Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಜಿಲ್ಲಾಡಳಿತದ ವಿರುದ್ಧ ಕಾಂಗ್ರೆಸ್ ಶಾಸಕರ ಧರಣಿ

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಜನವರಿ 12 ಕ್ಕೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಇದ್ದು
, ಚನ್ನಗಿರಿ ತಾಲ್ಲೂಕಿನ ನಲ್ಲೂರು ಕೃಷಿ ಪತ್ತಿನ ಸಹಕಾರ ಸಂಘದ ಮತದಾರರ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಹಾಗೂ ಚುನಾವಣೆ ನಡೆಯುವವರೆಗೂ ಸೊಸೈಟಿಯನ್ನು ಸೂಪರ್‌ಸೀಡ್‌ಮಾಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ ಶಾಸಕ ಬಸವರಾಜು ವಿ.ಶಿವಗಂಗಾ ದಾವಣಗೆರೆ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಒತ್ತಾಯಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ರೈತರೊಂದಿಗೆ ಭೇಟಿ ನೀಡಿದ ಶಾಸಕ ಬಸವರಾಜು ಅವರು ಧರಣಿ ಆರಂಭಿಸಿದರು. ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟುಹಿಡಿದರು.
ಸಹಕಾರ ಸಂಘಕ್ಕೆ ಜ.12ರಂದು ಚುನಾವಣೆ ನಿಗದಿಯಾಗಿದೆ. ಸಂಘದ ಆಡಳಿತ ಮಂಡಳಿಯೊಂದಿಗೆ ಕೈಜೋಡಿಸಿದ ಅಧಿಕಾರಿಗಳು ಮತದಾರರ ಪಟ್ಟಿಯನ್ನು ನಕಲಿ ಮಾಡಿದ್ದಾರೆ. ಮತದಾರರ ಪಟ್ಟಿಯನ್ನು ತಿದ್ದಿ ಅರ್ಹತೆ ಇಲ್ಲದವರಿಗೂ ಮತದಾನದ ಹಕ್ಕು ನೀಡ‌ಲಾಗಿದೆ. ಸಂಘದ ಸಭೆಗೆ ಗೈರಾಗಿದ್ದ 200ರಿಂದ 250 ಸದಸ್ಯರ ದಾಖಲೆಗಳನ್ನು ತಿದ್ದಲಾಗಿದೆ. ವೈಟ್ನರ್‌ಹಚ್ಚಿ ಅಕ್ರಮ ಎಸಗಿರುವುದಕ್ಕೆ ಸಂಬಂಧಿಸಿದಂತೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.


ಸಹಕಾರ ಸಂಘದ ಆಡಳಿತ ಮಂಡಳಿಯ ವಿರುದ್ಧ ಸಾಕಷ್ಟು ಆರೋಪಗಳಿವೆ. ಸಹಕಾರ ಇಲಾಖೆಯಲ್ಲಿ ನಾಲ್ವರು ಅಧಿಕಾರಿಗಳು ಬೀಡುಬಿಟ್ಟಿದ್ದಾರೆ. ಸೊಸೈಟಿಗಳಲ್ಲಿರುವ ಹಣ ಇವರ ಸ್ವಂತದ್ದು ಎಂಬಂತೆ ವರ್ತಿಸುತ್ತಿದ್ದಾರೆ. ಕೆಲ ರೈತರಿಗೆ ಎಕರೆಗೆ ರೂ.10,000 ಸಾಲ ನೀಡಿದರೆ, ಇನ್ನೂ ಕೆಲ ರೈತರಿಗೆ ಎಕರೆಗೆ ರೂ. 1 ಲಕ್ಷದವರೆಗೆ ಸಾಲ ನೀಡಲಾಗಿದೆ. ಹೆಚ್ಚುವರಿ ಸಾಲ ಕೇಳಿದ ರೈತರ ಮೇಲೆ ದಬ್ಬಾಳಿಕೆ, ರೌಡಿಸಂ ನಡೆಸಲಾಗುತ್ತಿದೆಎಂದು ಶಾಸಕ ಬಸವರಾಜು ಆಕ್ರೋಶ ವ್ಯಕ್ತಪಡಿಸಿದರು.

ಸಹಕಾರ ಇಲಾಖೆಯ ನೋಂದಣಿ ಅಧಿಕಾರಿಯನ್ನು ನಲ್ಲೂರಿಗೆ ಕಳುಹಿಸುವಂತೆ ಜಿಲ್ಲಾಧಿಕಾರಿಗೆ ಕೋರಿಕೊಂಡಿದ್ದೆ. ಈವರೆಗೆ ಯಾರೊಬ್ಬರೂ ಸ್ಥಳಕ್ಕೆ ಬಂದಿಲ್ಲ. ಸಂಘದ ಅಕ್ರಮಗಳ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮನ ಸೆಳೆಯಲಾಗಿತ್ತು. ಯಾವೊಬ್ಬ ಅಧಿಕಾರಿಯೂ ಸ್ಪಂದಿಸಿಲ್ಲ. ಶಾಸಕರನ್ನು ನಂಬಿದ ರೈತರಿಗೆ ನ್ಯಾಯ ಕೊಡಿಸಲು ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಶಾಸಕರು ಹೇಳಿದರು.

ತನಿಖೆ ಪ್ರಗತಿಯಲ್ಲಿದೆ: ಡಿಸಿ
ಧರಣಿ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ಶಾಸಕ ಬಸವರಾಜು ವಿ.ಶಿವಗಂಗಾ ಅವರ ಮನವೊಲಿಸಲು ನಡೆಸಿದ ಪ್ರಯತ್ನಗಳು ಫಲ ನೀಡಲಿಲ್ಲ. ಜಿಲ್ಲಾಧಿಕಾರಿ ಕಚೇರಿ ಒಳಗೆ ಚರ್ಚೆ ನಡೆಸಲು ಶಾಸಕರು ನಿರಾಕರಿಸಿದರು.


ಯುವಜನೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿದ್ದರಿಂದ ಫೋನ್‌ಕರೆಗಳಿಗೆ ಸ್ಪಂದಿಸಲು ಸಾಧ್ಯವಾಗಲಿಲ್ಲ. ಈ ಕುರಿತ ಚರ್ಚೆಯನ್ನು ಕಚೇರಿಯ ಒಳಗೆ ನಡೆಸೋಣ ಬನ್ನಿ ಎಂದು ಜಿಲ್ಲಾಧಿಕಾರಿ ಕೈಮುಗಿದು ಮನವಿ ಮಾಡಿಕೊಂಡರು.
ಸಹಕಾರ ಸಂಘದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ನೇತೃತ್ವದ ತಂಡ ತನಿಖೆ ನಡೆಸುತ್ತಿದೆ
ಎಂದು ಶಾಸಕರಿಗೆ ಮಾಹಿತಿ ನೀಡಿದರು.

ಬಣಗಳ ನಡುವೆ ಗಲಾಟೆ-
ನಲ್ಲೂರು ಕೃಷಿ ಪತ್ತಿನ ಸಹಕಾರ ಸಂಘದ ವಿಚಾರಕ್ಕೆ ಸಂಬಂಧಿಸಿದಂತೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜು ವಿ.ಶಿವಗಂಗಾ ಮತ್ತು ಮಾಜಿ ಶಾಸಕ ಮಾಡಾಳ್‌ವಿರೂಪಾಕ್ಷಪ್ಪ ಬಣಗಳ ನಡುವೆ ನಡೆದ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.


ಮತದಾರರ ಪಟ್ಟಿಯ ಪರಿಶೀಲನೆಯ ವೇಳೆ ಎರಡು ಬಣಗಳ ನಡುವೆ ವಾಗ್ವಾದ ನಡೆದಿದೆ. ಚಿಹ್ನೆ ಹಂಚಿಕೆ ವಿಚಾರಕ್ಕೂ ಆಕ್ಷೇಪ ವ್ಯಕ್ತವಾಗಿದೆ. ಕೈಕೈ ಮಿಲಾಯಿಸುವ ಹಂತದಲ್ಲಿ ಮಧ್ಯಪ್ರವೇಶ ಮಾಡಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಕಷ್ಟಪಟ್ಟಿದ್ದಾರೆ ಎನ್ನಲಾಗಿದೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು