LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಲೆ ಏರಿಕೆ, ನೀಟ್ ಅಕ್ರಮ ಖಂಡಿಸಿ ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಪ್ರತಿಭಟನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಲೆ ಏರಿಕೆ ಹಾಗೂ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ತಾಲೂಕು ಕಚೇರಿ ವೃತ್ತದಲ್ಲಿ  ನಡೆದ ಪ್ರತಿಭಟನೆಯ ನೇತೃತ್ವವನ್ನು ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ  ವಹಿಸಿದ್ದರು.

ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಂದ ದೇಶದಾದ್ಯಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಕೇಂದ್ರ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ದೂರಿದರು.

ಪ್ರತಿಭಟನೆಯ ವೇಳೆ ಕೆಲಕಾಲ ರಸ್ತೆ ತಡೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಜಿ. ಲಕ್ಷ್ಮೀಪತಿ,ತಾಲೂಕು ಉಸ್ತುವಾರಿ ಬಿ. ಆರ್. ನಾಯ್ಡು,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ. ಆರ್. ಗೌಡ, ತಾಲೂಕು ಅಧ್ಯಕ್ಷ ಬೈರೇಗೌಡ,ಕೆ. ಪಿ. ಸಿ. ಸಿ. ಸದಸ್ಯ ಹೇಮಂತರಾಜ್,ಕಸಬಾ ಬ್ಲಾಕ್ ವೆಂಕಟೇಶ್ ನಾಗರಾಧ್ಯಕ್ಷ ಕೆ. ಪಿ. ಜಗನ್ನಾಥ್, ಮಹಿಳಾ ಕಾಂಗ್ರೆಸ್ ನ ರೇವತಿ ಅನಂತರಾಮ್, ನಗರಸಭಾ ಸದಸ್ಯರಾದ ನಾಗವೇಣಿ, ವಾಣಿ, ಸೇರಿದಂತೆ ನೂರಾರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಪೊಲೀಸರು ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡು ಪರಿಸ್ಥಿತಿಯನ್ನು ನಿಯಂತ್ರಿಸಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಆಗಸ್ಟ್ 16, 17ರ ಎರಡು ದಿನಗಳ ರಾಜ್ಯ ಪ್ರವಾಸಮುಂಗಾರು ಅಧಿವೇಶನ ಅನಿರ್ದಿಷ್ಟಾವಧಿ ಮುಂದೂಡಿಕೆ: ಲೋಕಸಭೆಯಲ್ಲಿ ಶೇ 19, ರಾಜ್ಯಸಭೆಯಲ್ಲಿ ಶೇ 39 ಉತ್ಪಾದಕತೆ ದಾಖಲುಕಾವೇರಿ ನೀರು ಬಿಡುಗಡೆ ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ: ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ, ಜನಜೀವನ ಸಹಜಶಾಸನಸಭೆ ಕಾಂಗ್ರೆಸ್‌ಅಭ್ಯರ್ಥಿಗಳ ಸ್ಪರ್ಧೆ: ಜಿ.ಎಸ್. ಪಾಟೀಲ್, ಸಲೀಂ ಅಹ್ಮದ್ ನಾಮಪತ್ರ ಸಲ್ಲಿಕೆಗುಟ್ಕಾ, ಪಾನ್ ಮಸಾಲೆ ನಿಷೇಧ: ಅಡಕೆ ಬೆಳೆಗಾರರಿಗೆ, ಸಹಕಾರ ಸಂಘಗಳಿಗೆ ತೀವ್ರ ಆಘಾತಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಅಧಿವೇಶನ ಆರಂಭ: ಸಿದ್ದರಾಮಯ್ಯ ಸೇರಿ ಹಲವು ಶಾಸಕರು ಗೈರು, ಅಸಮಾಧಾನದ ಹೊಗೆ?ತಮಿಳುನಾಡಿನ ದೋಷಪೂರಿತ ಲೆಕ್ಕಾಚಾರಕ್ಕೆ ಕರ್ನಾಟಕ ಆಕ್ಷೇಪ, ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಕೆಬಿಸಿಯೂಟ ಯೋಜನೆಗೆ 'ಚೆನ್ನಮ್ಮ' ಹೆಸರಿಡಿ: ಅಗಲಿದ ಗಣ್ಯರಿಗೆ ಭಾವಪೂರ್ಣ ಸಂತಾಪಖರ್ಗೆ ರ‍್ಯಾಲಿ ನಡೆದ ಮೈದಾನ 'ಶುದ್ಧೀಕರಣ': ರಾಜಕೀಯ ಕಾಳಗ ತೀವ್ರಯುವತಿ ಸಿರಿಲಕ್ಷ್ಮಿ ಕಣ್ಮರೆ: ಪತ್ತಗೆ ಮನವಿ