ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಮಹತ್ವದ ಸಮಾಲೋಚನಾ ಸಭೆ ನಡೆಯಿತು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ನಡೆಸಿದ ಈ ವಿಡಿಯೋ ಸಂವಾದದಲ್ಲಿ ರಾಜ್ಯದ ಲೋಕಸಭಾ, ರಾಜ್ಯಸಭಾ ಸದಸ್ಯರು, ಸಚಿವರು, ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳು ಭಾಗವಹಿಸಿದ್ದರು.
ಮತಗಳವು ತಡೆಗಟ್ಟುವುದು ಮತ್ತು ಮತದಾರರ ಪಟ್ಟಿಯಲ್ಲಿ ಅರ್ಹರ ಹೆಸರು ಸೇರ್ಪಡೆಗೊಳಿಸುವ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸಚಿವರಾದ ಕೆ.ಹೆಚ್. ಮುನಿಯಪ್ಪ, ಶಿವಲಿಂಗೇಗೌಡ, ಜಮೀರ್ ಅಹ್ಮದ್ ಖಾನ್, ಎಸ್.ಎಸ್. ಮಲ್ಲಿಕಾರ್ಜುನ್, ಹೆಚ್.ಸಿ. ಬಾಲಕೃಷ್ಣ, ಪುಟ್ಟರಂಗಶೆಟ್ಟಿ, ಟಿ. ರಘುಮೂರ್ತಿ, ಕೆ.ಎಸ್. ಬಸವಂತಪ್ಪ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಉಪಸ್ಥಿತರಿದ್ದರು.




