Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೊಸರಿನಲ್ಲಿ ಕಲ್ಲು ಹುಡುಕಲು ಹೊರಟ ಕಾಂಗ್ರೆಸ್ಸಿಗರು-ವಿಜಯೇಂದ್ರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೆಸರನ್ನು ಸಂಬಂಧಪಡದ   ಪ್ರಕರಣವೊದರಲ್ಲಿ ಎಳೆದು ತರುವ ಮೂಲಕ ಕಾಂಗ್ರೆಸ್ಸಿಗರು ವಿಘ್ನ ಸಂತೋಷ ಪಡಲು ಹೊರಟಿದ್ದಾರೆ. ಸಚಿವ ದಿನೇಶ್ ಗುಂಡೂರಾವ್ ಅವರು ಅಸಂಬದ್ಧವಾಗಿ ಜೋಶಿಯವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ ಕಾರಿದ್ದಾರೆ.

ಆರೋಪಿತ ಗೋಪಾಲ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದಲೂ ಸಂಪರ್ಕ ಕಡಿದುಕೊಂಡು ಯಾರೊಂದಿಗೂ ತಮ್ಮ ಸಂಬಂಧ ಬೆರೆಸದಂತೆ ಪ್ರಹ್ಲಾದ್ ಜೋಶಿ ಅವರು ನ್ಯಾಯಾಲಯದಲ್ಲಿ 2013ರಲ್ಲೇ ತಡೆಯಾಜ್ಞೆ ತಂದಿದ್ದಾರೆ, ಅಲ್ಲದೇ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಅದರ ವಿವರವಿರುವುದಾಗಿಯೂ ಸ್ಪಷ್ಟಪಡಿಸಿದ್ದಾರೆ.

ಇಷ್ಟಾಗಿಯೂ ಮುಡಾ ಹಾಗೂ ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಂತೆ ಹತ್ತು- ಹಲವು ಹಗರಣಗಳಲ್ಲಿ ಸಿಲುಕಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಹಾಗೂ ಇತರ ಮಂತ್ರಿಗಳು ನೈತಿಕತೆ ಗಾಳಿಗೆ ತೂರಿ ತಮ್ಮ ಸ್ಥಾನಗಳಿಗೆ ಭಂಡತನದಿಂದ ಅಂಟಿ ಕುಳಿತಿದ್ದಾರೆ.

ಹತಾಶೆಯ ಅಂಚಿಗೆ ತಲುಪಿರುವ ಕಾಂಗ್ರೆಸ್ಸಿಗರು ಜೋಷಿಯವರ ವಿಚಾರದಲ್ಲಿ ಮೊಸರಿನಲ್ಲಿ ಕಲ್ಲು ಹುಡುಕಲು ಹೊರಟಿದ್ದಾರೆ'.

ಪ್ರಹ್ಲಾದ್ ಜೋಶಿ ಅವರು ತಮ್ಮ ಇಡೀ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಮಸಿ ಅಂಟಿಸಿಕೊಂಡವರಲ್ಲ ಅವರ ಸಾಮರ್ಥ್ಯ ಹಾಗೂ ಅನುಭವವನ್ನು ಪರಿಗಣಿಸಿ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಂಪುಟದಲ್ಲಿ ಮಹತ್ವದ ಸ್ಥಾನ ಕಲ್ಪಿಸಿಕೊಟ್ಟಿದ್ದಾರೆ. ಇದನ್ನು ಸಹಿಸದ ಕೆಲವು ರಾಜಕೀಯ ಪಟ್ಟಭದ್ರಾ ಹಿತಾಸಕ್ತಿಗಳು ಜೋಶಿ ಅವರಿಗೆ ಕಳಂಕ ಅಂಟಿಸುವ ವಿಫಲ ಯತ್ನ ನಡೆಸಿದ್ದಾರೆ.

ಆಧಾರ ರಹಿತ ಆರೋಪಗಳಿಂದ ಭಾರತೀಯ ಜನತಾ ಪಾರ್ಟಿಯ ವರ್ಚಸ್ಸಿಗೆ ಧಕ್ಕೆ ತರಬಹುದು ಎಂದು ಕಾಂಗ್ರೆಸ್ಸಿಗರು ಅಂದುಕೊಂಡಿದ್ದರೆ ಅದು ಕೇವಲ ಅವರ ಭ್ರಮೆ ಅಷ್ಟೇ ಎಂದು ಟ್ವೀಟ್ ಮಾಡಿ ಅವರು ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ