್ದರೂ ಕಾಂಗ್ರೆಸ್ ಸರ್ಕಾರವು ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿದ್ದು, ಇದು ಕನ್ನಡಿಗರಿಗೆ ಮಾಡುತ್ತಿರುವ "ಮಹಾದ್ರೋಹ" ಎಂದು ಅವರು ಸೋಮವಾರ ಗಂಭೀರವಾಗಿ ಆರೋಪಿಸಿದ್ದಾರೆ.

"ಬೆನ್ನಿಗೆ ಚುಚ್ಚುತ್ತಿರುವ ಚೂರಿ":
ಈ ಕುರಿತು ಸಾಮಾಜಿಕ ಜಾಲತಾಣ 'ಎಕ್ಸ್' ನಲ್ಲಿ ಆಕ್ರೋಶ ಹೊರಹಾಕಿರುವ ಆರ್. ಅಶೋಕ, "ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹನಿ ನೀರಿಗೂ ಜನ ಪರದಾಡುವ ಭೀಕರ ಪರಿಸ್ಥಿತಿ ಎದುರಾಗಿದೆ. ಆದರೆ ಈ ಕಳ್ಳ ಕಾಂಗ್ರೆಸ್ ಸರ್ಕಾರ ಕುಡಿಯುವ ನೀರಿನ ನೆಪವೊಡ್ಡಿ ಕಾವೇರಿ ಕೊಳ್ಳದ ಜೀವನಾಡಿ ಕೆಆರ್‌ಎಸ್ ಡ್ಯಾಂನಿಂದ ಕಳೆದ ಮೂರು ದಿನಗಳಿಂದ ಪ್ರತಿದಿನ 2,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಇದು ಕನ್ನಡಿಗರ ಬೆನ್ನಿಗೆ ಚುಚ್ಚುತ್ತಿರುವ ಚೂರಿಯಲ್ಲದೆ ಮತ್ತಿನ್ನೇನು?" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೇರವಾಗಿ ಪ್ರಶ್ನಿಸಿದ್ದಾರೆ.

ಆರ್. ಅಶೋಕ ಹೊರಿಸಿರುವ ಪ್ರಮುಖ ಆರೋಪಗಳು:
ಅಧಿಕಾರಕ್ಕಾಗಿ ಶರಣಾಗತಿ: ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರವಿಲ್ಲದಾಗ "ನಮ್ಮ ನೀರು ನಮ್ಮ ಹಕ್ಕು" ಎಂದು ನಾಟಕದ ಬೊಬ್ಬೆ ಹೊಡೆಯುತ್ತದೆ. ಅದೇ ಅಧಿಕಾರ ಸಿಕ್ಕಾಗ "ನಮ್ಮ ನೀರು ತಮಿಳುನಾಡಿನ ಹಕ್ಕು" ಎಂದು ಅಲ್ಲಿನ ಸರ್ಕಾರದ ಎದುರು ಸಂಪೂರ್ಣ ಶರಣಾಗುತ್ತದೆ.

ಹೈಕಮಾಂಡ್ ಅಣತಿ, ರಾಜಕೀಯ ಮೈತ್ರಿ: ನಾಡಿನ ಜನತೆಯ ಹಿತ ಕಾಯುವಲ್ಲಿ ವಿಫಲವಾಗಿರುವ ಕಾಂಗ್ರೆಸ್, ತನ್ನ ದೆಹಲಿ ಹೈಕಮಾಂಡ್ ಅಣತಿಯಂತೆ ರಾಜಿ ಮಾಡಿಕೊಂಡಿದೆ. ಕೇವಲ ರಾಜಕೀಯ ಮೈತ್ರಿ ಮತ್ತು ಅಧಿಕಾರದ ಆಸೆಗಾಗಿ ಕನ್ನಡಿಗರಿಗೆ ಪದೇ ಪದೇ ಅನ್ಯಾಯ ಮಾಡುತ್ತಿದೆ.

ತಮಿಳುನಾಡು ಪಕ್ಷಗಳೊಂದಿಗೆ ಹೊಂದಾಣಿಕೆ: ಅಂದು ಡಿಎಂಕೆ, ಟಿವಿಕೆ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ಕಾವೇರಿ ಕೊಳ್ಳದ ರೈತರ ಹಿತವನ್ನು ಬಲಿಗೊಡಲಾಗುತ್ತಿದೆ. ಈ ಸರ್ಕಾರಕ್ಕೆ ಕನ್ನಡಿಗರ ಹಿತಕ್ಕಿಂತ ಅಧಿಕಾರದ ಸ್ವಾರ್ಥವೇ ಹೆಚ್ಚಾಗಿದೆ ಎಂದು ಕಿಡಿಕಾರಿದ್ದಾರೆ.

ವಿಪಕ್ಷದ ಆಗ್ರಹ:
ರಾಜ್ಯದಲ್ಲಿ ಮಳೆಯಿಲ್ಲದೆ ಜಲಾಶಯಗಳು ತುಂಬದ ಈ ಸನ್ನಿವೇಶದಲ್ಲಿ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಕಾವೇರಿ ಕೊಳ್ಳದ ರೈತರು ಹಾಗೂ ಬೆಂಗಳೂರಿನ ಜನತೆಯ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕರು ಆಗ್ರಹಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಆಗಸ್ಟ್ 16, 17ರ ಎರಡು ದಿನಗಳ ರಾಜ್ಯ ಪ್ರವಾಸಮುಂಗಾರು ಅಧಿವೇಶನ ಅನಿರ್ದಿಷ್ಟಾವಧಿ ಮುಂದೂಡಿಕೆ: ಲೋಕಸಭೆಯಲ್ಲಿ ಶೇ 19, ರಾಜ್ಯಸಭೆಯಲ್ಲಿ ಶೇ 39 ಉತ್ಪಾದಕತೆ ದಾಖಲುಕಾವೇರಿ ನೀರು ಬಿಡುಗಡೆ ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ: ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ, ಜನಜೀವನ ಸಹಜಶಾಸನಸಭೆ ಕಾಂಗ್ರೆಸ್‌ಅಭ್ಯರ್ಥಿಗಳ ಸ್ಪರ್ಧೆ: ಜಿ.ಎಸ್. ಪಾಟೀಲ್, ಸಲೀಂ ಅಹ್ಮದ್ ನಾಮಪತ್ರ ಸಲ್ಲಿಕೆಗುಟ್ಕಾ, ಪಾನ್ ಮಸಾಲೆ ನಿಷೇಧ: ಅಡಕೆ ಬೆಳೆಗಾರರಿಗೆ, ಸಹಕಾರ ಸಂಘಗಳಿಗೆ ತೀವ್ರ ಆಘಾತಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಅಧಿವೇಶನ ಆರಂಭ: ಸಿದ್ದರಾಮಯ್ಯ ಸೇರಿ ಹಲವು ಶಾಸಕರು ಗೈರು, ಅಸಮಾಧಾನದ ಹೊಗೆ?ತಮಿಳುನಾಡಿನ ದೋಷಪೂರಿತ ಲೆಕ್ಕಾಚಾರಕ್ಕೆ ಕರ್ನಾಟಕ ಆಕ್ಷೇಪ, ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಕೆಬಿಸಿಯೂಟ ಯೋಜನೆಗೆ 'ಚೆನ್ನಮ್ಮ' ಹೆಸರಿಡಿ: ಅಗಲಿದ ಗಣ್ಯರಿಗೆ ಭಾವಪೂರ್ಣ ಸಂತಾಪಖರ್ಗೆ ರ‍್ಯಾಲಿ ನಡೆದ ಮೈದಾನ 'ಶುದ್ಧೀಕರಣ': ರಾಜಕೀಯ ಕಾಳಗ ತೀವ್ರಯುವತಿ ಸಿರಿಲಕ್ಷ್ಮಿ ಕಣ್ಮರೆ: ಪತ್ತಗೆ ಮನವಿ