Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಗಳಲ್ಲ, ದಲಿತ ವಿರೋಧಿ ಕೂಡಾ

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಗಳಲ್ಲ
, ಜೊತೆಗೆ ದಲಿತ ವಿರೋಧಿ ಕೂಡಾ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ವಿಧಾನಸೌಧದ ಡಾ.ಬಿ.ಆರ್‌.ಅಂಬೇಡ್ಕರ್‌ಪ್ರತಿಮೆ ಬಳಿ ಭೀಮ ಹೆಜ್ಜೆ 100ರ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಡಾ. ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು 100 ವರ್ಷಗಳಾದ ಹಿನ್ನೆಲೆಯಲ್ಲಿ, ಅಂಬೇಡ್ಕರ್ ಅವರ ಜನ್ಮದಿನವೂ ಬರುತ್ತಿರುವ ಸಂದರ್ಭದಲ್ಲಿ 100 ವರ್ಷದ ನೆನಪನ್ನು ಭೀಮ ಹೆಜ್ಜೆ ಹೆಸರಿನಲ್ಲಿ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಭೀಮ ಹೆಜ್ಜೆ ಸಂದರ್ಭದಲ್ಲಿ ಡಾ. ಅಂಬೇಡ್ಕರ್ ಅವರು ಯಾವ ಕಾರಣಕ್ಕಾಗಿ ತಮ್ಮ ಜೀವನ ಮೀಸಲಿಟ್ಟಿದ್ದರೋ ಅದನ್ನು ಜನರಿಗೆ ನೆನಪಿಸಲಾಗುವುದು. ಕಾಂಗ್ರೆಸ್ ಪಕ್ಷವು ಅವರಿಗೆ ಅನ್ಯಾಯ ಮಾಡಿದ್ದರು. ಅವರು ಸಂವಿಧಾನ ರಚನಾ ಸಭೆಯಲ್ಲಿ ಇರಬಾರದು ಎಂಬ ಕಾರಣಕ್ಕೆ ಹಿಂದೂ ಬಾಹುಳ್ಯದ ಕ್ಷೇತ್ರಗಳನ್ನು ಪಾಕಿಸ್ತಾನಕ್ಕೆ ಬಿಟ್ಟು ಕೊಟ್ಟ ಸಂಗತಿಯನ್ನು, ಎರಡೆರಡು ಬಾರಿ ಅವರನ್ನು ಸೋಲಿಸಿದ್ದು, ಮಧ್ಯಂತರ ಸರ್ಕಾರ ಬಾರದಂತೆ ತಡೆದುದನ್ನು ತಿಳಿಸುತ್ತೇವೆ ಎಂದು ಜೋಶಿ ಹೇಳಿದರು.

ದಲಿತರ ಮೀಸಲಾತಿಗೆ ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರು ವಿರೋಧಿಸಿದ್ದನ್ನು ಜನರ ಮುಂದೆ ತೆರೆದಿಡುತ್ತೇವೆ. ಈಗಲೂ ಖರ್ಗೆಯವರಿಗೆ ಅವಮಾನ ಮಾಡಿದ್ದನ್ನೂ ತಿಳಿಸುತ್ತೇವೆ. ಬೆಳಗಾವಿ ಅಧಿವೇಶನದಲ್ಲಿ ನಮ್ಮ ಶಾಸಕಿ ಶಶಿಕಲಾ ಜೊಲ್ಲೆ ಅವರು ನಿಪ್ಪಾಣಿಗೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಬಂದು 100 ವರ್ಷವಾಗುತ್ತಿದೆ ಎಂದು ಸರ್ಕಾರದ ಗಮನ ಸೆಳೆದಿದ್ದಾರೆ. ಬೆಳಗಾವಿಗೆ ಮಹಾತ್ಮ ಗಾಂಧಿಯವರು ಬಂದ ಕಾರ್ಯಕ್ರಮ ಅವರು ಮಾಡಿದ್ದಾರೆ. ಅದಕ್ಕೆ ನಮ್ಮ ಆಕ್ಷೇಪ ಇಲ್ಲ ಎಂದು ಹೇಳಿದರು.

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಭೇಟಿಯ 100 ವರ್ಷ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದ ಅವರು, ಸರ್ಕಾರ ಈ ಕಾರ್ಯಕ್ರಮ ಮಾಡಿದ್ದರೆ ನಾವು ಮಾಡುತ್ತಿರಲಿಲ್ಲ. ಇದು ನಮ್ಮ ಬದ್ಧತೆ ಎಂದು ಕೇಂದ್ರ ಸಚಿವರು ತಿಳಿಸಿದರು.



ಇದೇ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಮಾತನಾಡಿ, ಕಾಂಗ್ರೆಸ್‌ನವರು ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ. ದಲಿತರ ಬಗ್ಗೆ ಮಾತನಾಡುವಾಗಲೇ ಅವರು ತುಳಿತಕ್ಕೆ ಒಳಗಾದವರು ಎಂದು ಹೇಳುತ್ತೇವೆ. ಆದರೆ, ಈ ರೀತಿ ತುಳಿದವರು ಯಾರು ಎಂದು ಪ್ರಶ್ನೆ ಮಾಡಿದರೆ, ಕಾಂಗ್ರೆಸ್‌ನವರೇ ಎಂಬ ಉತ್ತರ ಸಿಗುತ್ತದೆ. ಇಷ್ಟು ವರ್ಷಶೋಷಿತರನ್ನು ಕಾಂಗ್ರೆಸ್‌ನವರೇ ತುಳಿದಿದ್ದಾರೆ ಎಂದು ಅಶೋಕ್ ಆರೋಪಿಸಿದರು.

ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಕಾಂಗ್ರೆಸ್‌ನ ಕಳ್ಳರು ದಲಿತರನ್ನು ಉದ್ಧಾರ ಮಾಡಲಿಲ್ಲ. ಬಾಬಾ ಸಾಹೇಬ್‌ಅಂಬೇಡ್ಕರ್‌ರ ಹೆಸರನ್ನು ಕಾಂಗ್ರೆಸ್‌ನವರು ದುರುಪಯೋಗ ಮಾಡಿಕೊಂಡರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಅಂಬೇಡ್ಕರರ ಜೀವನದ ಪ್ರಮುಖ ಸ್ಥಳಗಳನ್ನು ಪಂಚತೀರ್ಥವೆಂದು ಯಾತ್ರಾ ಸ್ಥಳವಾಗಿಸಿದರು. ಕಾಂಗ್ರೆಸ್‌ನಾಯಕರು ತಾವು ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರಿಗೆ ಮೋಸ ಮಾಡುತ್ತಾರೆ ಎಂದು ಅಶೋಕ್ ಹರಿಹಾಯ್ದರು.

ವಕ್ಫ್‌ಹೆಸರಿನಲ್ಲಿ ದಲಿತರ ಆಸ್ತಿ ಲೂಟಿ ಮಾಡಲಾಗಿದೆ. ವಕ್ಫ್‌ ನಿಂದಾದ ಭೂ ಕಬಳಿಕೆ ಬಗ್ಗೆ ನಾನು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾಗ, ದೂರು ಹೇಳಿಕೊಳ್ಳಲು ಬರುತ್ತಿದ್ದವರಲ್ಲಿ ದಲಿತರೇ ಹೆಚ್ಚಿನ ಸಂಖ್ಯೆಯಲ್ಲಿರುತ್ತಿದ್ದರು. ಸಂಸತ್ತಿನಲ್ಲಿ ವಕ್ಫ್‌ತಿದ್ದುಪಡಿ ಮಸೂದೆಗೆ ವಿರುದ್ಧವಾಗಿ ಕಾಂಗ್ರೆಸ್‌ನಿಂತುಕೊಳ್ಳುತ್ತದೇ ಎಂಬುದರಲ್ಲೇ ಅವರ ದಲಿತರ ಕಾಳಜಿ ಅರ್ಥವಾಗುತ್ತದೆ. ಸಂವಿಧಾನ ಉಳಿಯಬೇಕು, ಕಾಂಗ್ರೆಸ್‌ನ ಪೊಳ್ಳು ಭರವಸೆಗಳು ಹೋಗಬೇಕು ಎಂದರು.

 ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತನೆ:
ಜಾತಿ ಗಣತಿ ಸಂದರ್ಭದಲ್ಲಿ ಸಮೀಕ್ಷೆ ಮಾಡಿದವರು ಎಲ್ಲರ ಮನೆಗೆ ಹೋಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿ ಮಾಡಿಸಿರುವ ವರದಿ. ಇದರಲ್ಲಿ ರಾಜಕೀಯ ಇರುವುದರಿಂದ ಇದನ್ನು ಯಾರೂ ಒಪ್ಪಲ್ಲ. ನಾನು ಕೂಡ ಜಾತಿ ಗಣತಿ ಆಗಬೇಕು ಎನ್ನುತ್ತೇನೆ. ಆದರೆ ಯಾರಿಗೋ ಅನುಕೂಲ ಮಾಡಿಕೊಡಲು ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತಲು ಈ ವರದಿ ರೂಪಿಸಲಾಗಿದೆ. ಕಾಂಗ್ರೆಸ್‌ಗೆ ಇದೇ ಬೇಕಾಗಿದೆ ಎಂದು ಅಶೋಕ್ ದೂರಿದರು.


ಮಾಜಿ ಡಿಸಿಎಂ, ಸಂಸದ ಗೋವಿಂದ ಕಾರಜೋಳ ಮಾತನಾಡಿ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಮುಂದುವರಿದಿದೆ. ರಾಜ್ಯದ ಪ್ರಮುಖ ದಲಿತ ನಾಯಕ ಮತ್ತು ಕಳೆದ 50 ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಸಿಎಂ ಮಾಡುವ ಅವಕಾಶಗಳಿದ್ದರೂ ಕಾಂಗ್ರೆಸ್ ಮಾಡಲಿಲ್ಲ, ನಿಜ ಹೇಳಬೇಕೆಂದರೆ ಡಾ ಬಿ ಅರ್ ಅಂಬೇಡ್ಕರ್ ಅವರಿಗೆ ಬಗೆದಂತೆ ಖರ್ಗೆ ಅವರಿಗೂ ದ್ರೋಹ ಬಗೆಯಲಾಗಿದೆ. ಖರ್ಗೆ ಎಐಸಿಸಿ ಅಧ್ಯಕ್ಷನಾಗಿರೋದು ನಾಮಕಾವಾಸ್ಥೆ, ಕಾರುಬಾರೆಲ್ಲ ಸೋನಿಯ, ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿಯವರದ್ದು ಎಂದು ಕಾರಜೋಳ ಗಂಭೀರ ಆರೋಪ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ಸಂಸದ ಪಿ.ಸಿ. ಮೋಹನ್, ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಶಾಸಕ ಎಸ್. ರಘು, ಮಾಜಿ ಸಂಸದ ಎಸ್. ಮುನಿಸ್ವಾಮಿ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ಶಾಸಕ ಸಿಮೆಂಟ್ ಮಂಜುನಾಥ್ , ಬೆಂಗಳೂರಿನ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರುಗಳು , ಭೀಮ ಹೆಜ್ಜೆ ರಾಜ್ಯ ಸಂಚಾಲಕರು ಮತ್ತು ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ ಮತ್ತು ಮುಖಂಡರುಗಳು ಉಪಸ್ಥಿತರಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು