Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು

Advertisement

ಚಂದ್ರವಳ್ಳಿ ನ್ಯೂಸ್, ಮೈಸೂರು:
ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು
, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೆಚ್ಚಿಕೊಂಡಿರುವುದನ್ನು ಸೂಚಿಸುತ್ತದೆ .ವಿಪಕ್ಷಗಳ ಯಾವುದೇ ತಂತ್ರಗಾರಿಕೆ ನಡೆಯುವುದಿಲ್ಲ. ಅವರು ಕೇವಲ ಕುತಂತ್ರಗಳನ್ನಷ್ಟೇ ಮಾಡುತ್ತಾರೆ ಎಂದರು.

ಸಿಎಂ ಬದಲಾವಣೆ-ವರಿಷ್ಠರ ತೀರ್ಮಾನಕ್ಕೆ ಬದ್ಧ:
 ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ
, ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷದ ಅವಧಿಯನ್ನು  ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ.  ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ವರಿಷ್ಠರ ಭೇಟಿಗೆ ಕರೆ ಬಂದರೆ ನವದೆಹಲಿಗೆ ತೆರಳುವುದಾಗಿ ತಿಳಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ: ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವ ಬಗ್ಗೆ ಉತ್ತರಿಸಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಧ್ಯದಲ್ಲಿಯೇ ನಡೆಸಲಾಗುವುದು ಎಂದರು. 

ಶೃಂಗೇರಿ ಚುನಾವಣಾ ಫಲಿತಾಂಶ-ಬಿಜೆಪಿಯಿಂದ ಕ್ರಿಮಿನಲ್ ಸಂಚು: ಶೃಂಗೇರಿಯ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ, ಮತಎಣಿಕೆ ವಿಚಾರದಲ್ಲಿ ಬಿಜೆಪಿ ಕ್ರಿಮಿನಲ್ ಸಂಚು ನಡೆಸಿದೆ. ರಾಜೇಗೌಡರಿಗೆ ಬಿದ್ದಿದ್ದ 255 ಅರ್ಹವಾಗಿದ್ದ ಮತಗಳನ್ನು ಅನರ್ಹ ಮಾಡಲಾಗಿದೆ. ಮತ ಎಣಿಕೆಯಾಗುವಾಗ ಬಿಜೆಪಿ ಸರ್ಕಾರವಿತ್ತು. ಬಿಜೆಪಿಯವರು ಮತ್ತು ಸಿಬ್ಬಂದಿ ಮೂಲಕ ಮತಪತ್ರಗಳನ್ನು ತಿದ್ದಲಾಗಿದ್ದು, ಇದು ಕ್ರಿಮಿನಲ್ ಸಂಚು. ಆದ್ದರಿಂದ ಶೃಂಗೇರಿ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದರು.

ರೈಲ್ವೆ ಇಲಾಖೆಯ ಹುದ್ದೆಗಳಿಗೆ ಕನ್ನಡಿಗರನ್ನು ಪರಿಗಣಿಸಲಾಗುತ್ತಿಲ್ಲ, ರಾಜ್ಯಸರ್ಕಾರ ಇದರಲ್ಲಿ ಮಧ್ಯಪ್ರವೇಶಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿ, ಈ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ನಡೆಸುತ್ತಿದ್ದು, ಈ ನಡವಳಿಕೆಯು ಕನ್ನಡಿಗರ ಪರ ಅವರ ಧೋರಣೆಯನ್ನು ಬಿಂಬಿಸುತ್ತದೆ ಎಂದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವುದಾವಣಗೆರೆ ದಕ್ಷಿಣದಲ್ಲಿ 'ಕೈ' ಪಾಳಯದ ವಿಜಯೋತ್ಸವ: ಸಿಎಂ ಭೇಟಿಯಾದ ಪೈಲ್ವಾನ್ ಮತ್ತು ತಂಡ23 ಲಕ್ಷ ಇ-ಖಾತಾ ವಿತರಣೆ, ಕಂದಾಯ ಸೇವೆ ಅತ್ಯಂತ ಸುಲಭ-ಡಿಸಿಎಂಬಾಗಲಕೋಟೆ ವಿಜಯದ ಬೆನ್ನಲ್ಲೇ ಉಮೇಶ್ ಮೇಟಿ ಭೇಟಿ: ಜನಸೇವೆಗೆ ಡಿ.ಕೆ. ಶಿವಕುಮಾರ್ ಕಿವಿಮಾತುತಾಂಡವಾಡುತ್ತಿದೆ ಇಸ್ಪೀಟ್ ದಂಧೆ, ಹೆಚ್ಚಿದ ಕಳ್ಳತನ: ಡಿವೈಎಸ್‌ಪಿಗೆ ಎಚ್ಚರಿಕೆಭೋವಿ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಾಲ ಮನ್ನಾ ಘೋಷಿಸಿದ ಸಿದ್ದರಾಮಯ್ಯಪ್ರಧಾನಿ ಮೋದಿಗೆ ಬೃಹತ್ ಅಭಿನಂದನೆ: ಬಿಜೆಪಿ ಪೂರ್ವಭಾವಿ ಸಭೆಕರ್ನಾಟಕದ ರೈಲ್ವೆ ಅಭಿವೃದ್ಧಿಗೆ ಬೂಸ್ಟ್: ಗುಂತಕಲ್-ವಾಡಿ ನಡುವೆ 3ನೇ ಮತ್ತು 4ನೇ ರೈಲು ಮಾರ್ಗಕ್ಕೆ ಕೇಂದ್ರ ಸಂಪುಟ ಅನುಮೋದನೆಆತ್ಮನಿರ್ಭರ ಭಾರತಕ್ಕೆ ಒತ್ತು: ಹೆಚ್.ಡಿ. ಕುಮಾರಸ್ವಾಮಿ ಅವರಿಂದ ಭಾರಿ ಕೈಗಾರಿಕೆ ಇಲಾಖೆಯ ಪ್ರಗತಿ ಪರಿಶೀಲನೆಅಭಿಮಾನಿಗಳು ಹಾಗೂ ಕಾರ್ಯಕರ್ತರ ಹಾರೈಕೆ ಸ್ವೀಕರಿಸಿದ ಡಾ. ಪ್ರಭಾ ಮಲ್ಲಿಕಾರ್ಜುನ್