LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

2028ಕ್ಕೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ- ಡಿಸಿಎಂ ಡಿ.ಕೆ ಶಿವಕುಮಾರ್

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
'2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, 2028ಕ್ಕೆ ನಮ್ಮ ಸರ್ಕಾರ ಬರುವ ಕನಸು ಕಾಣಬೇಡಿ ಕೆಲಸ ಮಾಡಿ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತೀನ್ ನಬಿನ್ ಅವರು ರಾಜ್ಯ ನಾಯಕರಿಗೆ ಸೂಚನೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಅಮಿತ್ ಶಾ ಅವರು ಬಿಜೆಪಿಗೆ 122 ಸೀಟು ಬರುತ್ತದೆ, ಎಲ್ಲರೂ ಸೂಟುಬೂಟು ಸಿದ್ಧಮಾಡಿಕೊಳ್ಳಿ ಎಂದಿದ್ದರು.

ನಾನು ನಮಗೆ 136 ಸೀಟು ಬರಲಿದೆ ಎಂದು ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ ಬರೆದುಕೊಳ್ಳಿ, 2028ಕ್ಕೆ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ' ಎಂದು ಬಲವಾಗಿ ಭವಿಷ್ಯ ನುಡಿದರು.

ನೀವು ದೆಹಲಿ ಪ್ರವಾಸ ಮಾಡುತ್ತೀರಾ ಎಂಬ ಪ್ರಶ್ನೆಗೆ, 'ನಮ್ಮನ್ನು ಕರೆದರೆ ಹೋಗುತ್ತೇವೆ. ಸುರ್ಜೆವಾಲ ಅವರು ನಿಮಗೆ ಏನು ಹೇಳಿದ್ದಾರೋ ಗೊತ್ತಿಲ್ಲ. ಅವರು ದೆಹಲಿಗೆ ಬನ್ನಿ ಎಂದರೆ ನಾನು ಹೋಗುತ್ತೇನೆ. ಇಲ್ಲವಾದರೆ ಇಲ್ಲೇ ಉಳಿಯುತ್ತೇನೆ. ಪಕ್ಷ ಕರೆದಾಗ ನಾವು ಹೋಗಲೇಬೇಕಾಗುತ್ತದೆ' ಎಂದು ಉತ್ತರಿಸಿದರು.

ಫಲಾನುಭವಿಗಳಿಗೆ ಗ್ಯಾರಂಟಿ ತಲುಪುವಂತೆ ಪರಿಶೀಲನೆ: ಗ್ಯಾರಂಟಿ ಪರಿಷ್ಕರಣೆ ಮಾಡಲಾಗುವುದೇ ಎಂದು ಕೇಳಿದಾಗ, 'ಕೆಲವು ಗ್ಯಾರಂಟಿ ಫಲಾನುಭವಿಗಳು ಮೃತಪಟ್ಟಿದ್ದು, ಸುಮಾರು 100 ಕೋಟಿಯಷ್ಟು ಹಣ ಬೇರೆಯವರಿಗೆ ಹೋಗಿ ದುರ್ಬಳಕೆಯಾಗಿದೆ. ಇನ್ನು ಬೇರೆಯವರ ದೂರವಾಣಿ ಸಂಖ್ಯೆ ಕೊಟ್ಟಿರುವುದರಿಂದ ಸರಿಯಾದ ಫಲಾನುಭವಿಗಳಿಗೆ ಯೋಜನೆ ತಲುಪುತ್ತಿದಯೇ, ಇಲ್ಲವೇ ಎಂದು ತಿಳಿಯಬೇಕಿದೆ. ಹೀಗಾಗಿ ಫಲಾನುಭವಿಗಳ ದಾಖಲೆ ಸಂಗ್ರಹಿಸುವ ಬಗ್ಗೆ ಚರ್ಚೆ ಮಾಡುವ ಬಗ್ಗೆ ಸಲಹೆ ಬಂದಿದೆ. ಪ್ರತಿ ತಾಲೂಕಿನಲ್ಲಿ ಇದನ್ನು ಪರಿಶೀಲನೆ ಮಾಡುತ್ತಿದ್ದೇವೆ' ಎಂದು ತಿಳಿಸಿದರು.

2 ತಿಂಗಳಿನಿಂದ ಅನ್ನಭಾಗ್ಯ ಅಕ್ಕಿ ಸರಿಯಾಗಿ ತಲುಪುತ್ತಿಲ್ಲ ಎಂದು ಪ್ರಶ್ನಿಸಿದಾಗ, 'ಕೇಂದ್ರ ಸರ್ಕಾರ ಅಕ್ಕಿ ಬಿಡುಗಡೆ ಮಾಡುತ್ತಿಲ್ಲ. ಕೇವಲ ಕರ್ನಾಟಕ ಮಾತ್ರವಲ್ಲ, ನಮ್ಮ ಸರ್ಕಾರ ಇರುವ ರಾಜ್ಯಗಳಲ್ಲಿ ಈ ರೀತಿ ಮಾಡುತ್ತಿದ್ದಾರೆ' ಎಂದು ಕಿಡಿಕಾರಿದರು.

ಸಚಿವ ಹೆಚ್​.ಸಿ. ಮಹದೇವಪ್ಪ ಅವರು ಮಾಧ್ಯಮದವರು ಸಿಎಂ ಬದಲಾವಣೆ ಕುರಿತು ಪ್ರಶ್ನಿಸಿದ್ದಾಗ 'ಸದ್ಯಕ್ಕೆ ಸಿಎಂ ಚೇರ್​ನಲ್ಲಿ ಸಿದ್ದರಾಮಯ್ಯ ಕುಳಿತಿದ್ದಾರೆ. ಸಿದ್ದರಾಮಯ್ಯ ಎದ್ದಿಲ್ಲ, ಕುಳಿತಿದ್ದಾರೆ, ಕುರ್ಚಿ ಖಾಲಿ ಇಲ್ಲಾ' ಎಂದು ಉತ್ತರಿಸಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿರಿಯೂರಿನ ನಿಸ್ವಾರ್ಥ ಸೇವಕ – ಕೆಪಿಸಿಸಿ ಸದಸ್ಯ ಅಮೃತೇಶ್ವರಸ್ವಾಮಿ ಅವರ ದೂರದೃಷ್ಟಿಗೆ ಒಲಿದ ಜಲಭಾಗ್ಯಹಿರಿಯೂರು ಬರದ ನಾಡಿಗೆ ಜಲಸಂಜೀವಿನಿ: ಸಿಎಂ ಡಿ.ಕೆ ಶಿವಕುಮಾರ್ ಅವರ ಭರವಸೆಗೆ ಒಲಿದ 244 ಕೋಟಿಯ ಬೃಹತ್ ಜಲ ಯೋಜನೆ!ಕೋಟಿ ಕೋಟಿ ಅನುದಾನದ ಶಂಕುಸ್ಥಾಪನೆಗೆ 'ರಾಜಕಾಲುವೆ' ಕಂಟಕ: ಶೀಲೆಯಾಗದ ಚಿತ್ರದುರ್ಗದ ಹೈಟೆಕ್ ಬಸ್ ನಿಲ್ದಾಣದ ಕನಸು!ವರುಣನ ಕೃಪೆಗಾಗಿ ಇಪ್ಪೆಕಣಿವೆ ಭೂತರಾಯ ಸ್ವಾಮಿಗೆ ಕಾತ್ರಿಕೇನಹಳ್ಳಿ ರೈತರಿಂದ ಪೂಜೆಜಿಲ್ಲಾವಾರು ಜಿಡಿಪಿ ಪ್ರಗತಿಗೆ ವೇಗ: ನೀತಿ ಆಯೋಗದ ಸದಸ್ಯರೊಂದಿಗೆ ಸಿಎಂ ಸುದೀರ್ಘ ಚರ್ಚೆ– ಸಚಿವ ಪ್ರಿಯಾಂಕ್ ಖರ್ಗೆರಾಜ್ಯದ ಜಿಲ್ಲಾ ಜಿಡಿಪಿ ವೃದ್ಧಿಗೆ 'ಲೀಪ್' ಯೋಜನೆ: ಸಿಎಂ ಡಿ ಕೆ ಶಿವಕುಮಾರ್ ಜತೆ ನೀತಿ ಆಯೋಗದ ಸದಸ್ಯ ಕೆ.ವಿ. ರಾಜು ಚರ್ಚೆಕಾಂಗ್ರೆಸ್‌ನದ್ದು ಕೇವಲ 'ಕ್ಯಾಮೆರಾ ರಾಜಕಾರಣ', ಪ್ರಚಾರಕ್ಕಾಗಿ ಪ್ರತಿಭಟನೆ: ವಿಜಯೇಂದ್ರ ವಾಗ್ದಾಳಿಗೃಹ ಕಚೇರಿ ಕೃಷ್ಣಾದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಡಿ.ಕೆ. ಶಿವಕುಮಾರ್ಬೆಂಗ‌ಳೂರು ಟೆಕ್ ಸಮ್ಮಿಟ್ 2026: 'ಎಐ & ಬಿಯಾಂಡ್' ಥೀಮ್ ಅನಾವರಣಗೊಳಿಸಿದ ಡಿ.ಕೆ. ಶಿವಕುಮಾರ್ಕರಾರುಗಳಿಂದ ಶೇ. 75ರಷ್ಟು ಹೂಡಿಕೆ ಸಾಕಾರಗೊಳಿಸುವುದು ನಮ್ಮ ಗುರಿ – ಸಚಿವ ಎಂ.ಬಿ. ಪಾಟೀಲ್