ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಎಲ್ಲಾ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ವಿವಿಧ ಪ್ರಮುಖ ವಿಷಯಗಳ ಕುರಿತು ಗೃಹ ಕಚೇರಿ 'ಕೃಷ್ಣಾ'ದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ ವಿಧಾನ ಪರಿಷತ್ (ಎಂಎಲ್‌ಸಿ) ಸದಸ್ಯರೊಂದಿಗೆ ಮಹತ್ವದ ಸಭೆ ನಡೆಸಿದರು.
ಸಭೆಯಲ್ಲಿ ಪ್ರಮುಖವಾಗಿ ಜಿಲ್ಲಾವಾರು ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ, ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ಹಾಗೂ ಮುಂಬರುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್, ವಿಧಾನ ಪರಿಷತ್ತಿನ ಉಪ ಸಭಾಪತಿ ಉಮಾಶ್ರೀ, ಸಚಿವ ಝಮೀರ್ ಅಹಮದ್ ಖಾನ್, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಚನ್ನರಾಜ್ ಹಟ್ಟಿಹೊಳಿ, ಕೆ. ಗೋವಿಂದರಾಜು ಸೇರಿದಂತೆ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು.




