Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿರಂಕುಶ ಪ್ರಭುತ್ವ ಸಾಧಿಸಲು ಹವಣಿಸುತ್ತಿರುವ ಕಾಂಗ್ರೆಸ್ ನಾಯಕರು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕಲು ಭಾರತದದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕರಾಳ ಇತಿಹಾಸ ಕಾಂಗ್ರೆಸ್ ಪಕ್ಷದ್ದು. ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿರುವ ವಿರೋಧ ಪಕ್ಷವನ್ನು ದಮನ ಮಾಡಲು ವಿರೋಧಿ ರಾಜಕೀಯ ನೇತಾರರು ಹಾಗೂ ಪ್ರಮುಖರನ್ನು ಜೈಲಿಗೆ ತಳ್ಳಿದ ಕುಖ್ಯಾತಿ ಕಾಂಗ್ರೆಸ್ ಪಕ್ಷದ್ದು. ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಧ್ಯಮ ಕಚೇರಿಗಳಿಗೆ ಬೀಗ ಜಡಿದು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಿ, ಸಂವಿಧಾನದ ಆಶಯದ ಮೇಲೆ ಅಟ್ಟಹಾಸ ಮೆರೆದ ಇತಿಹಾಸ ಕಾಂಗ್ರೆಸ್ ಪಕ್ಷದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಾಪ್ರಹಾರ ಮಾಡಿದ್ದಾರೆ.

ಅಧಿಕಾರಕ್ಕೆ ಬಂದಾಗಲೆಲ್ಲಾ ಪಾಳೆಗಾರಿಕೆ ಗುಂಗಿನಲ್ಲಿ ವರ್ತಿಸುವ ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಕಳೆದ 2 ವರ್ಷಗಳಲ್ಲಿ ನಿರಂಕುಶ ಪ್ರಭುತ್ವ ಸಾಧಿಸಲು ಹವಣಿಸುತ್ತಿದ್ದಾರೆ. ಸರಣಿ ಭ್ರಷ್ಟಾಚಾರಗಳು, ಅಭಿವೃದ್ಧಿ ಶೂನ್ಯ ಆಡಳಿತವನ್ನು ಪ್ರಶ್ನಿಸಿ ಹೋರಾಡುತ್ತಿರುವ ವಿರೋಧ ಪಕ್ಷಗಳನ್ನು  ಈವರೆವಿಗೂ ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಬೆದರಿಸುತ್ತಿದ್ದ ಕಾಂಗ್ರೆಸ್, ವಿಧಾನ ಸಭೆಯ ಅಧ್ಯಕ್ಷರನ್ನು ಬಳಸಿಕೊಂಡು ವಿರೋಧ ಪಕ್ಷದ 18 ಸದಸ್ಯರನ್ನು ಸುದೀರ್ಘ ಅವಧಿಗೆ ಅಮಾನತ್ತು ಮಾಡಿ ಸಭಾಧ್ಯಕ್ಷ ಪೀಠವನ್ನು ತನ್ನ ಸರ್ವಾಧಿಕಾರತನ ಪ್ರದರ್ಶಿಸಲು ಬಳಸಿಕೊಂಡಿತ್ತು ಎಂದು ಅವರು ಹರಿಹಾಯ್ದಿದ್ದಾರೆ.

ಇದೀಗ ಸಾಧನೆಯ ಹೆಸರಿನಲ್ಲಿ  ರಾಜ್ಯದ ಜನರಿಗೆ ಸುಳ್ಳು ಹೇಳಲು ಹೊರಟು ಬರಿದಾಗಿರುವ ಬೊಕ್ಕಸವನ್ನು ಮತ್ತಷ್ಟು ಬರಿದು ಮಾಡಲು ದುಂದುವೆಚ್ಚದಲ್ಲಿ ಸಾಧನ ಸಮಾವೇಶಮಾಡಲು ಹೊರಟ ಜನವಿರೋಧಿ ನಡೆಯನ್ನು ಪ್ರಶ್ನಿಸಿ ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಮಾಧ್ಯಮಗಳ ಮೂಲಕ ಜಾಹಿರಾತು ಬಿಡುಗಡೆ ಮಾಡಿದರೆ ಅದರಿಂದ ವಿಚಲಿತಗೊಂಡು ಮಾನನಷ್ಟ ಮೊಕದ್ದಮೆ ಹೂಡಲು ಹೊರಟಿದೆ.

ಇದಕ್ಕೆ ಸರ್ಕಾರದ ವ್ಯವಸ್ಥೆ ಹಾಗೂ ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ಇದೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ವಿರೋಧ ಪಕ್ಷ ಹಾಗೂ ಮಾಧ್ಯಮದವರನ್ನು ಬೆದರಿಸುವ ಕರಾಳ ಅಧಿಸೂಚನೆ ಹೊರಡಿಸಿದೆ. ಕೇವಲ ಜಾಹಿರಾತಿಗೆ ಇಷ್ಟೊಂದು ಹೆದರಿರುವ ಕಾಂಗ್ರೆಸ್ ಸರ್ಕಾರದ ನಡೆ ಪಲಾಯನವಾದ ಹಾಗೂ ʼಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡಂತೆʼ ಎಂಬುದನ್ನು ಪ್ರತಿಬಿಂಬಿಸುತ್ತಿದೆ ಎಂದು ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ಯಾವುದೇ ಬೆದರಿಕೆಗೂ ಕರ್ನಾಟಕ ಬಿಜೆಪಿ ಪಕ್ಷ ಅಂಜುವ ಪ್ರಶ್ನೆಯೇ ಇಲ್ಲ. ಪೊಲೀಸ್ ಹಾಗೂ ಕಾನೂನಿನ ಹೆಸರಿನಲ್ಲಿ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ನೀವು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನದ ಪರಮಾವಧಿಯಲ್ಲದೇ ಬೇರೆನೂ ಅಲ್ಲ. ನಿಮ್ಮ ಸರ್ವಾಧಿಕಾರಿ ಮನಃಸ್ಥಿತಿಗೆ ಭಟ್ಟಂಗಿಗಳ ಹಾಗೂ ಅವಿವೇಕಿಗಳ ಸಲಹೆಯನ್ನು ಆಧರಿಸಿ, ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿರುವುದು ಕೇವಲ ಭಾರತೀಯ ಜನತಾ ಪಾರ್ಟಿ ವಿರುದ್ಧವಷ್ಟೇ ಅಲ್ಲ, ಮಾಧ್ಯಮಗಳ ವಿರುದ್ಧವೂ ಸೇಡು ತೀರಿಸಿಕೊಳ್ಳಲು ಹೊರಟಿರುವುದು ಸ್ಪಷ್ಟವಾಗಿದೆ ಎಂದು ಅವರು ಟೀಕಿಸಿದ್ದಾರೆ.

ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ, ಅದನ್ನು ಹಿಮ್ಮೆಟ್ಟಿಸುವ ಶಕ್ತಿ ಪ್ರಜಾಪ್ರಭುತ್ವಕ್ಕಿದೆಕರ್ನಾಟಕದ ಜನರಿಗಿದೆ, ವಿರೋಧ ಪಕ್ಷಗಳಿಗಿದೆ ಹಾಗೂ ಮಾಧ್ಯಮಗಳಿಗಿದೆ ಎಂಬುದನ್ನು ಶೀಘ್ರದಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಎದುರು ನೋಡಲಿದೆ ಎಂದು ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ