Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗೃಹಲಕ್ಷ್ಮಿ ಯೋಜನೆಯಲ್ಲಿ ಕಾಂಗ್ರೆಸ್ ಸರ್ಕಾರದ್ದು ‘ಹೈದರಾಲಿ ನೀತಿ’: ಸಿ.ಟಿ ರವಿ ವಾಗ್ದಾಳಿ

​ ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆ ಅನುಷ್ಠಾನ ಹಾಗೂ ಫಲಾನುಭವಿಗಳ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರವು ಬಡವರಿಗೆ ವಂಚಿಸುತ್ತಿದ್ದು, ‘ಹೈದರಾಲಿ ನೀತಿ’ ಅನುಸರಿಸುತ್ತಿದೆ ಎಂದು ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

​ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಗೂ ಮುನ್ನ ‘ಎಲ್ಲರಿಗೂ ಉಚಿತ, ಎಲ್ಲ ಮಹಿಳೆಯರಿಗೂ ₹2,000’ ಎಂದು ಅಬ್ಬರದ ಪ್ರಚಾರ ಮಾಡಿದ್ದ ಕಾಂಗ್ರೆಸ್ ನಾಯಕರು, ಈಗ ಫಲಾನುಭವಿಗಳ ಸಂಖ್ಯೆಯನ್ನು ಕಡಿತಗೊಳಿಸಲು ನಾನಾ ಕಂಡಿಷನ್‌ಗಳನ್ನು ಹಾಕುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

Advertisement

​ಏನಿದು ಹೈದರಾಲಿ ನೀತಿ? ಸಿ.ಟಿ ರವಿ ಟಾಂಗ್:
​"
ಹಿಂದೆ ಮೈಸೂರು ಸಂಸ್ಥಾನದಲ್ಲಿದ್ದ ಹೈದರಾಲಿಯು ಸೈನಿಕರಿಗೆ ಸಂಬಳ ನೀಡಬೇಕಾದ ಸಂದರ್ಭ ಬಂದಾಗಲೆಲ್ಲಾ ಒಂದಲ್ಲಾ ಒಂದು ಕಾರಣ ನೀಡಿ ಮುಂದೂಡುತ್ತಿದ್ದನು. ಆ ಮೂಲಕ ಸಂಬಳವನ್ನೇ ಎಗರಿಸುತ್ತಿದ್ದನು. ಈಗಿನ ಕಾಂಗ್ರೆಸ್ ಸರ್ಕಾರವೂ ಗೃಹಲಕ್ಷ್ಮಿ ಹಣ ನೀಡಲು ಇದೇ ನೀತಿಯನ್ನು ಅನುಸರಿಸುತ್ತಿದೆ. ಸತ್ತವರ ಹೆಸರಿಗೆ ಹಣ ಹೋಗಿದೆ, ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದೆ ಎಂಬ ನೆಪಗಳನ್ನು ಒಡ್ಡಿ, ಬಡ ಮಹಿಳೆಯರಿಗೆ ಸಿಗಬೇಕಾದ ಹಣವನ್ನು ಕಡಿತಗೊಳಿಸಲಾಗುತ್ತಿದೆ," ಎಂದು ಸಿ.ಟಿ. ರವಿ ಇತಿಹಾಸದ ಉದಾಹರಣೆ ನೀಡಿ ವ್ಯಂಗ್ಯವಾಡಿದರು.

​ಬಿಪಿಎಲ್ ಕಾರ್ಡ್‌ಗಳೂ ಬಂದ್:
​ಗೃಹಲಕ್ಷ್ಮಿ ಯೋಜನೆಗೆ ಹಣ ನೀಡಬೇಕಾಗುತ್ತದೆ ಎಂಬ ಕಾರಣಕ್ಕಾಗಿಯೇ ಸರ್ಕಾರ ಹೊಸ ಬಿಪಿಎಲ್ ಕಾರ್ಡ್‌ಗಳನ್ನು ವಿತರಿಸುವುದನ್ನು ಸ್ಥಗಿತಗೊಳಿಸಿದೆ. ಇದರಿಂದಾಗಿ ರಾಜ್ಯದ ಲಕ್ಷಾಂತರ ಅರ್ಹ ಬಡ ಕುಟುಂಬಗಳು ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗುತ್ತಿವೆ ಎಂದು ಅವರು ದೂರಿದರು.

​ಸಿಎಜಿ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗವಾಗಿರುವ ಕುರಿತು ಉಲ್ಲೇಖವಿದ್ದರೂ ಸರ್ಕಾರ ತನಿಖೆಗೆ ಆದೇಶಿಸದೆ ಮೌನ ವಹಿಸಿದೆ. ಬಡವರ ಹೆಸರಿನಲ್ಲಿ ಲೂಟಿ ಹೊಡೆಯುತ್ತಿರುವ ಈ ವ್ಯವಸ್ಥಿತ ಹಗರಣವನ್ನು ತಕ್ಷಣವೇ ಸಿಬಿಐ ಅಥವಾ ವಿಶೇಷ ತನಿಖಾ ತಂಡಕ್ಕೆ ವಹಿಸಬೇಕು ಎಂದು ಅವರು ಒತ್ತಾಯಿಸಿದರು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ