Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂರು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಜಯ ಸಾಧಿಸಿದೆ.
ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರಗಳಲ್ಲಿ ಆಡಳಿತ ರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ನಿರೀಕ್ಷೆಗೂ ಮೀರಿ ಜಯ ಸಾಧಿಸುವ ಮೂಲಕ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗೆದ್ದು ಬೀಗಿದ್ದಾರೆ.


ಸಂಡೂರು ಕ್ಷೇತ್ರ- ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ. ಅನ್ನಪೂರ್ಣ (ಕಾಂಗ್ರೆಸ್)- 93616 ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಬಂಗಾರ ಹನುಮಂತ (ಬಿಜೆಪಿ)- 83967 ಅವರಿಗಿಂತ 9649 ಮತಗಳನ್ನು ಪಡೆದು ಗೆದ್ದು ಬೀಗಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಈ ಅನ್ನಪೂರ್ಣ ಅವರು ಬಿಜೆಪಿಯ ಬಂಗಾರ ಹನುಮಂತ ಅವರಿಗಿಂತ 9649 ಹೆಚ್ಚು ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಚನ್ನಪಟ್ಟಣ-
ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೈನಿಕ ಸಿ.ಪಿ.ಯೋಗೇಶ್ವರ್ ಅವರು ತನ್ನ ಪ್ರತಿಸ್ಪರ್ಧಿ ಜೆಡಿಎಸ್ ಪಕ್ಷದ ನಿಖಿಲ್ ಕುಮಾರಸ್ವಾಮಿ ಅವರಿಗಿಂತ 25,357 ಮತಗಳ ಅಂತರದಿಂದ ಗೆದ್ದಿದ್ದಾರೆ.


ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯ ಫಲಿತಾಂಶದ 20ನೇ ಸುತ್ತಿನ ಮತ ಎಣಿಕೆ ಮುಕ್ತಾಯ ಕಂಡಿದ್ದು, JDS ಒಟ್ಟು 87031 ಮತಗಳನ್ನು ಪಡೆದಿದೆ, ಕಾಂಗ್ರೆಸ್‌ 112388 ಮತಗಳನ್ನು ಪಡೆದಿದ್ದು, ಆ ಮೂಲಕ ಕಾಂಗ್ರೆಸ್‌ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು 25,357 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

ಶಿಗ್ಗಾಂವಿಯಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ ಜಯ ಸಾಧಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ