Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮನರೇಗಾ ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಾತ್ಮ ಗಾಂಧೀಜಿ ಹೆಸರನ್ನು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ನಾಮಕರಣ ಮಾಡುವ ನಿರ್ಧಾರವನ್ನು ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.


ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮನರೇಗಾ ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಹೆಸರು ಇಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಗ್ರಾಮ ಪಂಚಾಯಿತಿಗಳನ್ನು ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿದ್ದು, ಪಂಚಾಯಿತಿಗಳ ಅಧಿಕಾರ ಕಸಿದುಕೊಂಡು, ಉದ್ಯೋಗದ ಹಕ್ಕನ್ನು ಬಡವರಿಂದ ಕಿತ್ತುಕೊಳ್ಳುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆರೋಪಿಸಿದರು. ಮನರೇಗಾ ಕಾಯ್ದೆ ಸಮರ್ಪಕವಾಗಿ ಜಾರಿಗೆ ತರಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು.

ಈ ವಿಚಾರವಾಗಿ ರಾಜಭವನಕ್ಕೆ ತೆರಳುತ್ತೇವೆ. ಅಗತ್ಯವಿದ್ದರೆ ಬಂಧನಕ್ಕೂ ಸಿದ್ಧವಾಗಿದ್ದೇವೆ ಎಂದು ಡಿಸಿಎಂ ಹೇಳಿದರು.
ರಾಜ್ಯಪಾಲರು ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಅವರು ಆಗ್ರಹಿಸಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕೇಂದ್ರ ಸರ್ಕಾರ ದುರುದ್ದೇಶದಿಂದ ವಿಬಿ ಜಿ ರಾಮ್ ಜಿ ಎಂಬ ಯೋಜನೆ ಜಾರಿ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.


ಈ ಯೋಜನೆಯಲ್ಲಿ ರಾಮ ಎಂಬುದು ಕೇವಲ ಹೆಸರಿನಷ್ಟೇ, ಬಡವರ ಹಿತದ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಹೇಳಿದರು. ದಶರಥ ರಾಮ, ಕೌಸಲ್ಯ ರಾಮ ಅಥವಾ ಸೀತಾರಾಮ ಯಾರೂ ಈ ಕಾಯ್ದೆಯಲ್ಲಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ದೂರು ಸಲ್ಲಿಕೆ:
ಬಡವರು, ದಲಿತರು ಮತ್ತು ರೈತರ ಪರ ನಿಜವಾಗಿ ಹೋರಾಟ ಮಾಡುವ ಪಕ್ಷ ಕಾಂಗ್ರೆಸ್ ಮಾತ್ರ. ಬಡವರ ಕಾರ್ಯಕ್ರಮಗಳನ್ನು ಬಿಜೆಪಿಯವರು ರದ್ದು ಮಾಡಿದ್ದು, ಇದಕ್ಕೆ ಆರ್‌ಎಸ್‌ಎಸ್ ಮಾರ್ಗದರ್ಶನ ನೀಡುತ್ತಿದೆ ಎಂದು ಸಿಎಂ ಗಂಭೀರ ಆರೋಪ ಮಾಡಿದರು.


ಮನರೇಗಾ ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಉಸ್ತುವಾರಿ ರಣದೀಪ್ ಸುರ್ಜೇವಾಲ ನೇತೃತ್ವದಲ್ಲಿ ಲೋಕಭವನದಲ್ಲಿ ರಾಜ್ಯಪಾಲರಿಗೆ ದೂರು ಸಲ್ಲಿಸಿ ಒತ್ತಾಯಿಸಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ