ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಕಾಮಗಾರಿಗಳಲ್ಲಿ ನೂರಾರು ಕೋಟಿ ಹಗರಣ ನಡೆದಿದ್ದು ಒಂದು ವಾರದಿಂದಲು ಲೋಕಾಯುಕ್ತ ಪೊಲೀಸರು ಕಡತಗಳ ಪರಿಶೀಲನೆ ಇಂತಹ ಭ್ರಷ್ಟಾಚಾರ ಹಾಗೂ ಅಕ್ರಮಗಳ ಬಗ್ಗೆ ಸಮಗ್ರ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕಿದೆ ಎಂದು ಒತ್ತಾಯಿಸಿ ತಾಲೂಕು ಕಾಂಗ್ರೆಸ್ ವತಿಯಿಂದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಕಾರ್ಯಾಲಯದ ಮುಂಭಾಗ ಪ್ರತಿಭಟನೆ ಧರಣಿ ಹಮ್ಮಿಕೊಳ್ಳಲಾಗಿತ್ತು .
ಪ್ರತಿಭಟನೆಯಲ್ಲಿ ಮಾಜಿ ಶಾಸಕ ವೆಂಕಟರಮಣಯ್ಯ ಮಾತನಾಡಿ, ತಾಲೂಕಿನ ಇತಿಹಾಸದಲ್ಲಿಯೇ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ನಕಲಿ ಬಿಲ್‌ಗಳ ಸೃಷ್ಟಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದು ಎಲ್ಲಿಯೂ ನಡೆದಿಲ್ಲ.
ನವ ದೊಡ್ಡಬಳ್ಳಾಪುರ ಮಾಡುತ್ತೇವೆ ಎಂದು ಬಂದವರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಬೋಗಸ್ ಬಿಲ್‌ಗಳ ಸೃಷ್ಟಿಯಲ್ಲಿ ತಲ್ಲೀನರಾಗಿದ್ದಾರೆ. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ ಪಿ ಜಿ ಗಳು, ಕಲ್ಯಾಣ ಮಂಟಪಗಳು, ಖಾಸಗಿ ಕಂಪನಿಗಳು ಸೇರಿದಂತೆ ಖಾಸಗಿ ಮಳಿಗೆಗಳ ಮಾಲೀಕರ ಬಳಿ ಸರಿಯಾಗಿ ತೆರಿಗೆ ವಸೂಲಾತಿ ಮಾಡಿಲ್ಲ. ಕೋಟ್ಯಂತರ ರೂಪಾಯಿ ಅಕ್ರಮ ಅವ್ಯವಹಾರಗಳು ಕೂಲಂಕೂಷವಾಗಿ ತನಿಖೆ ಆಗಬೇಕು. ಇಲ್ಲಿನ ಭ್ರಷ್ಟ ಅಧಿಕಾರಿಗಳ ವಿರುದ್ದ ಸರ್ಕಾರ ಕ್ರಮ ಜರಗಿಸಬೇಕು ಹತ್ತಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಭ್ರಷ್ಟಚಾರದ ಕುರಿತು ತನಿಖೆಗೆ ಎಸ್ಐಟಿ ರಚಿಸಬೇಕು ಭ್ರಷ್ಟಚಾರದಲ್ಲಿ ತೂಡಗಿರುವ ಅಧಿಕಾರಿಗಳು ಮತ್ತು ರಾಜಕಾರಣಿಗಳು ಜೈಲಿಗೆ ಹೋಗಬೇಕು. ಮುಂದಿನ ದಿನಗಳಲ್ಲಿ ಪಟ್ಟಣ ಪಂಚಾಯತಿ ಕಚೇರಿ ಮುಂದೆ ಸತ್ಯಾಗ್ರಹ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಸಬಾ ಬ್ಲಾಕ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ಮುಖಂಡರಾದ ಕೆ.ಎಂ.ಕೃಷ್ಣಮೂರ್ತಿ, ಮುನಿರಾಜು, ಅಂಜನಮೂರ್ತಿ, ರಾಜಣ್ಣ, ಕೆ ಎಂ ಕೃಷ್ಣಮೂರ್ತಿ, ಶಾಮಲಮ್ಮ, ಗುಡದ್ದಹಳ್ಳಿ ಮಾಜಿ ಗ್ರಾ ಪ ಸದಸ್ಯ ಗಣೇಶ. ಸಂತೋಷ ಕುಮಾರ್ ಹಾಗು ಕಾಂಗ್ರೇಸ್ ಕಾರ್ಯಕರ್ತರು ಸಾರ್ವಜನಿಕರು. ಹಾಜರಿದ್ದರು.
ಭ್ರಷ್ಟ ಅಧಿಕಾರಿಗಳು ಮತ್ತು ರಾಜಕಾರಣಿಗಳು ಪಟ್ಟಣ ಪಂಚಾಯಿತಿಯಲ್ಲಿ ಮೀತಿ ಮೀರಿದ ಅಕ್ರಮ ಅವ್ಯವಹಾರಗಳಲ್ಲಿ ತೊಡಗಿದ್ದಾರೆ. ಸಿ.ಎ ನಿವೇಶನಗಳನ್ನು ಅಕ್ರಮವಾಗಿ ತಮ್ಮ ಸ್ವಹಿತಾಸಕ್ತಿ ಹಂಚಿಕೆ ಮಾಡಿಕೊಳ್ಳಲು ಹೊರಟಿದ್ದಾರೆ.ಲೋಕಾಯುಕ್ತ ಅಧಿಕಾರಿಗಳು 10 ದಿನಕ್ಕೂ ಹೆಚ್ಚು ದಿನ ಕಡತಗಳನ್ನು ಪರಿಶೀಲನೆ ಮಾಡಿದ್ದಾರೆ. ಇಲ್ಲಿನ ಬೋಗಸ್ ಬಿಲ್ ನೋಡಿ ಲೋಕಾಯುಕ್ತ ಪೊಲೀಸರು ಅಚ್ಚರಿಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಭ್ರಷ್ಟಾಚಾರ ಎಸಗಿರುವ ಮತ್ತು ಇದಕ್ಕೆ ಪ್ರೋತ್ಸಾಹ ನೀಡಿರುವ ಎಲ್ಲರಿಗೂ ಶಿಕ್ಷೆ ಆಗಬೇಕು'.
ಜಿ.ಲಕ್ಷ್ಮೀಪತಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ.



