ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಶಾಸಕರೇ ಒಬ್ಬಬ್ಬರಾಗಿ ಕಾಂಗ್ರೆಸ್ ಸರ್ಕಾರಕ್ಕೆ ಛೀ...ಥೂ... ಅಂತ ಉಗೀತಾ ಇದ್ದಾರೆ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಾಪ್ರಹಾರ ಮಾಡಿದ್ದಾರೆ.
ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ "ಮನಿ ಫಾರ್ ಮನೆ" ಭ್ರಷ್ಟಾಚಾರವನ್ನು ಬಯಲಿಗೆಳೆದ ಬೆನ್ನಲ್ಲೇ ಈಗ ಮತ್ತೊಬ್ಬ ಕಾಂಗ್ರೆಸ್ ಶಾಸಕ ಕಾಂಗ್ರೆಸ್ ಸರ್ಕಾರದ ಬಂಡವಾಳ ಬಯಲು ಮಾಡಿದ್ದಾರೆ.
ಅನುಮೋದನೆಗೊಂಡ ಯೋಜನೆ ಕಾಮಗಾರಿಗಳಿಗೆ ವರ್ಕ್ ಆರ್ಡರ್ ಕೊಡೋಕೆ ಎರಡು ವರ್ಷದಿಂದ ವಿಳಂಬವಾಗುತ್ತಿದೆ, ಸಿಎಂನ ಭೇಟಿ ಮಾಡಿ ರಾಜೀನಾಮೆ ಕೊಡ್ತಿನಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕ ರಾಜು ಕಾಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿ.ಆರ್.ಪಾಟೀಲ್ ಅವರ ಪರಿಸ್ಥಿತಿಯೇ ತಮಗೂ ಬಂದಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ನಿಮ್ಮ ನಾಲಾಯಕ್ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ಬಗ್ಗೆ ನಿಮ್ಮದೇ ಪಕ್ಷದ ಶಾಸಕರು ದಿನಕ್ಕೊಂದು ಸರ್ಟಿಫಿಕೇಟ್ ಕೊಡುತ್ತಿದ್ದಾರಲ್ಲ ಸಿಎಂ ಸಿದ್ದರಾಮಯ್ಯ ನವರೇ, ಇನ್ನೆಷ್ಟು ದಿನ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ಕರ್ನಾಟಕದ ಘನತೆ, ಗೌರವ ಕಾಪಾಡಿ ಎಂದು ವಿಪಕ್ಷ ನಾಯಕ ಅಶೋಕ್ ತಾಕೀತು ಮಾಡಿದ್ದಾರೆ.


